ಹಾಸನ

ಶೌಚಾಲಯ ಸದ್ಬಳಕೆ ಮಾಡಿಕೊಳ್ಳಲು ಕರೆ

Published On :

ಜಾವಗಲ್: ಮಹಿಳೆಯರು ಶೌಚಾಲಯದ ಸದ್ಬಳಕೆ ಮಾಡಿಕೊಂಡು ಆರೋಗ್ಯಕರ ಗ್ರಾಮಗಳನ್ನಾಗಿ ಪರಿವರ್ತಿಸುವ ಮನಸ್ಸು ಮಾಡಬೇಕೆಂದು ಅರಸೀಕೆರೆ ತಾಲೂಕು ಪಂಚಾಯ್ತಿ ಕಾರ್ಯ ನಿರ್ವಹಣಾಧಿಕಾರಿ ಟಿ.ಎನ್. ಮೂರ್ತಿ ಅಭಿಪ್ರಾಯಪಟ್ಟರು.
ಜಾವಗಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕವು ಹಂದ್ರಾಳು ಗ್ರಾಮದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ವಾರ್ಷಿಕ ವಿಶೇಷ ಶಿಬಿರದಲ್ಲಿ ಎನ್.ಆರ್.ಈ.ಜಿ. ಕಾರ್ಯಕ್ರಮಗಳಿಂದ ರೈತರಿಗೆ ದೊರೆಯುವ ಪ್ರಯೋಜನಗಳು ಕುರಿತಾಗಿ ಉಪನ್ಯಾಸ ನೀಡಿದರು.
ಬದುಕು ಉತ್ತಮಪಡಿಸಿಕೊಳ್ಳಿ: ಯೋಜನೆಯಲ್ಲಿ ವೈಯಕ್ತಿಕ ಮತ್ತು ಸಮುದಾಯ ಕಾಮಗಾರಿ ಎಂಬ ವಿಭಾಗಗಳಿದ್ದು, ವೈಯಕ್ತಿಕವಾಗಿ ರೈತರಿಗೆ ಹುದಿ- ಬದು, ಕೃಷಿ ಹೊಂಡ, ತೆಂಗು, ಅಡಿಕೆ, ದಾಳಿಂಬೆಯಂತಹ ತೋಟಗಾರಿಕೆ ಬೆಳೆ ಬೆಳೆಯುವುದು, ಕುರಿಗಳ ಶೆಡ್, ದನದ ಕೊಟ್ಟಿಗೆ, ಶೌಚಾಲಯ ನಿರ್ಮಾಣ ಮತ್ತು ಬಳಕೆ, ಸಮುದಾಯ ಕಾಮಗಾರಿಯಲ್ಲಿ ರಸ್ತೆ, ಚರಂಡಿ, ಚೆಕ್ ಡ್ಯಾಮ್, ಕೆರೆಗಳ ಸಮಗ್ರ ಅಭಿವೃದ್ಧಿ, ಅರಣ್ಯ, ಕೃಷಿ ಅರಣ್ಯೀಕರಣ ಮುಂತಾದ ಕಾಮಗಾರಿಗಳಿದ್ದು ರೈತರು ತಮಗೆ ಉಪಯುಕ್ತವಾದ ಕಾಮಗಾರಿಗಳನ್ನು ಮಾಡಿಕೊಂಡು ಬದುಕನ್ನು ಉತ್ತಮಪಡಿಸಿಕೊಳ್ಳಬೇಕೆಂದರು.
ಖಾತೆಗೆ ನೇರವಾಗಿ ಹಣ: ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕಾಗಿ ಗ್ರಾಮ ಪಂಚಾಯ್ತಿಗಳ ನಿರ್ದೇಶನದಂತೆ ಗಣಕಯಂತ್ರ, ಪುಸ್ತಕಗಳನ್ನು ನೀಡಲಾಗುತ್ತಿದೆ. ಯೋಜನೆಯಲ್ಲಿ 16 ಗುಚ್ಛಗಳಿಗೆ ಸೇರಿದ ಕಾಮಗಾರಿಗಳ ಕ್ರಿಯಾ ಯೋಜನೆಯನ್ನು ಗ್ರಾಮ ಪಂಚಾಯ್ತಿ  ತಯಾರಿಸಿ ತಾಲೂಕು ಪಂಚಾಯ್ತಿ ಜಿಲ್ಲಾ ಪಂಚಾಯ್ತಿಗಳ ಅನುಮೋದನೆ ಪಡೆದುಕೊಂಡು ನಂತರ ಕಾಮಗಾರಿಗಳನ್ನು ಮಾಡಿಸಿ ಕೂಲಿ ಕಾರ್ಮಿಕರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಪಾವತಿ ಮಾಡಬೇಕು ಎಂದರು.
ವಲಸೆ ತಡೆಗಟ್ಟಬಹುದು: ಗ್ರಾಮಗಳಲ್ಲಿ ಜನರು ಹೆಚ್ಚಾಗಿ ಜಾಬ್ ಕಾರ್ಡ್‌ಗಳನ್ನು ಮಾಡಿಸಿಕೊಂಡು, ಉದ್ಯೋಗ ಪಡೆದುಕೊಂಡು ವಲಸೆ ಹೋಗುವುದನ್ನು ತಡೆಗಟ್ಟಬಹುದಾಗಿದೆ ಎಂದು ಹೇಳಿದರು.
ಪಿಡಿಓ ಬಾಲಕೃಷ್ಣ ನಾಯಕ್, ಗ್ರಾಮಸ್ಥರಾದ ಚನ್ನಬಸಪ್ಪ, ಬಸಪ್ಪ, ಬಸವರಾಜು, ಸದಾಶಿವಪ್ಪ, ಕುಮಾರಸ್ವಾಮಿ, ಮಾತನಾಡಿದರು ಸಹ ಪ್ರಾಧ್ಯಾಪಕ ಎಸ್.ಎಂ. ಶಿವಶಂಕರ ಮೂರ್ತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಾವಗಲ್ ಪಶು ಆಸ್ಪತ್ರೆ ಸಹಾಯಕ ನಿರ್ದೇಶಕ ಡಾ. ಶ್ರೀ ರಂಗನಾಥ್ ಮತ್ತು ಸಿಬ್ಬಂದಿ ಜಾನುವಾರುಗಳ ತಪಾಸಣೆ ಮತ್ತು, ಚಿಕಿತ್ಸೆ ಕಾರ್ಯಕ್ರಮ ನಡೆಸಿಕೊಟ್ಟರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.