ಹಾಸನ

ಕಾನೂನು ಬಲಗೊಂಡಿದ್ದರೂ ದೌರ್ಜನ್ಯ ಕಡಿಮೆಯಾಗಿಲ್ಲ

Published On :

ಹಾಸನ: ದೇಶದಲ್ಲಿ ಮಹಿಳಾಪರ ಕಾನೂನುಗಳು ಬಲಗೊಂಡಿದ್ದರೂ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಮಾತ್ರ ಕಡಿಮೆಯಾಗಿಲ್ಲ ಎಂದು ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಜಯಂತ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು.
ನಗರದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಪ್ರಾಧಿಕಾರ ಹಾಗೂ ಜಿಲ್ಲಾ ಪಂಚಾಯ್ತಿ ವತಿಯಿಂದ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ದೇಶದ ಎಲ್ಲಾ ಸಮಸ್ಯೆಗಳನ್ನು ನಿವಾರಿಸಲು ಕಾನೂನಿನಿಂದ ಸಾಧ್ಯವಿಲ್ಲ ಹಾಗಾಗಿ ಮಹಿಳೆಯರು ಧೈರ್ಯದಿಂದ ತಮ್ಮ ಎಲ್ಲಾ ಸಮಸ್ಯೆ ಎದುರಿಸಬೇಕು. ಮಹಿಳೆಯರು ಕಾನೂನಿನ ಬಗ್ಗೆ ಅರಿವು ಮೂಡಿಸಿಕೊಳ್ಳುವ ಮೂಲಕ ತಮ್ಮ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು. ಯುವತಿಯರು ನ್ಯಾಯಸಮ್ಮತ, ಪ್ರಾಮಾಣಿಕವಾಗಿ ಪಡೆದುಕೊಳ್ಳಬೇಕು ಎಂದರು.
ಸಬಲೀಕರಣ ಆಗಬೇಕಿದೆ: ಉಪನ್ಯಾಸ ನೀಡಿದ ವೈದ್ಯೆ ಡಾ. ಭಾರತಿ, ಇಂದಿಗೂ ನಮ್ಮ ದೇಶದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ, ಶೋಷಣೆ ನಡೆಯುತ್ತಿದೆ. ಮಹಿಳೆಯರು ವಿದ್ಯಾವಂತರಾದರೂ ತನ್ನ ಮೇಲೆ ನಡೆಯುತ್ತಿರುವ ಎಲ್ಲಾ ಶೋಷಣೆಗಳನ್ನು ಸಹಿಸಿಕೊಂಡು ಜೀವನ ಸಾಗಿಸಬೇಕಾದ ಅನಿವಾರ್ಯತೆ ಇದೆ. ಸ್ತ್ರೀ ಮತ್ತು ಪುರುಷ ಒಂದೇ ಗಾಡಿಯ ಎರಡು ಚಕ್ರಗಳು ಇದ್ದ ಹಾಗೆ. ಹಾಗಾಗಿ ಮಹಿಳೆಯರ ಸಬಲೀಕರಣ ಆಗಬೇಕಿದೆ ಎಂದು ಹೇಳಿದರು.
ನ್ಯಾಯಯುತ ಬಳಕೆ ಮಾಡಿಕೊಳ್ಳಬೇಕು: ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಪ್ರೊ. ಎಚ್.ಎನ್. ರೂಪ್ ರಾಜ್ ಚಂದನ್ ಮಾತನಾಡಿ, ಮಹಿಳೆಯರು ತಮ್ಮಗೆ ಇರುವ ಕಾನೂನುಗಳನ್ನು ದುರುಪಯೋಗ ಮಾಡಿಕೊಳ್ಳದೆ ನ್ಯಾಯಯುತವಾಗಿ ಅದನ್ನು ಬಳಕೆ ಮಾಡಿಕೊಳ್ಳಬೇಕು. ಯುವತಿಯರು ಅತ್ಯಂತ ಎಚ್ಚರದಿಂದ ನಡೆದುಕೊಳ್ಳಬೇಕು ಎಂದು ತಿಳಿ ಹೇಳಿದರು.
ವಕೀಲರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ದೇವರಾಜೇಗೌಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಚಿದಾನಂದ್, ವಕೀಲೆ  ಗಿರಿಜಾಂಬಿಕ, ಪ್ರಾಧ್ಯಾಪಕಿ ವನಿತಾ, ಅಧ್ಯಾಪಕರಾದ ಪ್ರೊ ಸುಲೋಚನಾ, ಡಾ. ನಿರ್ವಾಣೀಗೌಡ, ಕೆ. ಗುರುರಾಜ, ಡಾ. ಮಹಬಲೇಶ್ವರ, ಎಂ.ಕೆ. ಮಹೇಶ್, ಆಶಾ, ಪೂರ್ಣಿಮ, ಸಾವಿತ್ರಿ, ಮೋಹನ್ ಕುಮಾರ್, ದೈಹಿಕ ಶಿಕ್ಷಣ ನಿರ್ದೇಶಕ ಎಂ.ಎ. ಪ್ರಕಾಶ್ ಹಾಗೂ ಇತರರು ಇದ್ದರು.
ದೇಶದ ಎಲ್ಲಾ ಸಮಸ್ಯೆಗಳನ್ನು ನಿವಾರಿಸಲು ಕಾನೂನಿನಿಂದ ಸಾಧ್ಯವಿಲ್ಲ ಹಾಗಾಗಿ ಮಹಿಳೆಯರು ಧೈರ್ಯದಿಂದ ತಮ್ಮ ಎಲ್ಲಾ ಸಮಸ್ಯೆ ಎದುರಿಸಬೇಕು.
-  ಜಯಂತ್ ಕುಮಾರ್
ಹೆಚ್ಚುವರಿ ಸಿವಿಲ್ ನ್ಯಾಯಾಧೀಶ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.