ಹಾಸನ

ವೈದ್ಯಾಧಿಕಾರಿಗಳಿಗೆ ವಿಶೇಷ ತರಬೇತಿ

Published On :

ಹಾಸನ: ಜಿಲ್ಲಾದ್ಯಂತ ಮತದಾರರ ಜಾಗೃತಿ ಮತ್ತು ಸಹಭಾಗಿತ್ವ ಚಟುವಟಿಕೆಗಳಲ್ಲಿ ಎಲ್ಲಾ ತಾಲೂಕು ವೈದ್ಯಾಧಿಕಾರಿಗಳು ಮತ್ತು ಸಮುದಾಯ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಹಾಗೂ ಶಿಶು ಅಭಿವೃದ್ಧಿ ಅಧಿಕಾರಿಗಳು ಕೈ ಜೋಡಿಸಿದ್ದಾರೆ. ಇದಕ್ಕಾಗಿ ಇವರಿಗೆ ವಿಶೇಷ ತರಬೇತಿಯನ್ನೂ ಸಹ ನೀಡಲಾಗಿದೆ.
ವೈದ್ಯಾಧಿಕಾರಿಗಳು ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಮೂಲಕ ಮೊದಲ ಸುತ್ತಿನಲ್ಲಿ ಆಯ್ದ ಸ್ಥಳಗಳಲ್ಲಿ ಮತದಾರರ ಮನೆ ಮನೆಗೆ ಭೇಟಿ ನೀಡಿ, ಕಳೆದ ಬಾರಿಯ ಚುನಾವಣೆಯಲ್ಲಿ ಮತದಾನ ಮಾಡಿದ್ದಾರೆಯೇ ಅಥವಾ ಮಾಡದಿದ್ದಲ್ಲಿ ಸೂಕ್ತ ಕಾರಣದ ಮಾಹಿತಿ ಪಡೆದು ಮಾಹಿತಿಗೆ ಅನುಗುಣವಾಗಿ ಗ್ರಾಮದ ಹಂತದಲ್ಲಿ ಸಾರ್ವಜನಿಕರಿಗೆ ಚುನಾವಣೆಯಲ್ಲಿ ಮತದಾನದ ಮಹತ್ವದ ಬಗ್ಗೆ ಅರಿವು ನೀಡಿ ಎಲ್ಲರೂ ಈ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಣೆ ನೀಡಲಿದ್ದಾರೆ. ಈ ಸಂಬಂಧ ವೈದ್ಯಾಧಿಕಾರಿಗಳು ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ವಿಶೇಷ ತರಬೇತಿ ನೀಡಲಾಯಿತು. ತಾಲೂಕು ಮಟ್ಟದ ವೈದ್ಯಾಧಿಕಾರಿಗಳು ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಮತ್ತು ಯುವಜನ ಸೇವಾ ಕ್ರೀಡಾಧಿಕಾರಿಗಳು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.
ಸ್ವೀಪ್ ಸಮಿತಿಯ ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಉಪೇಂದ್ರ ಪ್ರತಾಪ್ ಸಿಂಗ್ ಅವರ ಮಾರ್ಗದರ್ಶನದಂತೆ ಈ ಪ್ರಕ್ರಿಯೆಯನ್ನು ಕೈಗೊಳ್ಳಲಾಗಿದೆ ಎಂದು ವಾರ್ತಾಧಿಕಾರಿ ಹಾಗೂ ಸ್ವೀಪ್ ಸಮಿತಿಯ ಸದಸ್ಯ ಕಾರ್ಯದರ್ಶಿ ವಿನೋದ್ ಚಂದ್ರ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.