'ಸಂಪನ್ಮೂಲ ಸದ್ಬಳಕೆಯಾದಲ್ಲಿ ಭಾರತ ಬಲಿಷ್ಠ'
ಹಾಸನ: ಭಾರತದಲ್ಲಿ ನೈಸರ್ಗಿಕ ಸಂಪನ್ಮೂಲಗಳು ಹೇರಳವಾಗಿದ್ದು, ಇವುಗಳನ್ನು ಸರಿಯಾದ ಮಾರ್ಗದಲ್ಲಿ ಉಪಯೋಗಿಸಿದ್ದಲ್ಲಿ ಭಾರತವು ವಿಶ್ವದ ಬಲಿಷ್ಠ ರಾಷ್ಟ್ರಗಳ ಸಾಲಿನಲ್ಲಿ ನಿಲ್ಲಬಲ್ಲದು ಎಂದು ಸ್ವಾತಂತ್ರ್ಯ ಹೋರಾಟಗಾರ ಎಚ್.ಎಂ ಶಿವಣ್ಣ ಹೇಳಿದರು.
ನೆಹರು ಯುವ ಕೇಂದ್ರ, ವಿವೇಕಾನಂದ ಯುವಕ ಸಂಘ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಆಶ್ರಯದಲ್ಲಿ ನಗರದ ಸ್ಕೌಟ್ಸ್ ಭವನದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಯುವ ಮುಂದಾಳತ್ವ ಹಾಗೂ ಸಮುದಾಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಪ್ರಸ್ತುತ ಭಾರತ ದೇಶದಲ್ಲಿ ಸಂಪನ್ಮೂಲಗಳ ಸದ್ಬಳಕೆಯಾಗದೆ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ. ಇದರಿಂದ ಸಮಾಜದಲ್ಲಿ ಅಸಮತೋಲನ ಹೆಚ್ಚುತ್ತಿದೆ. ಭ್ರಷ್ಟಾಚಾರ ದಿನದಿಂದ ದಿನಕ್ಕೆ ವಿಪರೀತವಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಈ ಎಲ್ಲಾ ಸಮಸ್ಯೆಗಳಿಂದ ಭಾರತವನ್ನು ಮುಕ್ತಗೊಳಿಸುವ ನಿಟ್ಟಿನಲ್ಲಿ ಯುವಜನಾಂಗ ನಿಸ್ವಾರ್ಥ ಮನೋಭಾವದಿಂದ ದೇಶಕ್ಕಾಗಿ ತ್ಯಾಗ ಮಾಡುವಂತಹ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಯುವ ಜನಾಂಗಕ್ಕೆ ಸಲಹೆ ನೀಡಿದರು.ವಿಶ್ವ ಮಾನವ ಒಕ್ಕೂಟದ ಅಧ್ಯಕ್ಷ ಎಚ್.ಎನ್.ರವಿಕುಮಾರ್, ಅನನ್ಯ ಟ್ರಸ್ಟ್ ಅಧ್ಯಕ್ಷೆ ಜಯಶ್ರೀ ಮಾತನಾಡಿದರು.
ಚನ್ನರಾಯಪಟ್ಟಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೋರೇಗೌಡ, ಎನ್.ಡಿ.ಆರ್.ಕೆ ಕಾಲೇಜಿನ ಜಯಣ್ಣ, ಗೈಡ್ಸ್ ಆಯುಕ್ತೆ ಜಯಾ ರಮೇಶ್, ಗೈಡರ್ ರಾಮೇಶ್ವರಿ, ರಾಷ್ಟ್ರೀಯ ಯುವ ದಳದ ಕಾರ್ಯಕರ್ತರಾದ ಚೇತನ್, ದೇವರಾಜು, ವಿವೇಕಾನಂದ ಯುವಕ ಸಂಘದ ಪದಾಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

