ಚನ್ನರಾಯಪಟ್ಟಣ ಕುಡಿವ ನೀರು ಪೂರೈಕೆಗೆ ಕ್ರಮ
ಚನ್ನರಾಯಪಟ್ಟಣ: ತಾಲೂಕಿನ ನೂರಕ್ಕೂ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಪ್ರಾರಂಭವಾಗಿದ್ದು, ಅವುಗಳ ನಿವಾರಣೆಗೆ ರಾಜ್ಯ ಸರ್ಕಾರದಿಂದ ರು.60 ಲಕ್ಷ ಹಣ ಬಿಡುಗಡೆಯಾಗಿದೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದರು.
ತಾಪಂ ಕಟ್ಟಡದಲ್ಲಿ ಶಾಸಕರ ಕೊಠಡಿ ಉದ್ಘಾಟನೆ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ತಾಲೂಕಿನಲ್ಲಿ ಕಾಣಿಸಿಕೊಂಡಿರುವ ಕುಡಿವ ನೀರಿನ ಬವಣೆ ನೀಗಿಸಲು 190 ಬೋರ್ವೆಲ್ಗಳನ್ನು ಕೊರೆದಿದ್ದರೂ ಅವುಗಳಲ್ಲಿ ಕೆಲವೇ ಕೆಲವು ಬಾವಿಗಳಲ್ಲಿ ನೀರು ಬಂದಿದ್ದು, ಉಳಿದ ಗ್ರಾಮಗಳಿಗೆ ತಾತ್ಕಾಲಿಕ ನೀರು ಪೂರೈಕೆಗಾಗಿ ರು.60 ಲಕ್ಷ ಹಣವನ್ನು ಸರ್ಕಾರ ತಮ್ಮ ಒತ್ತಡಕ್ಕೆ ಮಣಿದು ಮಂಜೂರು ಮಾಡಿದೆ ಎಂದರು.
ಶಾಶ್ವತ ಕುಡಿವ ನೀರು ನೀಡುವ ಸಲುವಾಗಿ ಬರ ಪರಿಹಾರ ಯೋಜನೆ ಹಾಗೂ ಇನ್ನಿತರೆ ಯೋಜನೆಗಳಿಂದ ತಾಲೂಕಿಗೆ ರು.8ಕೋಟಿ ಅಂದಾಜು ಪಟ್ಟಿ ತಯಾರಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಸರ್ಕಾರ ತುರ್ತಾಗಿ ಹಣವನ್ನು ಬಿಡುಗಡೆ ಮಾಡಬೇಕು ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಕೋರಿದರು.
ತಾಲೂಕಿನಲ್ಲಿ ರಸ್ತೆಗಳ ಅಭಿವೃದ್ಧಿಯೇ ತಮ್ಮ ಗುರಿಯಾಗಿದ್ದು, ಕಾವೇರಿ ನೀರಾವರಿ ನಿಗಮದಿಂದ ರು.10 ಕೋಟಿ ವೆಚ್ಚದಲ್ಲಿ ರಸ್ತೆ ಕಾಮಗಾರಿಗೆ ಟೆಂಡರ್ಕ್ರೆದು ಕಾಮಗಾರಿ ಪ್ರಗತಿಯಲ್ಲಿದ್ದು, ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿಯಲ್ಲಿ ರು. 6.2ಕೋಟಿ ವೆಚ್ಚದಲ್ಲಿ ರಸ್ತೆ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ.
ಇದಲ್ಲದೆ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ರಸ್ತೆ ನಿರ್ಮಾಣ ಕಾರ್ಯವನ್ನು ಕೈ ಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು.
ಕೇಂದ್ರ ಸರ್ಕಾರದ ಸಹಯೋಗ: ತಾಲೂಕಿನಲ್ಲಿ ಅಗತ್ಯವಿರುವ ರಸ್ತೆಗಳ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಸಹಯೋಗದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಜಪಾನ್ ಇಂಟರ್ ನ್ಯಾಷನಲ್ ಕೋ ಆಪರೇಟಿವ್ ಅಸೋಸಿಯೇಷನ್ ವತಿಯಿಂದ, ರು. 25 ಕೋಟಿಗೂ ಅಧಿಕ ವೆಚ್ಚದಲ್ಲಿ 66 ಕಿಮೀ ರಸ್ತೆ ಅಭಿವೃದ್ಧಿ ಪಡಿಸಲು ಪ್ರಸ್ತಾವನೆ ಸಲ್ಲಿಸಿದ್ದು, ಯೋಜನೆಯನ್ನು ಸದ್ಯದಲ್ಲಿಯೇ ಕೈಗೆತ್ತಿಕೊಳ್ಳಲಾಗುವುದು ಎಂದರು.
ಜಿಪಂ ಅಧ್ಯಕ್ಷೆ ಅಂಬಿಕಾ ರಾಮಕೃಷ್ಣ ಮಾತನಾಡಿ, ಜಿಲ್ಲೆಯ ಚನ್ನರಾಯಪಟ್ಟಣ ಹಾಗೂ ಅರಸೀಕೆರೆ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಜಿಲ್ಲಾ ಪಂಚಾಯಿತಿಗೆ ಮಂಜೂರದ ಹೆಚ್ಚು ಹಣವನ್ನು ಎರಡು ತಾಲೂಕುಗಳಿಗೆ ನೀಡಲಾಗುವುದು ಎಂದು ತಿಳಿಸಿದರು.
ತಾಪಂ ಅಧ್ಯಕ್ಷೆ ಹೇಮಾವತಿ, ಉಪಾಧ್ಯಕ್ಷೆ ಶಿಲ್ಪಾಶ್ರೀನಿವಾಸ್, ಮಾಜಿ ಅಧ್ಯಕ್ಷೆ ವಿಜಯಾಶಿವಲಿಂಗಪ್ಪ, ಜಿಪಂ ಸದಸ್ಯ ಶಿವಶಂಕರ್, ತಾಪಂ ಸದಸ್ಯರಾದ ಬಸವರಾಜು, ಮಲ್ಲೇಶ್ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

