ಹಾಸನ

ಎಸ್‌ಐ ವರ್ಗಾವಣೆ ರದ್ದತಿಗೆ ಆಗ್ರಹ

Published On :

ಹೊಳೆನರಸೀಪುರ: ಇಲ್ಲಿನ ಪಟ್ಟಣ ಠಾಣೆಯ ಪಿಎಸ್ಸೈ ಆಗಿದ್ದ ಶಿವಕುಮಾರ್ ವರ್ಗಾವಣೆ ರದ್ದುಗೊಳಿಸುವಂತೆ ಆಗ್ರಹಿಸಿ ಪಟ್ಟಣದಲ್ಲಿ ವಿವಿಧ ಸಂಘಟನೆಗಳು ಸೋಮವಾರ ಪ್ರತಿಭಟನೆ ನಡೆಸಿದವು
ಪಟ್ಟಣದ ಬಸ್ ನಿಲ್ದಾಣ ವೃತ್ತದಿಂದ ಮೆರವಣಿಗೆಯಲ್ಲಿ ಹೊರಟ ವಿವಿಧ ಸಂಘಟನೆಗಳ ಕಾರ್ಯಕರ್ತರು ಗಾಂಧಿ ವೃತ್ತದಲ್ಲಿ ಕೆಲ ಕಾಲ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿದರು. ನಂತರ ತಾಲೂಕು ಕಚೇರಿಗೆ ತೆರಳಿ ತಹಸೀಲ್ದಾರ್ ರಾಘವೇಂದ್ರರಿಗೆ ಮನವಿ ಸಲ್ಲಿಸಿದರು. ಪಟ್ಟಣದಲ್ಲಿ ಅನೈತಿಕ ಚಟುವಟಿಕೆ, ಗೂಂಡಾಗಿರಿ, ಮರಳು ದಂಧೆ ಮುಂತಾದ ಸಮಸ್ಯೆಗಳನ್ನು ಬಗೆಹರಿಸಿದ್ದ ನಗರ ಠಾಣೆ ಪಿಎಸ್ಸೈ ಶಿವಕುಮಾರ್ ಅವರನ್ನು ನಗರ ಠಾಣೆಯಲ್ಲಿಯೇ ಮುಂದುವರೆಸುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದವು. ಪಿಎಸ್ಸೈ ಶಿವಕುಮಾರ್ ಸೇವೆ ಪಟ್ಟಣಕ್ಕೆ ಅಗತ್ಯವಿದ್ದು, ರಾಜ್ಯ ಸರ್ಕಾರ ಮನವಿಯನ್ನು ಪರಿಗಣಿಸಿ ಶಿವಕುಮಾರ್ ವರ್ಗಾವಣೆ ರದ್ದತಿಗೆ ಆಗ್ರಹಿಸಿದವು. ನೇತೃತ್ವವನ್ನು ಸ್ವಾಮಿ ವಿವೇಕಾನಂದ ಯುವ ವೇದಿಕೆ ಅಧ್ಯಕ್ಷ ರೆಹಮಾನ್, ಕಾರ್ಮಿಕರ ಸಂಘ, ಸಿದ್ದಾರ್ಥ ನಗರ ಸಂಘಟನೆ, ಗಾಂಧಿ ಯುವಕರ ಸಂಘ ,ಎಬಿವಿಪಿ ಕಾರ್ಯಕರ್ತರು ವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.