ಹಾಸನ

ವಿದ್ಯಾರ್ಥಿ ಜೀವನ ಅಮೂಲ್ಯ

Published On :

ಹಾಸನ: ವಿದ್ಯಾರ್ಥಿ ಜೀವನ ಅಮೂಲ್ಯವಾಗಿದ್ದು, ಸಮರ್ಪಕವಾಗಿ ಉಪಯೋಗಿಸಿಕೊಳ್ಳುವಂತೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಬಿ.ಎನ್. ರಾಮಸ್ವಾಮಿ ಸಲಹೆ ನೀಡಿದರು.
ನಗರದ ಡೈರಿ ವೃತ್ತ, ಸರ್ಕಾರಿ ಶ್ರೀಮತಿ ಎಲ್.ವಿ. ಪಾಲಿಟೆಕ್ನಿಕ್ ಕಾಲೇಜ್ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕತಿ ಇಲಾಖೆ ಹಾಗೂ ಕಾಲೇಜಿನ ಆಶ್ರಯದಲ್ಲಿ  ಇತ್ತೀಚೆಗೆ ಏರ್ಪಡಿಸಲಾಗಿದ್ದ ಯುವ ಸೌರಭ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಯ ಜೀವನದಲ್ಲಿ ಪ್ರತಿ ಸಮಯವೂ ಅಮೂಲ್ಯ ಎಂದು ಕಿವಿಮಾತು ಹೇಳಿದರು.
ವಿದ್ಯಾರ್ಥಿಗಳು ಪಠ್ಯ ಚಟುವಟಿಕೆ ಜೊತೆಯಲ್ಲೇ ಇತರೆ ಕ್ರೀಡಾಸಕ್ತಿ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೂ ಒತ್ತು ನೀಡುವಂತೆ ಕರೆ ನೀಡಿದರು.
ಕಾರ್ಯಕ್ರಮದ ನಂತರ ದೇಶ ಭಕ್ತಿ ಬೀರುವ ಹಾಗೂ ಜಾನಪದ ಗೀತೆಯನ್ನು ಹಾಡಿ ರಂಜಿಸಿದರು. ಇದೇ ವೇಳೆ ಸರ್ಕಾರಿ ಶ್ರೀಮತಿ ಎಲ್.ವಿ. ಪಾಲಿಟೆಕ್ನಿಕ್ ಕಾಲೇಜ್ ಪ್ರಾಂಶುಪಾಲ ನಟರಾಜ್, ವಚನ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ನಾಯಕರಹಳ್ಳಿ ಮಂಜೇಗೌಡ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷರಾದ ಮೇಜರ್ ವೆಂಕಟೇಶ್, ಗಂಜೇನಹಳ್ಳಿ ಗೋಪಾಲ್ ಇತರರು ಇದ್ದರು.

ರೈತರಿಗೆ ವಿಶೇಷ ಕಾರ್ಯಾಗಾರ
ಮೈಸೂರು:
ಮೈಸೂರು ವಿವಿಯ ಸಸ್ಯಶಾಸ್ತ್ರ ಅಧ್ಯಯನ ವಿಭಾಗದ ಸಸ್ಯಾರೋಗ ಕೇಂದ್ರದಲ್ಲಿ ಮಾ.17ರಂದು ರೈತರೊಂದಿಗೆ ಒಂದು ದಿನ ಕಾರ್ಯಾಗಾರ ಆಯೋಜಿಸಿದೆ. ಆಸಕ್ತ ರೈತರು ಹೆಚ್ಚಿನ ಮಾಹಿತಿಗಾಗಿ ಪ್ರೊ.ಜಿ.ಆರ್. ಜನಾರ್ಧನ ದೂ. 0821-2419763 ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.