'ಭೂಮಿಯ ಫಲವತ್ತತೆ ಕಾಪಾಡಿಕೊಳ್ಳಬೇಕು'
ಜಾವಗಲ್: ರೈತರು ಕೃಷಿಯೊಂದಿಗೆ ಅರಣ್ಯೀಕರಣಕ್ಕೂ ಒತ್ತು ನೀಡಿ ಭೂಮಿಯ ಫಲವತ್ತತೆಯನ್ನು ಕಾಪಾಡಿಕೊಳ್ಳುವ ಅಗತ್ಯವಿದೆ ಎಂದು ಅರಸೀಕೆರೆ ಸಾಮಾಜಿಕ ಅರಣ್ಯವಲಯದ ಉಪವಲಯ ಅರಣ್ಯಾಧಿಕಾರಿ ಕೃಷ್ಣೇಗೌಡ ತಿಳಿಸಿದರು.
ಜಾವಗಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕವು ಹಂದ್ರಾಳು ಗ್ರಾಮದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ವಾರ್ಷಿಕ ವಿಶೇಷ ಶಿಬಿರದಲ್ಲಿ ಸಾಮಾಜಿಕ ಅರಣ್ಯ ಸಂರಕ್ಷಣೆಯಲ್ಲಿ ರೈತರ ಪಾತ್ರ ಎಂಬ ವಿಷಯ ಕುರಿತು ಉಪನ್ಯಾಸ ನೀಡಿದ ಅವರು, ಸಾಮಾಜಿಕ ಅರಣ್ಯದ ಕಲ್ಪನೆ, ಪ್ರಾಮುಖ್ಯತೆ ಹಾಗೂ ಅಗತ್ಯತೆ ಮತ್ತು ರೈತರಿಗೆ ಆಗುವ ಉಪಯೋಗಗಳ ಬಗ್ಗೆ ಮಾಹಿತಿ ನೀಡಿದರು.
ಫ್ಲೋರೈಡ್ ಮುಕ್ತವಾಗಿಸಿ: ರೈತರು ತಮ್ಮ ಜಮೀನುಗಳಲ್ಲಿ ಹೆಚ್ಚು ಹೆಚ್ಚು ಸಸಿಗಳನ್ನು ಅರಣ್ಯ ಇಲಾಖೆಯಿಂದ ಪಡೆದು ತಮ್ಮ ಜಮೀನಿನಲ್ಲಿ ನೆಟ್ಟು ಪೋಷಿಸಬೇಕು.
ಇದರಿಂದ ಫ್ಲೋರೈಡ್ ಮುಕ್ತ ಪ್ರದೇಶವನ್ನಾಗಿ ಮಾಡಿಕೊಂಡು ಅಧಿಕ ಇಳುವರಿ ಪಡೆಯಬಹುದಾಗಿದೆ ಎಂದರು.
ರೈತರು ಕೃಷಿಯೊಂದಿಗೆ ಅರಣ್ಯೀಕರಣಕ್ಕೂ ಒತ್ತು ನೀಡುವುದರಿಂದ ನೈಸರ್ಗಿಕ ವಿಕೋಪಗಳು ಹಾಗೂ ಬರ ಪರಿಸ್ಥಿತಿಯನ್ನು ತಡೆದು ಮುಂದಿನ ಪೀಳಿಗೆಗೆ ಮಾಲಿನ್ಯರಹಿತ ಪ್ರಕೃತಿಯನ್ನು ಉಡುಗೊರೆಯಾಗಿ ನೀಡಬೇಕೆಂದು ಮನವಿ ಮಾಡಿದರು. ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಹೆಚ್.ಎಸ್. ಬಸವರಾಜು, ಶಿಕ್ಷಕ ಹೆಚ್.ಎಸ್. ಬಸವರಾಜು, ಉಪನ್ಯಾಸಕ ಹೆಚ್.ಪಿ. ಪ್ರದೀಪ್, ಜೆ.ಎಸ್. ದಯಾನಂದ್ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಸಹ ಪ್ರಾಧ್ಯಾಪಕ ಎನ್.ಎ. ಶಂಕರಲಿಂಗೇಗೌಡ ಮಾತನಾಡಿ, ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆ, ಸಾಮಾಜಿಕ ಹೊಣೆಗಾರಿಕೆಯನ್ನು ಅರಿತು ಗ್ರಾಮಗಳ ಸ್ವಚ್ಛತೆ ಮತ್ತು ಪ್ರಗತಿಗೆ ಗಮನ ಹರಿಸಬೇಕೆಂದರು. ಶಿಬಿರಾಧಿಕಾರಿ ಬಿ. ಶಿವಕುಮಾರ್, ಸಿದ್ದಪ್ಪ, ಬಸಪ್ಪ, ಶಿಬಿರಾರ್ಥಿಗಳು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

