ಮೀಸಲಾತಿ ಕೊರತೆಯಿಂದ ಕ್ರೀಡಾಸಕ್ತಿ ಕ್ಷೀಣ
ಚನ್ನರಾಯಪಟ್ಟಣ: ಕ್ರೀಡಾ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡದ ಕಾರಣ ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ ಕ್ಷೀಣಿಸುತ್ತಿದೆ ಎಂದು ಅಂತಾರಾಷ್ಟ್ರೀಯ ವಾಲಿಬಾಲ್ ಕ್ರೀಡಾಪಟು ಪೃಥ್ವಿರಾಜ್ ತಿಳಿಸಿದರು.
ತಾಲೂಕಿನ ಶ್ರವಣಬೆಳಗೊಳದ ಬಾಹುಬಲಿ ತಾಂತ್ರಿಕ ವಿದ್ಯಾಲಯದಲ್ಲಿ ಏರ್ಪಡಿಸಿದ್ದ ರಾಜ್ಯ ಮಟ್ಟದ ತಾಂತ್ರಿಕ ವಿದ್ಯಾರ್ಥಿನಿಯರ ವಾಲಿಬಾಲ್ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ಉನ್ನತ ಶಿಕ್ಷಣ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಕ್ರೀಡಾ ಸಾಧನೆಯನ್ನು ಗುರುತಿಸಿ ಉದ್ಯೋಗದಲ್ಲಿ ಮೀಸಲಾತಿ ನೀಡಿದ ಕಾರಣ ವಿದ್ಯಾರ್ಥಿಗಳು ಕ್ರೀಡೆಯನ್ನು ಮರೆತು ಶಿಕ್ಷಣಕ್ಕೆ ಆದ್ಯತೆ ನೀಡುತ್ತಿದ್ದಾರೆ ಎಂದು ತಿಳಿಸಿದರು.
ಕ್ರೀಡೆಗೆ ಆದ್ಯತೆ: ಉನ್ನತ ಶಿಕ್ಷಣ ವಿದ್ಯಾರ್ಥಿಗಳ ಮನೋವಿಕಾಸಕ್ಕೆ ಕನಿಷ್ಠ ಒಂದು ಗಂಟೆಯಾದರೂ ಕ್ರೀಡೆ ಅತ್ಯವಶ್ಯಕವಾಗಿದೆ. ಆದರೆ, ಶಿಕ್ಷಣದ ಸಾಧನೆಗಾಗಿ ತಮ್ಮ ಮನಸ್ಸಿನ ಉಲ್ಲಾಸತೆಯನ್ನು ಕಳೆದುಕೊಳ್ಳುತ್ತಿರುವ ವಿದ್ಯಾರ್ಥಿಗಳು ಕ್ರೀಡೆಯನ್ನು ನಿರ್ಲಕ್ಷಿಸುತ್ತಿದ್ದು, ಉದ್ಯೋಗದಲ್ಲಿ ಮೀಸಲಾತಿ ನೀಡಿದರೆ ಶಿಕ್ಷಣದ ಜತೆಗೆ ಕ್ರೀಡೆಗೂ ಆದ್ಯತೆ ನೀಡುತ್ತಾರೆ.
ಸೌಲಭ್ಯಕ್ಕೆ ಮುಂದಾಗಬೇಕು: ವಿದ್ಯಾರ್ಥಿಗಳ ಮನೋವಿಕಾಸಕ್ಕೆ ಕ್ರೀಡೆ ಅತಿ ಮುಖ್ಯವಾಗಿದ್ದು, ಸರ್ಕಾರ ಈ ನಿಟ್ಟಿನಲ್ಲಿ ಚಿಂತಿಸಿ, ವಿದ್ಯಾರ್ಥಿಗಳಿಗೆ ಕ್ರೀಡೆಯಲ್ಲಿ ಭಾಗವಹಿಸಲು ಪ್ರೋತ್ಸಾಹ ನೀಡಬೇಕು. ಕ್ರೀಡೆಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳಿಗೆ ಉಚಿತವಾಗಿ ಚಿಕಿತ್ಸೆ ನೀಡುವ ಸೌಲಭ್ಯವನ್ನು ಸರ್ಕಾರ ನೀಡುವತ್ತ ಮುಂದಾಗಬೇಕು ಎಂದು ತಿಳಿಸಿದರು.
ಚಿಂತನೆ ನಡೆಸಬೇಕು: ಪೋಷಕರು ತಮ್ಮ ಮಕ್ಕಳನ್ನು ಕೇವಲ ಶಿಕ್ಷಣದಲ್ಲಿ ತೊಡಗಿಸಿಕೊಳ್ಳಬೇಕೆಂಬ ಹಂಬಲವಿಟ್ಟುಕೊಂಡಿರುವುದರಿಂದ ಮಕ್ಕಳ ಮನೋವಿಕಾಸದ ಮೇಲೆ ದುಷ್ಪರಿಣಾಮ ಬೀರುತ್ತಿದ್ದು, ಈ ಬಗ್ಗೆ ಪೋಷಕರು ಚಿಂತನೆ ನಡೆಸಬೇಕು ಎಂದು ತಿಳಿಸಿದರು.
ಅಭಿವೃದ್ಧಿ ಕಾಣಬಹುದು: ಬಾಹುಬಲಿ ತಾಂತ್ರಿಕ ಕಾಲೇಜು ಶೈಕ್ಷಣಾಧಿಕಾರಿ ಗೊಮಟೇಶ ರಾವಣನವರ ಮಾತನಾಡಿ, ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಮನೋವಿಕಾಸಗೊಂಡು ಶೈಕ್ಷಣಿಕವಾಗಿ ಅಭಿವೃದ್ಧಿ ಕಾಣಬಹುದಾಗಿದೆ ಎಂದು ತಿಳಿಸಿದರು.
ಬೆಂಗಳೂರು ನಗರ ಹೊರತುಪಡಿಸಿ ರಾಜ್ಯದಾದ್ಯಂತ 20 ಕಾಲೇಜುಗಳಿಂದ ವಿದ್ಯಾರ್ಥಿನಿಯರು ಕ್ರೀಡೆಯಲ್ಲಿ ಭಾಗವಹಿಸಿದ್ದು, ಕಾಲೇಜು ವತಿಯಿಂದ 2001ರಿಂದ ಹಲವು ಕ್ರೀಡೆಗಳನ್ನು ಪ್ರತಿ ವರ್ಷವೂ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಪ್ರಾಂಶುಪಾಲ ರಾಮೇಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

