ಅಪೂರ್ಣ ಕಾಮಗಾರಿಸಂಚಾರಕ್ಕೆ ನಿತ್ಯ ಕಿರಿಕಿರಿ
ಹಾರನಹಳ್ಳಿ: ಅರಸೀಕೆರೆ ಹಾಸನ ಮುಖ್ಯ ರಸ್ತೆಯಲ್ಲಿ ಬೋರನಕೊಪ್ಪಲು ನಿಂದ ಯಳವಾರೆ ಗ್ರಾಮದ ತನಕ ಹಾಗೂ ಹಾರನಹಳ್ಳಿಯಿಂದ ಕೋಡಿಮಠದವರೆಗೆ ಡಾಂಬರ್ ರಸ್ತೆ ನಿರ್ಮಾಣ ಮಾಡಲು ರಸ್ತೆ ಮೆಟ್ಲಿಂಗ್ ಮಾಡಿ 4 ತಿಂಗಳು ಕಳೆದರೂ ರಸ್ತೆ ಕಾಮಗಾರಿ ಪೂರ್ಣಗೊಳಿಸದಿರುವುದರಿಂದ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಪ್ರತಿನಿತ್ಯ ಸಾವಿರಾರು ವಾಹನಗಳು ಹಾಸನ, ಅರಸೀಕೆರೆಗೆ ಈ ರಾಜ್ಯ ರಸ್ತೆಯಲ್ಲಿ ಸಂಚರಿಸುತ್ತಿವೆ. ಆದರೆ, ವಾಹನಗಳ ಸುಗಮ ಸಂಚಾರಕ್ಕೆ ಈಗ ದುಸ್ತರವಾಗಿದೆ. ಈ ಸಮಸ್ಯೆ ಬಗ್ಗೆ ಲೋಕೊಪಯೋಗಿ ಇಲಾಖೆ ಅಧಿಕಾರಿಗಳ ಗಮನಕ್ಕೆ ಬಂದಿದ್ದರೂ ಪ್ರಯೋಜನವಾಗಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.
ವಾಹನ ಸವಾರರಿಗೆ ಕಿರಿಕಿರಿ: ಈ ಮಾರ್ಗದಲ್ಲಿ ಬೈಕ್ ಸವಾರರ ಕಷ್ಟವಂತೂ ಹೇಳತೀರಲಾಗದು. ಪ್ರಾಣ ಬಿಗಿ ಹಿಡಿದು ಚಾಲನೆ ಮಾಡಬೇಕಾಗಿದೆ. ಒಂದೆಡೆ ಹೊಂಡಗಳು, ಇನ್ನೊಂದೆಡೆ ಧೂಳಿನಿಂದಾಗಿ ವಾಹನ ಸವಾರರು ಕೈ ಕಾಲು ಮುರಿದುಕೊಂಡು ಆಸ್ಪತ್ರೆ ಸೇರುವ ಸ್ಥಿತಿ ನಿರ್ಮಾಣವಾಗಿದೆ. ರಸ್ತೆಯಲ್ಲಿ ಹಾಕಿರುವ ಜಲ್ಲಿ ಕಲ್ಲುಗಳು ವಾಹನಗಳ ಸಂಚಾರದ ರಭಸದಿಂದ ಕಲ್ಲುಗಳು ಪಾದಾಚಾರಿಗಳಿಗೆ ಸಿಡಿದು ಗಾಯಗೊಳ್ಳುತ್ತಿರುವುದು ಸಾಮಾನ್ಯವಾಗಿದೆ. ಅಧಿಕಾರಿಗಳಿಗೆ, ಗುತ್ತಿಗೆದಾರರಿಗೆ ವಾಹನಸವಾರರು ಶಾಪ ಹಾಕಿಕೊಂಡು ತಿರುಗುತ್ತಿದ್ದಾರೆ. ರಾಜ್ಯ ಹೆದ್ದಾರಿಗಳ ಗತಿಯೇ ಹೀಗಾದರೆ ಇನ್ನೂ ಗ್ರಾಮೀಣ ರಸ್ತೆ ಸ್ಥಿತಿ ಹೇಗಿರಬಹುದು ಎನ್ನುವುದು ಸಾರ್ವಜನಿಕರ ಪ್ರಶ್ನೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

