ಹಾಸನ

ನಿರಾಶ್ರಿತರ ತಾಣವಾಗಿರುವ ತರಕಾರಿ ಮಾರುಕಟ್ಟೆ

Published On :

ಸಕಲೇಶಪುರ: ಹತ್ತನೇ ಹಣಕಾಸು ಯೋಜನೆಯಡಿ ಪಟ್ಟಣದ ತರಕಾರಿ ಮಾರ್ಕೆಟ್ ಆವರಣದಲ್ಲಿ ನಿರ್ಮಿಸಲಾಗಿರುವ ತರಕಾರಿ ಮಾರುಕಟ್ಟೆ ಕಟ್ಟಡ ನಿರಾಶ್ರಿತರ ತಾಣವಾಗಿ ಮಾರ್ಪಟ್ಟಿದೆ.
2005-06 ರ ಅವಧಿಯಲ್ಲಿ ಪಟ್ಟಣದಲ್ಲಿ ವ್ಯವಸ್ಥಿತ ತರಕಾರಿ ಮಾರುಕಟ್ಟೆ ನಿರ್ಮಿಸುವ ಉದ್ದೇಶದಿಂದ ಅಂದಿನ ಪುರಸಭೆ ಅಧ್ಯಕ್ಷೆ ಲಕ್ಷ್ಮಮ್ಮ ಮಾರುಕಟ್ಟೆ ಕಟ್ಟಡಕ್ಕೆ ಅಡಿಗಲ್ಲು ಹಾಕಿದ್ದರು. 2008 ರಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ಮುಕ್ತಾಯಗೊಂಡು ಪುರಸಭೆಗೆ ಹಸ್ತಾಂತರಿಸಲಾಯಿತಾದರೂ ಅಧಿಕ ಬಾಡಿಗೆ ವಿಧಿಸಿದ ಕಾರಣ ಈ ಕಟ್ಟಡದಲ್ಲಿರುವ ಮಳಿಗೆಗಳನ್ನು ಬಾಡಿಗೆ ಪಡೆಯಲು ವರ್ತಕರು ಮುಂದೆ ಬಾರದ ಕಾರಣ ಕಾಲ ಕ್ರಮೇಣ ಈ ಮಳಿಗೆಗಳಲ್ಲಿ ಅನಧಿಕೃತವಾಗಿ ನಾನಾ ಅಂಗಡಿಗಳು ತಲೆ ಎತ್ತಿದವು.
ಇದನ್ನು ಗಮನಿಸಿದ 2010 ರಲ್ಲಿ ಪುರಸಭೆ ಅಧ್ಯಕ್ಷರಾಗಿದ್ದ ಎಸ್.ಡಿ ಆದರ್ಶ ಅನಧಿಕೃತ ಅಂಗಡಿಗಳನ್ನು ತೆರವುಗೊಳಿಸಿ ಮರು ಟೆಂಡರ್ ಮಾಡಲು ಯೋಜನೆ ರೂಪಿಸಿದ್ದರು.  
ಮೂಲ ಸೌಕರ್ಯ ಒದಗಿಸುವಂತೆ ಒತ್ತಾಯಿಸಿದ ವರ್ತಕರು 2011 ರಲ್ಲಿ ನಡೆದ ಮರುಟೆಂಡರ್‌ನಲ್ಲಿ ಯಾರು ಭಾಗವಹಿಸಿರಲಿಲ್ಲ. ನಂತರದ ದಿನಗಳಲ್ಲಿ ಮತ್ತೆ ಈ ಕಟ್ಟಡದಲ್ಲಿ ಅನಧಿಕೃತ ಅಂಗಡಿಗಳು ತಲೆ ಎತ್ತಿತು. ಸಮೀಪದ ಅಂಗಡಿ ಮಾಲೀಕರಿಗೆ ಈ ಕಟ್ಟಡ ಗೋದಾಮಾಗಿ ಪರಿವರ್ತನೆಯಾಗಿದ್ದರೆ, ಸಮೀಪದ ನಿವಾಸಿಗಳಿಗೆ ಬಟ್ಟೆ ಒಣಗಿಸುವ ತಾಣವಾಗಿಯೂ ಮಾರ್ಪಟ್ಟಿದೆ.
ಅಲ್ಲದೆ ಅಲೆಮಾರಿಗಳ ವಾಸಸ್ಥಳವಾಗಿರುವ ಈ ಕಟ್ಟಡದ ಮುಂಭಾಗದಲ್ಲಿ ಗಲೀಜು ತುಂಬಿ ತುಳುಕುತ್ತಿದೆ. ಇದರಿಂದಾಗಿ ಇಲ್ಲಿ ಸಾರ್ವಜನಿಕರು ಕಿರಿಕಿರಿ ಅನುಭವಿಸುವಂತಾಗಿದೆ. ಅಪಾರ ವೆಚ್ಚಮಾಡಿ ಕಟ್ಟಲಾಗಿರುವ ಕಟ್ಟಡವನ್ನು ಸದುಪಯೋಗಪಡಿಸಿಕೊಳ್ಳಲು ಪುರಸಭೆ ವಿಫಲವಾಗಿದೆ ಎಂಬುದರಲ್ಲಿ ಸಂಶಯವಿಲ್ಲ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.