ಹುಡುಗಿಯನ್ನು ಚುಡಾಯಿಸಿದ್ದಕ್ಕೆ ಗುಂಪು ಘರ್ಷಣೆ; 7 ಮಂದಿ ಬಂಧನ
ಅರಸೀಕೆರೆ: ಯುವತಿಯನ್ನು ಚುಡಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದ ಘಟನೆ ಪಟ್ಟಣದ ಇಂದಿರಾ ನಗರ ಬಡಾವಣೆಯಲ್ಲಿ ಭಾನುವಾರ ರಾತ್ರಿ ನಡೆದಿದ್ದು, ಈ ಸಂಬಂಧ 7 ಮಂದಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ.
ಹುಡುಗಿ ಚುಡಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕರ ಗುಂಪೊಂದು ಮತ್ತೊಂದು ಗುಂಪಿನ ಮೇಲೆ ಹಲ್ಲೆ ನಡೆಸಿದ್ದಾರೆ. ಎದುರಾಳಿ ಗುಂಪು ಪ್ರತಿರೋಧ ತೋರಿದ ಹಿನ್ನೆಲೆಯಲ್ಲಿ ಎರಡು ಗುಂಪಿನ ಸದಸ್ಯರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಬೇಗುದಿಯಲ್ಲಿ: ಪೊಲೀಸರ ಸಕಾಲಿಕ ಪ್ರವೇಶದಿಂದ ಬಾರಿ ಅನಾಹುತ ತಪ್ಪಿದಂತಾಗಿದೆ. ದೂರು ಪ್ರತಿದೂರಿನ ಹಿನ್ನೆಲೆಯಲ್ಲಿ ಎರಡೂ ಕೋಮಿಗೆ ಸೇರಿದ 7 ಮಂದಿಯನ್ನು ಬಂದಿಸಲಾಗಿದ್ದು ಈ ಹಿನ್ನೆಲೆಯಲ್ಲಿ ಪಟ್ಟಣದ ಇಂದಿರಾ ನಗರ ಬಡಾವಣೆಯಲ್ಲಿ ಪರಿಸ್ಥಿತಿ ಶಾಂತವಾಗಿದ್ದರೆ ಬೂದಿ ಮುಚ್ಚಿದ ಕೆಂಡದಂತಿದೆ.
ಆರೋಪಿಗಳು ವಶಕ್ಕೆ: ಹಲ್ಲೆ ಮಾಡಿದ ವ್ಯಕ್ತಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ 504, 143, 147, 323, 148, 149 ಹಾಗೂ 307ರ ಅಡಿಯಲ್ಲಿ ಕೇಸು ದಾಖಲಿಸಿದ್ದು ಈ ಸಂಬಂಧ ಒಂದು ಗುಂಪಿನ ಸುನೀಲ್, ನಾಗೇಂದ್ರ, ರವಿ, ಮಧು ಹಾಗೂ ಮತ್ತೊಂದು ಗುಂಪಿನ ಇಮ್ರಾನ್, ಹಮೀದ್, ತೌಸೀಫ್ ಎಂಬವರನ್ನು ವಶಕ್ಕೆ ಪಡೆದಿದ್ದಾರೆ. ಘಟನೆಯಲ್ಲಿ ಪುರಸಭೆ ಸದಸ್ಯರೊಬ್ಬರ ಪುತ್ರನೂ ಸೇರ್ಪಡೆಗೊಂಡಿದ್ದಾನೆ. ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಪೊಲೀಸ್ ಕಸ್ಟಡಿಯನ್ನು ನಿಯೋಜಿಸಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.
ಕೆಲ ದಿನಗಳ ಹಿಂದೆ ಬ್ಯಾನರ್ ಹಾಕುವ ವಿಚಾರಕ್ಕೆ ಸಂಬಂಧಿಸಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿತ್ತು. ಪಟ್ಟಣದ ಪೊಲೀಸರು ಮೊಹಲ್ಲಾ ಸಭೆ ನಡೆಸಿ ಪರಿಸ್ಥಿತಿ ತಿಳಿಗೊಳಿಸುವ ಯತ್ನ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

