ಹೊಸ ಮುಖಗಳಿಗೆ ಅವಕಾಶ ಮಾಡಿಕೊಡಿ: ಎ.ಮಂಜು
ಹಾಸನ: ಲೋಕಸಭೆಯಲ್ಲಿ ಪ್ರಶ್ನೆಯನ್ನೇ ಕೇಳದ ಮಾಜಿ ಪ್ರಧಾನಿ ದೇವೇಗೌಡರನ್ನು ಜಿಲ್ಲೆಯ ಮತದಾರರು ಈ ಬಾರಿ ಸೋಲಿಸುವ ಮೂಲಕ ಹೊಸ ಮುಖಗಳಿಗೆ ಅವಕಾಶ ಮಾಡಿ ಕೊಡ ಬೇಕೆಂದು ಎಂದು ಕಾಂಗ್ರೆಸ್ನ ಲೋಕಸಭೆ ಅಭ್ಯರ್ಥಿ ಶಾಸಕ ಎ. ಮಂಜು ಹೇಳಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪ್ರಧಾನಿಯಾದ ವ್ಯಕ್ತಿ ಇನ್ನೂ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದರಲ್ಲಿ ಅರ್ಥವಿಲ್ಲ. ಕಳೆದ ಮೂರು ಚುನಾವಣೆಯಿಂದಲೂ ಕೊನೆಯ ಚುನಾವಣೆ ಎಂದು ಚುನಾವಣೆಯ ವೇಳೆ ಕಣ್ಣೀರುಡುತ್ತ ಕ್ಷೇತ್ರ ಸಂಚರಿಸುವ ಮೂಲಕ ಮತದಾರರಿಗೆ ಮಣ್ಣೆರುಚ್ಚುತ್ತಿದ್ದಾರೆ ಎಂದು ಟೀಕಿಸಿದರು. ಕಳೆದ 5 ವರ್ಷದ ಅವಧಿಯಲ್ಲಿ ಕ್ಷೇತ್ರಕ್ಕೆ ಕಾಲಿಡದ ದೇವೆಗೌಡರು ಈಗ ಹಾಸನದಲ್ಲಿ ಐಐಟಿ ತೆರೆಯುವ ಬಗ್ಗೆ ಮಾತನಾಡುವುದು ಅವರಿಗೆ ಶೋಭೆ ತರುವುದಿಲ್ಲ. ಈ ತರಹದ ಕೀಳು ಪ್ರಚಾರದ ಮೂಲಕ ಮತ ಕೇಳುವುದು ತರವಲ್ಲ. ಪ್ರಧಾನಿಯಾಗಿದ್ದ ವೇಳೆ ಹಾಸನವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಬಹುದಾಗಿತ್ತು. ಜಿಲ್ಲೆಯ ಜನ ಇವರ ಕುಟುಂಬಕ್ಕೆ ಎಲ್ಲ ರೀತಿಯ ಅಧಿಕಾರ ನೀಡಿದೆ. ಆದರೆ ಜಿಲ್ಲೆಯ ಅಭಿವೃದ್ಧಿಗೆ ಇವರ ಕೊಡುಗೆ ಮಾತ್ರ ಶೂನ್ಯವಾಗಿದೆ ಎಂದು ಟೀಕಾ ಪ್ರಹಾರ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

