ಮಣ್ಣು ಪರೀಕ್ಷಿಸಿ, ಫಲವತ್ತತೆ ಕಾಪಾಡಿ
ಹಾಸನ: ರೈತರು ಮಣ್ಣು ಪರೀಕ್ಷೆಯನ್ನು ಮಾಡಿಸಿ ಮಣ್ಣು ಪರೀಕ್ಷೆ ಆಧಾರಿತ ರಸಗೊಬ್ಬರಗಳನ್ನು ಹಾಕುವುದರ ಜೊತೆಗೆ ಸಾವಯವ ಗೊಬ್ಬರಗಳನ್ನು ಹೆಚ್ಚಾಗಿ ಬಳಸುವುದರಿಂದ ಮಣ್ಣಿನ ಜೈವಿಕ ಫಲವತ್ತತೆ, ರಾಸಾಯನಿಕ ಫಲವತ್ತತೆ ಹಾಗೂ ಭೌತಿಕ ಫಲವತ್ತತೆಯನ್ನು ಕಾಪಾಡಲು ಸಹಕಾರಿಯಾಗುತ್ತದೆ ಎಂದು ಕಂದಲಿ ಕೃಷಿ ವಿಜ್ಞಾನ ಕೇಂದ್ರದ ಮಣ್ಣು ವಿಜ್ಞಾನಿ ಡಾ. ಚನ್ನಕೇಶವ ತಿಳಿಸಿದರು.
ಕಂದಲಿ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಇತ್ತೀಚೆಗೆ ಹಾಸನ ತಾಲೂಕಿನ ದುದ್ದ ಹೋಬಳಿಯ ಚೌರಿಕೊಪ್ಪಲಿನಲ್ಲಿ ಹಮ್ಮಿಕೊಂಡಿದ್ದ ಮಣ್ಣು ಪರೀಕ್ಷೆ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಸಾಯನಿಕ ಗೊಬ್ಬರಗಳ ಬಳಕೆ ಪ್ರಮಾಣವನ್ನು ಕಡಿಮೆ ಮಾಡಬಹುದು ಎಂದು ತಿಳಿಸಿದರು.
ಕೃಷಿ ಜೊತೆ ಹೈನುಗಾರಿಕೆ ಮಾಡಿ: ಕಂದಲಿ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಬಿ.ಎಸ್. ಬಸವರಾಜು ರೈತರನ್ನು ಉದ್ದೇಶಿಸಿ ಮಾತನಾಡುತ್ತಾ, ಕೃಷಿ ಜೊತೆಗೆ ಹೈನುಗಾರಿಕೆ, ಕುರಿ ಮತ್ತು ಕೋಳಿ ಸಾಕಾಣಿಕೆ ಹಾಗೂ ಹಂದಿ ಸಾಕಾಣಿಕೆಯನ್ನು ಮಾಡಿ ನಿರಂತರ ಆದಾಯದೊಂದಿಗೆ ಆರ್ಥಿಕವಾಗಿ ಸಬಲರಾಗಬೇಕು ಎಂದರು. ತೋಟಗಾರಿಕೆ ತಜ್ಞ ಡಾ. ಟಿ. ಎಸ್.ಮಂಜುನಾಥಸ್ವಾಮಿ, ಕಾರೆಕೆರೆ ಕೃಷಿ ಕಾಲೇಜಿನ ಸಹ ಪ್ರಾಧ್ಯಾಪಕ ಡಾ ಬೈರಪ್ಪ, ಚೌರಿ ಕೊಪ್ಪಲು ಗ್ರಾಮದ ಸಮಸ್ತ ರೈತರು ಮಣ್ಣು ಪರೀಕ್ಷೆ ಮತ್ತು ಅದರ ಮಹತ್ವದ ಬಗ್ಗೆ ಮಾಹಿತಿ ಪಡೆದರು.
ಪರಿಶ್ರಮದಿಂದ ಯಶಸ್ಸು ಸಾಧ್ಯ
ಅರಕಲಗೂಡು: ಗ್ರಾಮೀಣ ವಿದ್ಯಾರ್ಥಿಗಳು ಸ್ವಯಂ ಸ್ಫೂರ್ತಿಯಿಂದ ಪರಿಶ್ರಮ ಮೈಗೂಡಿಸಿ ಕೊಂಡು ಉತ್ತಮ ಶಿಕ್ಷಣ ಪಡೆಯಲು ಆದ್ಯತೆ ನೀಡಿದರೆ ಮಾತ್ರ ಭವಿಷ್ಯದಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಜಂಟಿ ಕಾರ್ಯದರ್ಶಿ ಅರಕಲಗೂಡು ಜಯಕುಮಾರ್ ಹೇಳಿದರು.
ಪಟ್ಟಣದ ಬಿಜಿಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಸಾಧಕರಿಗೆ ಸನ್ಮಾನ ಮತ್ತು ಫ್ರೆಶರ್ಸ್ ಡೇ ಕಾರ್ಯಕ್ರಮ ಉದ್ಘಾಟಿಸಿ, ಗ್ರಾಮೀಣ ವಿದ್ಯಾರ್ಥಿಗಳು ದಿನನಿತ್ಯ ಶಿಸ್ತು, ಸಂಯಮ ಪಾಲಿಸುವ ಮೂಲಕ ಓದಿನತ್ತ ಗಮನ ಹರಿಸಿದರೆ ಮಾತ್ರ ನಗರ ಪ್ರದೇಶದ ವಿದ್ಯಾರ್ಥಿಗಳನ್ನು ಹಿಂದಿಕ್ಕಿ ಗುರಿ ಸಾಧನೆ ಮಾಡಲು ಸಾಧ್ಯ ಎಂದು ಕಿವಿಮಾತು ಹೇಳಿದರು. ಪ್ರಾಂಶುಪಾಲ ಮಹೇಶ್, ಪ್ರೌಢಶಾಲಾ ಶಿಕ್ಷಕ ರಾಜೇಂದ್ರ ಮಾತನಾಡಿದರು. ಕಳೆದ ಸಾಲಿನಲ್ಲಿ ಕಾಲೇಜಿನಲ್ಲಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದಲ್ಲಿ ಅತ್ಯಧಿಕ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

