ಹಾಸನ

ಕಾಚೇನಹಳ್ಳಿ ಏತ ನೀರಾವರಿ ಯೋಜನೆ ಪೂರ್ಣಕ್ಕೆ ಕ್ರಮ

Published On :

ಹಾಸನ: ಚನ್ನರಾಯಪಟ್ಟಣ ತಾಲೂಕಿನ ಕಾಚೇನಹಳ್ಳಿ ಏತ ನೀರಾವರಿ ಯೋಜನೆಯ ಕಾಮಗಾರಿಗಳನ್ನು 1992-93 ರಲ್ಲಿ ಪ್ರಾರಂಭಿಸಲಾಗಿದ್ದು, ಜ. 2014ರ ಅಂತ್ಯದವರೆಗೆ  ರು. 61.33 ಕೋಟಿ ವೆಚ್ಚವಾಗಿದೆ ಎಂದು ಜಲಸಂಪನ್ಮೂಲ ಸಚಿವ   ಎಂ.ಬಿ. ಪಾಟೀಲ್ ತಿಳಿಸಿದರು.
 ವಿಧಾನಪರಿಷತ್ ಸದಸ್ಯ ಪಟೇಲ್ ಶಿವರಾಂ ವಿಧಾನಪರಿಷತ್ನಲ್ಲಿ ಕೇಳಲಾದ ಪ್ರಶ್ನೆಗೆ ಉತ್ತರಿಸಿ, ಕಾಚೇನಹಳ್ಳಿ ಏತ ನೀರಾವರಿ ಯೋಜನೆಯನ್ನು ಚನ್ನರಾಯಪಟ್ಟಣ ತಾಲೂಕಿನ ಕಾಚೇನಹಳ್ಳಿ ಗ್ರಾಮದ ಸಮೀಪ ಹೇಮಾವತಿ ನದಿಯಿಂದ 0.73 ಟಿ.ಎಂ.ಸಿ ನೀರನ್ನು ಮೂರು ಹಂತಗಳಲ್ಲಿ ಎತ್ತಿ 12,600 ಎಕರೆ (510 ಹೆಕ್ಟೇರ್) ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲು ಯೋಜಿಸಲಾಗಿದೆ ಎಂದು ಹೇಳಿದರು.   ಮೊದಲನೇ ಹಂತದ ಕಾಮಗಾರಿ ವಿದ್ಯುತ್ ಸಂಪರ್ಕ ಹೊರತುಪಡಿಸಿ ಪೂರ್ಣಗೊಂಡಿರುತ್ತದೆ. ಎರಡನೇ ಹಂತದ ಕಾಮಗಾರಿ ಪ್ರಗತಿಯಲ್ಲಿರುತ್ತದೆ. ಮೂರನೇ ಹಂತದ ಕಾಮಗಾರಿಗಳನ್ನು ಕೈಗೊಂಡಿರುವುದಿಲ್ಲ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.