ಸ್ಮಾರಕ ಸಂರಕ್ಷಣಾ ಜಾಗೃತಿ ಅಭಿಯಾನ
ಹೊಳೆನರಸೀಪುರ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪರಂಪರಾ ಕೂಟವು ಸ್ಮಾರಕ ಸಂರಕ್ಷಣಾ ಜಾಗೃತಿ ಅಭಿಯಾನ ಕೈಗೊಂಡಿತ್ತು. ಈ ಅಭಿಯಾನದಡಿಯಲ್ಲಿ ಸುಮಾರು 600 ಕಿಮೀ ವ್ಯಾಪ್ತಿಗೆ ಒಳಪಟ್ಟಿರುವ ಕರ್ನಾಟಕದ ನಾನಾ ಸ್ಮಾರಕಗಳನ್ನು ಸಂದರ್ಶಿಸುವುದು ಮತ್ತು ಅವುಗಳ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವುದು ಮುಖ್ಯ ಉದ್ದೇಶವಾಗಿತ್ತು.
ಈ ನಿಟ್ಟಿನಲ್ಲಿ ಸ್ಮಾರಕ ಸಂರಕ್ಷಣಾ ಜಾಗೃತಿ ಅಭಿಯಾನವನ್ನು ಫೆ.26ರಿಂದ ಆರಂಭಿಸಿ 4ದಿನಗಳ ಕಾಲ ರಾಜ್ಯದಲ್ಲಿನ ನಾನಾ ಪಾರಂಪರಿಕ ಐತಿಹಾಸಿಕ ಹಿನ್ನೆಲೆಯುಳ್ಳ ಸ್ಥಳಗಳಿಗೆ ಪರಂಪರಾ ಕುಟದ ವಿದ್ಯಾರ್ಥಿಗಳೊಂದಿಗೆ ತೆರಳಲಾಯಿತು.
ಪರಂಪರಾ ಕೂಟದ ಸಂಚಾಲಕ ಹಾಗೂ ಪ್ರಾಂಶುಪಾಲ ಪ್ರೊ. ಎಂ.ಬಿ ಇರ್ಷಾದ್ ಅಭಿಯಾನಕ್ಕೆ ಚಾಲನೆ ನೀಡಿದರು. ಗಣಿತ ಪ್ರಾಧ್ಯಾಪಕ ಎಂ.ಕೆ ನಟೇಶ್, ಅರ್ಥಶಾಸ್ತ್ರ ಪ್ರಾಧ್ಯಾಪಕ ಡಾ. ಎಸ್.ಕೆ ಭುವನೇಂದ್ರ, ವಿದ್ಯುನ್ಮಾನ ಶಾಸ್ತ್ರದ ಉಪನ್ಯಾಸಕಿ ಅರುಂಧತಿ ಹಾಗೂ ಉಷಾ ಹಾಗೂ ಬಿಎಸ್ಸಿ ವಿದ್ಯಾರ್ಥಿಗಳು ಅಭಿಯಾನದಲ್ಲಿ ಭಾಗವಹಿಸಿದ್ದರು.
ಸ್ಮಾರಕ ಸಂರಕ್ಷಣಾ ಅಭಿಯಾನ ಅಡಿಯಲ್ಲಿ 4 ದಿನಗಳ ಕಾಲ ರಾಜ್ಯದ ಪ್ರಮುಖ ದೇವಾಲಯಗಳಿರುವ ಐಹೊಳೆ, ಬಾದಾಮಿ, ಪಟ್ಟದಕಲ್ಲು, ಬನಶಂಕರಿ, ಮಹಾಕೂಟ, ಕೂಡಲಸಂಗಮ, ಬಿಜಾಪುರ, ಹಂಪಿ, ಚಿತ್ರದುರ್ಗ, ಶಿರಸಿ, ಯಾಣ, ಗೋಕರ್ಣ, ಇಡಗುಂಜಿ, ಮುರಡೇಶ್ವರ, ಆಗುಂಬೆ, ಉಡುಪಿ, ಮಲ್ಪೆ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಕಾರ್ಯಕ್ರಮ ಜರುಗಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

