'ವೃತ್ತಿ ಕೌಶಲ್ಯದಿಂದ ಆರ್ಥಿಕ ಸ್ಥಿತಿ ವೃದ್ಧಿ'
ಅರಸೀಕೆರೆ: ಪುರುಷರಿಗೆ ಸರಿಸಮಾನವಾಗಿ ಎಲ್ಲಾ ಕ್ಷೇತ್ರದಲ್ಲಿ ಮಹಿಳೆಯರು ಸ್ಪರ್ಧೆ ನೀಡುತ್ತಿದ್ದು, ಈ ನಿಟ್ಟಿನಲ್ಲಿ ನೀರೆಯರು ಸ್ವಾವಲಂಬಿಗಳಾಗಿ ತಮ್ಮ ಕುಟುಂಬದ ಆರ್ಥಿಕ ಸುಧಾರಣೆಗೆ ವೃತ್ತಿ ಕೌಶಲ್ಯ ಶಿಕ್ಷಣವನ್ನು ಕಡ್ಡಾಯವಾಗಿ ಕಲಿಯುವುದು ಸೂಕ್ತ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಸಲಹೆ ನೀಡಿದರು.
ಹಾಸನದ ನೆಹರು ಯುವ ಕೇಂದ್ರ ಮತ್ತು ಪಟ್ಟಣದ ರಾಜರಾಜೇಶ್ವರಿ ಮಹಿಳಾ ಹೊಲಿಗೆ ತರಬೇತಿ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಯುವ ಮುಂದಾಳತ್ವ ಹಾಗೂ ಸಮುದಾಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿದರು.
ಜೀವನ ಮಟ್ಟ ದುಬಾರಿ: ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬ ಜೀವನಮಟ್ಟ ಆತ್ಯಂತ ದುಬಾರಿ ಆಗಿದ್ದು, ಕುಟುಂಬದ ನಿರ್ವಹಣೆಗೆ ಮತ್ತು ಮಕ್ಕಳ ವಿದ್ಯಾಬ್ಯಾಸಕ್ಕೆ ಹೆಚ್ಚಿನ ಹಣವನ್ನು ಸಂಪಾದನೆ ಮಾಡಲೇ ಬೇಕಾಗಿದೆ. ಆದ ಕಾರಣ ಮನೆ ಕೆಲಸ ಮಾಡಿಕೊಂಡಿದ್ದ ಮಹಿಳೆಯರು ತಮ್ಮ ಬಿಡುವಿನ ವೇಳೆ ತಾವುಗಳು ಕಲಿತ ವೃತ್ತಿ ಶಿಕ್ಷಣದಲ್ಲಿ ಒಂದಾದ ಹೊಲಿಗೆ ತರಬೇತಿ ಅತ್ಯಂತ ಸಹಾಯವಾಗುತ್ತಿದ್ದು. ಅದರ ಸದುಪಯೋಗವನ್ನು ಎಲ್ಲ ಮಹಿಳೆಯರು ಪಡೆದುಕೊಳ್ಳುವ ಮೂಲಕ ತಮ್ಮ ಕುಟುಂಬದ ಆರ್ಥಿಕ ಸುಧಾರಣೆಗೆ ಮುಂದಾಗಬೇಕೆಂದರು
ಜಿಪಂ ಉಪಾಧ್ಯಕ್ಷ ಬಿಳಿಚೌಡಯ್ಯ, ಮಾಜಿ ಶಾಸಕ ಜಿ.ಎಸ್.ಪರಮೇಶ್ವರಪ್ಪ ಮಾತನಾಡಿದರು. ಪುರಸಭಾ ಸದಸ್ಯ ಮಂಜುನಾಥ್, ಸಂಸ್ಥೆ ಕಾರ್ಯದರ್ಶಿ ಕೆ. ನಾಗರತ್ನಮ್ಮ, ಸುನಿಲ್, ಜಯಶ್ರೀ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

