ಹಾಸನ

ಕಣದಹಳ್ಳಿ ರಸ್ತೆ ದುರಸ್ತಿಗಾಗಿ ರಸ್ತೆತಡೆ

Published On :

ಆಲೂರು: ಕಣದಹಳ್ಳಿ ಮತ್ತು ನಲ್ಲೂರು ಮಗ್ಗೆ ರಸ್ತೆಯನ್ನು ಶೀಘ್ರ ದುರಸ್ತಿಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ಸಮರ ಸೇನೆಯ ಕಾರ್ಯಕರ್ತರು ಸೋಮವಾರ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.
ಈ ರಸ್ತೆ ಹದಗೆಟ್ಟು ಹಲವು ವರ್ಷಗಳೇ ಕಳೆದಿದ್ದು, ಈ ಬಗ್ಗೆ ಯಾರೂ ಗಮನ ಹರಿಸುತ್ತಿಲ್ಲ. ಇದರಿಂದ ಸಾರ್ವಜನಿಕರಿಗೆ ಮತ್ತು ಶಾಲಾ ಮಕ್ಕಳಿಗೆ ತೀವ್ರ ತೊಂದರೆಯಾಗಿದೆ. ಸಾರಿಗೆ ಬಸ್ಸುಗಳು ರಸ್ತೆ ಸರಿ ಇಲ್ಲದ ಕಾರಣ ಸರಿಯಾಗಿ ಗ್ರಾಮಗಳಿಗೆ ಬರುತ್ತಿಲ್ಲ ಹಾಗೂ ಹಳೇಪಾಳ್ಯ ಸೇತುವೆಯು ಶಿಥಿಲಗೊಂಡಿದೆ. ಅಧಿಕಾರಿಗಳು, ಸ್ಥಳೀಯ ಶಾಸಕರು ರಸ್ತೆಯನ್ನು ಅಗಲೀಕರಣ ಮಾಡಿ ಹದಗೆಟ್ಟ ರಸ್ತೆಯನ್ನು ದುರಸ್ತಿಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಡಬೇಕು ಇಲ್ಲವಾದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ತಾಲೂಕು ಅಧ್ಯಕ್ಷ ರತೀಶ್ ಗೌಡ ಹಾಗೂ ಸಂಘಟನೆಯ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ಶೀಘ್ರದಲ್ಲೇ ಕಾಮಗಾರಿ ಆರಂಭ: ಈ ಸಂಬಂಧವಾಗಿ ಪತ್ರಿಕೆಯೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಶಾಸಕ ಎಚ್.ಕೆ.ಕುಮಾರ ಸ್ವಾಮಿ, ಈಗಾಗಲೇ ಈ ರಸ್ತೆ  ನಿರ್ಮಾಣಕ್ಕಾಗಿ ಲೋಕಸಭಾ ಸದಸ್ಯರಾದ ದೇವೇಗೌಡರ ಅನುದಾನದಿಂದ ರು.s 3 ಕೋಟಿ ಬಿಡುಗಡೆಯಾಗಿದ್ದು, ಟೆಂಡರ್ ಪ್ರಕ್ರಿಯೆ ಈಗಾಗಲೇ ಮುಗಿದಿದೆ. ದೇವೇಗೌಡರೇ ಖುದ್ದಾಗಿ ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ. ಶೀಘ್ರ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.