ಹಾಸನ

ಶೈಕ್ಷಣಿಕ ಪ್ರಗತಿ ಸಾಧಿಸಲು ವಿದ್ಯಾರ್ಥಿಗಳಿಗೆ ಸಲಹೆ

Published On :

ಜಾವಗಲ್: ಆರ್ಥಿಕ ಸಂಕಷ್ಟಗಳ ನಡುವೆಯೂ ಬ್ಯಾಂಕ್‌ಗಳು ನೀಡುವ ಸಾಲ ಸೌಲಭ್ಯವನ್ನು ಬಳಸಿಕೊಂಡು ವಿದ್ಯಾರ್ಥಿಗಳು ಶೈಕ್ಷಣಿಕ ಪ್ರಗತಿಯನ್ನು ಸಾಧಿಸಬಹುದಾಗಿದೆ ಎಂದು ಜಾವಗಲ್ ವಿಜಯಾ ಬ್ಯಾಂಕ್ ಶಾಖಾಧಿಖಾರಿ ರಾಜಶೇಖರ್ ತಿಳಿಸಿದರು.
ಜಾವಗಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್. ಘಟಕವು ಹಂದ್ರಾಳು ಗ್ರಾಮದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ವಾರ್ಷಿಕ ವಿಶೇಷ ಶಿಬಿರದಲ್ಲಿ ಕೃಷಿ ಮತ್ತು ಶಿಕ್ಷಣದ ಸಮಗ್ರ ಅಭಿವೃದ್ಧಿಯಲ್ಲಿ ಬ್ಯಾಂಕ್‌ಗಳ ಪಾತ್ರ ಉಪನ್ಯಾಸ ನೀಡಿ ಬ್ಯಾಂಕ್‌ಗಳು ಇತ್ತೀಚಿನ ವರ್ಷಗಳಲ್ಲಿ ಕೃಷಿ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ ಅಲ್ಪಾವಧಿ ಮಧ್ಯಮಾವಧಿ, ದೀರ್ಘಾವಧಿ ಸಾಲ ಸೌಲಭ್ಯಗಳನ್ನು ನೀಡುತ್ತಿವೆ ಎಂದರು.
ಸೆಕ್ಯೂರಿಟಿ ಇಲ್ಲದೇ ಸಾಲ: ಕೊಳವೆ ಬಾವಿ ಸಾಲ ಹೊರತುಪಡಿಸಿ, ಎಲ್ಲಾ ರೀತಿಯ ಸಾಲಗಳನ್ನು ನೀಡಲಾಗುತ್ತಿದ್ದು, ರೈತರು ಸಾಲವನ್ನು ಸದುಪಯೋಗಪಡಿಸಿಕೊಂಡು ಸಕಾಲದಲ್ಲಿ ಸಾಲ ಮರುಪಾವತಿ ಮಾಡಬೇಕೆಂದರು. ವಿದ್ಯಾರ್ಥಿಗಳಿಗೆ ಯಾವುದೇ ಸೆಕ್ಯೂರಿಟಿ ಇಲ್ಲದೆ ರು. 4 ಲಕ್ಷದವರೆಗೆ ಸಾಲ ನೀಡಲಾಗುತ್ತದೆ. ರು. 4.5 ಲಕ್ಷದವರೆಗೆ ಆದಾಯ ಹೊಂದಿರುವವರಿಗೆ ಸರ್ಕಾರವು ಬಡ್ಡಿಯಲ್ಲಿ ರಿಯಾಯ್ತಿ ನೀಡುತ್ತದೆ. ಉನ್ನತ ಶಿಕ್ಷಣಕ್ಕೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೂ ಬ್ಯಾಂಕ್‌ಗಳು ಹೆಚ್ಚಿನ ಸಾಲಸೌಲಭ್ಯ ಒದಗಿಸುತ್ತಿದೆ ಎಂದರು.
ಸಹ ಪ್ರಾಧ್ಯಾಪಕ ಎಂ. ಸತೀಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಡೈರಿ ಉಪಾಧ್ಯಕ್ಷ ಹೆಚ್.ಎಸ್. ಶಿವಕುಮಾರ್ ಸಣ್ಣಬಸವಾಚಾರ್, ಗ್ರಂಥಪಾಲಕಿ, ಜಿ.ಕೆ.ದೀಪಿತ, ಮುಖ್ಯಶಿಕ್ಷಕ ಲಕ್ಷ್ಮಣ ಶೆಟ್ಟಿ ಭಾಗವಹಿಸಿದರು. ಜಾವಗಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ನೇತ್ರ ಪರೀಕ್ಷಕ ದೇವರಾಜು ಗ್ರಾಮಸ್ಥರಿಗೆ ಉಚಿತ ನೇತ್ರ ತಪಾಸಣೆ ಮಾಡಿ ಸಲಹೆ ನೀಡಿದರು. ವಿದ್ಯಾರ್ಥಿಗಳು ಶ್ರಮದಾನ ಮಾಡಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.