'ಶಿಸ್ತು ಬದ್ಧ ಬದುಕಿಗೆ ಎನ್ನೆಸ್ಸೆಸ್ ಸಹಕಾರಿ'
ಅರಸೀಕೆರೆ: ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳು ವಿದ್ಯಾರ್ಥಿ ಜೀವನದಲ್ಲಿ ತನ್ನದೇ ಆದ ಬೆಳಕು ನೀಡಿ, ಶಿಸ್ತು, ಸಂಯಮ, ಸಹ ಜೀವನ, ಸಹಬಾಳ್ವೆ, ಸಾಮಾಜಿಕ ಹಿತಚಿಂತನೆ ಗುಣಗಳನ್ನು ಬೆಳಸಿಕೊಳ್ಳಲು ಸದಾವಕಾಶ ಕಲ್ಪಿಸಿ ಸಾಮಾಜಿಕ ಬದುಕನ್ನು ರೂಪಿಸಿಕೊಳ್ಳಲು ಸಹಕಾರಿಯಾಗಿದೆ ಎಂದು ಶಾಸಕ ಕೆ.ಎಂ ಶಿವಲಿಂಗೇಗೌಡ ಅಭಿಪ್ರಾಯಪಟ್ಟರು.
ಪಟ್ಟಣ ಹೊರವಲಯದ ಕಸ್ತೂರಬಾ ಟ್ರಸ್ಟ್ ಆವರಣದಲ್ಲಿ ಮೈಸೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಬೆಂಗಳೂರು, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಸಂಯುಕ್ತಾಶ್ರಯದಲ್ಲಿ ಭಾನುವಾರ ನಡೆದ ರಾಷ್ಟ್ರೀಯ ಸೇವಾ ಯೋಜನೆಯ ಅಂತರ ಕಾಲೇಜು ವಾರ್ಷಿಕ ಶಿಬಿರ ಉದ್ಘಾಟಿಸಿ ಮಾತನಾಡಿದರು.
ನಿವೃತ್ತ ಐಎಎಸ್ ಅಧಿಕಾರಿ ಎಂ.ಕೆ ಶಂಕರಲಿಂಗೇಗೌಡ ಮಾತನಾಡಿ, ಇಂದಿನ ಯುವ ಜನಾಂಗ ರಾಜಕೀಯ ನಾಯಕರ ಹಿಂಬಾಲಕರಾಗದೆ ಸಮರ್ಥ ನಾಯಕತ್ವದ ಗುಣಗಳನ್ನು ಮೈಗೂಡಿಸಿಕೊಂಡು ತಾವೇ ನಾಯಕರಾಗಿ ಪ್ರಯತ್ನಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ಡಾ.ಹೊ. ಶ್ರೀನಿವಾಸಯ್ಯ, ಗಾಂಧಿ ಪ್ರತಿಷ್ಠಾನಅಧ್ಯಕ್ಷ, ಡಾ.ವೂಡೇ.ಪಿ.ಕೃಷ್ಣ, ಕಸ್ತೂರಬಾ ಸ್ಮಾರಕ ಟ್ರಸ್ಟ್ ಪದಾಧಿಕಾರಿ ಸರೋಜತುಳಸಿದಾಸ್ ಮತ್ತಿತರರು ಮಾತನಾಡಿದರು.
ರಾಮಯ್ಯ ಎಜುಕೇಷನ್ ಟ್ರಸ್ಟ್ ವ್ಯವಸ್ಥಾಪಕ ನಿರ್ದೇಶಕ ಆರ್.ಅನಂತ್‌ಕುಮಾರ್, ಉದ್ಯಮಿ ಅರುಣ್‌ಕುಮಾರ್, ಎನ್‌ಎಸ್‌ಎಸ್ ಅಧಿಕಾರಿ ಕಾಳಚನ್ನೇಗೌಡ, ಕರಾಮಸಂ ಮಂಡಳಿ ಕಾರ್ಯದರ್ಶಿ ಚಂದ್ರ ಮೌಳೇಶ್ವರಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು. ಚಾಮರಾಜನಗರ, ಮೈಸೂರು, ಮಂಡ್ಯ ಹಾಗೂ ಹಾಸನದ ಸುಮಾರು 136 ಎನ್‌ಎಸ್‌ಎಸ್ ಘಟಕಗಳ 300 ಮಂದಿ ಶಿಬಿರಾರ್ಥಿಗಳು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

