ಹಾಸನ

ವಿಜ್ಞಾನ ಕ್ಷೇತ್ರದಲ್ಲಿ ಹೊಸ ಆವಿಷ್ಕಾರ ಅಗತ್ಯ: ಕರಿಸಿದ್ದಪ್ಪ ಅಭಿಮತ

Published On :

ಹಾಸನ: ಯುವಕರು ವಿಜ್ಞಾನ ಕ್ಷೇತ್ರದಲ್ಲಿ ಹೊಸ ಹೊಸ ಆವಿಷ್ಕಾರ ಸಾಧಿಸಬೇಕಾದ ಅಗತ್ಯತೆ ಇದೆ ಎಂದು ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲ ಡಾ. ಕರಿಸಿದ್ದಪ್ಪ  ಅಭಿಪ್ರಾಯಪಟ್ಟರು.
ನಗರದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗಣಕಯಂತ್ರ ವಿಭಾಗದ ವತಿಯಿಂದ ಇತ್ತೀಚೆಗೆ ಹಮ್ಮಿಕೊಂಡಿದ್ದ ವಿಜ್ಞಾನ ದಿನಾ
ಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿಜ್ಞಾನ ಕ್ಷೇತ್ರದಲ್ಲಿ ಈಗಾಗಲೇ ಸಾಕಷ್ಟು ಆವಿಷ್ಕಾರಗಳು ಆಗಿದ್ದು, ಯುವಕರು ಇದನ್ನು ಹೊರತು ಪಡಿಸಿ ಏನನ್ನಾದರೂ ಸಾಧನೆ ಮಾಡಬೇಕು ಎಂದು ಹೇಳಿದರು.
ಮನುಷ್ಯ ಇಂದು ವಿಜ್ಞಾನ ಇಲ್ಲದೆ ತಮ್ಮ ಜೀವನ ನಡೆಸಲು ಸಾಧ್ಯವಿಲ್ಲ. ವಿಜ್ಞಾನ ಕ್ಷೇತ್ರದಲ್ಲಿನ ಸಾಧನೆಗಾಗಿ ಇಂದು ಎಲ್ಲಾ ರಾಷ್ರಗಳು ಪೈಪೋಟಿ ನಡೆಸುತ್ತಿದ್ದು, ಭಾರತ ಮುಂದಿನ ಕೆಲವು ವರ್ಷಗಳಲ್ಲಿ ವಿಜ್ಞಾನ ಕ್ಷೇತ್ರದಲ್ಲಿ ಬಲಿಷ್ಠ ರಾಷ್ಟ್ರವಾಗಿ ಬೆಳೆಯಲಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ಎಚ್.ಎನ್. ರೂಪ್‌ರಾಜ್ ಚಂದನ್ ಮಾತನಾಡಿ, ವಿಜ್ಞಾನದ ಮೂಲಕ ಸಮಾಜದಲ್ಲಿ ಇರುವ ಮೂಢನಂಬಿಕೆಯನ್ನು ಹೋಗಲಾಡಿಸಬೇಕು ಎಂದು ತಿಳಿಸಿದರು. ವಿಜ್ಞಾನ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದ ಎಂ.ಪಿ. ನಂದಿನಿ, ಕಾವ್ಯ (ಪ್ರಥಮ), ರಂಜಿತ ಕೆ.ಎಸ್. ರಂಜಿತ ಟ.ವಿ. (ದ್ವಿತೀಯ) ಹಾಗೂ ಪ್ರಿಯ ಎ.ಎಸ್. ಮತ್ತು ಪ್ರೀತಿ (ತೃತೀಯ) ಬಹುಮಾನ ನೀಡಲಾಯಿತು. ಗಣಕಯಂತ್ರ ವಿಭಾಗದ ಮುಖ್ಯಸ್ಥ  ನಾಗೇಂದ್ರನಾಥ್, ಅಧ್ಯಾಪಕ ಮಹಾಬಲೇಶ್ವರ, ನಿತ್ಯಾನಂದ್, ಲೋಕೇಶ್, ಕಿರಣ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.