ಜನತಾ ನ್ಯಾಯಾಲಯದಲ್ಲಿ ವ್ಯಾಜ್ಯ ಶೀಘ್ರ ಇತ್ಯರ್ಥ
ಆಲೂರು: ಜನತಾ ನ್ಯಾಯಾಲಯದ ಮೂಲಕ ನಿಮ್ಮ ವಾಜ್ಯಗಳನ್ನು ಸೌಹಾರ್ಧಯುತವಾಗಿ ಶೀಘ್ರವಾಗಿ ಇತ್ಯರ್ಥಗೊಳಿಸಿಕೊಳ್ಳಬಹುದು ಎಂದು ಜೆಎಂಎಫ್ಸಿನ್ಯಾಯಾಧೀಶ ಮಹೇಶ್ ಬಾಬು ತಿಳಿಸಿದರು.
ತಾಲೂಕು ಜೆಎಂಎಫ್ಸಿ ನ್ಯಾಯಾಲಯದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಲೋಕ ಅದಾಲತ್ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಈವರೆಗೂ ರಾಜಿ ಸಂಧಾನದ ಮೂಲಕ 240 ಪ್ರಕರಣಗಳು ಇತ್ಯರ್ಥ್ಯಗೊಂಡಿದ್ದು, ಜನತಾ ನ್ಯಾಯಾಲಯದಲ್ಲಿ ವಕೀಲರ ಮುಖಾಂತರ ಅಥವಾ ನೇರವಾಗಿ ನೀವೇ ಭಾಗವಹಿಸಬಹುದು. ಇಲ್ಲಿ ಉಭಯ ಪಕ್ಷಗಳವರೂ ರಾಜಿ ಮಾಡಿಕೊಳ್ಳಲು ಮಾರ್ಗದರ್ಶನ ನೀಡಲಾಗುವುದು. ವಾಜ್ಯ ಪೂರ್ವ ಪ್ರಕರಣಗಳನ್ನೂ ಸಹ ರಾಜಿ ಸಂಧಾನದ ಮೂಲಕ ಬಗೆಹರಿಸಲು ಅವಕಾಶ ಕಲ್ಪಿಸಲಾಗಿದ್ದು, ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರು ಪಾವತಿಸಲಾಗುವುದು. ಈ ಜನತಾ ನ್ಯಾಯಾಲಯದ ಮತ್ತೊಂದು ಪ್ರಮುಖ ಅಂಶವೆಂದರೆ ಸೌಹಾರ್ದಯುತವಾಗಿ ಪ್ರಕರಣಗಳು ಇತ್ಯರ್ಥಗೊಳ್ಳವುದರಿಂದ ಬಾಂಧವ್ಯ ಉಳಿದು ವಿವಾದ ಅಂತ್ಯವಾಗುತ್ತದೆ ಎಂದರು. ಈ ಸಂದರ್ಭದಲ್ಲಿ ತಹಸೀಲ್ದಾರ್ ಶಾರದಾಂಬ, ವಕೀಲರ ಸಂಘದ ಅಧ್ಯಕ್ಷ ಮಹೇಂದ್ರ ಹಾಗೂ ವಕೀಲರು ಹಾಜರಿದ್ದರು.
ಮಹಿಳೆಯ ಚಿನ್ನದ ಸರ ಅಪಹರಣ
ಮೈಸೂರು: ರಸ್ತೆ ಬದಿ ನಡೆದು ಹೋಗುತ್ತಿದ್ದ ವೃದ್ಧೆಯ 40 ಗ್ರಾಂ. ಚಿನ್ನದ ಸರವನ್ನು ಬೈಕಿನಲ್ಲಿ ಬಂದ ಇಬ್ಬರು ಅಪಹರಿಸಿಕೊಂಡು ಹೋಗಿರುವ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ಶ್ರೀರಾಂಪುರ ಕಂದಾಯ ಬಡಾವಣೆ ನಿವಾಸಿ ಕೇಶವನಾರಾಯಣ ಎಂಬವರ ಪತ್ನಿ ಹಾಗೂ ನಿವೃತ್ತ ಮುಖ್ಯಶಿಕ್ಷಕಿ ನಾಗಮ್ಮ (75) ಸರ ಕಳೆದುಕೊಂಡವರು. ಇವರು ಬೆಮಲ್ ಬಡವಾಣೆಯ ಲಿಂಗಾಬೂದಿ ಪಾಳ್ಯದ ರಸ್ತೆಯಲ್ಲಿ ಹೋಗುತ್ತಿದ್ದಾಗ ಬೈಕಿನಲ್ಲಿ ಬಂದವರು ಸರ ಎಗರಿಸಿಕೊಂಡು ಹೋಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

