ಹಾಸನ

ಅಂತರ ಬೆಳೆ ಬೆಳೆಯಲು ರೈತರಿಗೆ ಸಲಹೆ

Published On :

ಹಾಸನ: ರೈತರು ಕೇವಲ ತೆಂಗಿನ ಮೇಲೆ ಅವಲಂಬಿತರಾಗದೇ ಅದರ ಜತೆ ಅಂತರ ಬೆಳೆಗಳನ್ನು ಬೆಳೆದು ಆದಾಯವನ್ನು ಹೆಚ್ಚಿಸಿಕೊಳ್ಳಬೇಕು ಎಂದು ಕಂದಲಿ ಕೃಷಿ ವಿಜ್ಞಾನ ಕೇಂದ್ರದ ಪ್ರಭಾರ ಮುಖ್ಯಸ್ಥ ಡಾ.ಎಸ್. ಚನ್ನಕೇಶವ ತಿಳಿಸಿದರು.
ಕಂದಲಿ  ಕೃಷಿ ವಿಜ್ಞಾನ ಕೇಂದ್ರದಲ್ಲಿ ಯುವ ರೈತರಿಗೆ ಮತ್ತು ರೈತ ಮಹಿಳೆಯರಿಗಾಗಿ ಇತ್ತೀಚೆಗೆ ಆಯೋಜಿಸಿದ್ದ  ತೆಂಗಿನ ಮರ ಹತ್ತುವ ಸಾಧನ ಮತ್ತು ಸಸ್ಯ ಸಂರಕ್ಷಣೆಯ ಬಗೆಗಿನ  ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ತೆಂಗು ಕಲ್ಪವೃಕ್ಷ: ತೆಂಗಿನ ಮರದಿಂದ ಮಾನವರಿಗೆ ಆಗುವ ಉಪಯೋಗಗಳು ಅನೇಕ. ತೆಂಗಿನ ಮರದಿಂದ ಆಹಾರ, ಪಾನೀಯ, ಇಂಧನಕ್ಕೆ ಸೌದೆ, ವಸತಿಗೆ ಮತ್ತು ಅನೇಕ ಕೈಗಾರಿಕೆಗಳಿಗೆ ಕಚ್ಚಾವಸ್ತುಗಳನ್ನು ಒದಗಿಸುತ್ತದೆ. ಇದರ ಈ ಸರ್ವತೋಮುಖ ಗುಣಧರ್ಮಕ್ಕಾಗಿಯೇ ತೆಂಗನ್ನು ಕಲ್ಪವೃಕ್ಷ ಎಂದು ಕರೆಯುತ್ತಾರೆ ಎಂದು ಹೇಳಿದರು.
100 ವರ್ಷದ ಬೆಳೆ: ತೆಂಗು ಬೇಸಾಯ ಮೊದಲು ಒಳ್ಳೆಯ ತಳಿಗಳ ಆಯ್ಕೆ ಮಾಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ.
ಏಕೆಂದರೆ ತೆಂಗು ನೂರು ವರ್ಷದ ಬೆಳೆ. ಇದಕ್ಕೆ ಪೂರಕವಾಗಿ ತೆಂಗು ಅಭಿವೃದ್ಧಿ ನಿಗಮ ಪ್ರಾಯೋಜಿತವಾದ ಈ ತರಬೇತಿಯನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕೇಂದ್ರದ ವಿಜ್ಞಾನಿಗಳಾದ ಡಾ. ಕೆ.ಜೆ. ಕಾಂತರಾಜು, ತೆಂಗು ಅಭಿವೃದ್ಧಿ ಮಂಡಳಿಯ ಕಾಂತರಾಜು ಹಾಗೂ ನಾನಾ ತಾಲೂಕಿನ ಶಿಬಿರಾರ್ಥಿಗಳು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.