ಹಾಸನದಲ್ಲಿ ಗೌಡರ ವಿರುದ್ಧ ಕಾಂಗ್ರೆಸ್ ಸಾಂಕೇತಿಕ ಸ್ಪರ್ಧೆ
ಅರಕಲಗೂಡು: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಜಾಫರ್ ಷರೀಫ್ ಅವರು ಮಾಜಿ ಪ್ರಧಾನಿ ದೇವೇಗೌಡರ ವಿರುದ್ಧ ಕಾಂಗ್ರೆಸ್ ಪಕ್ಷ ಅಭ್ಯರ್ಥಿಯನ್ನು ಹಾಕಬಾರದು ಎಂದು ಹೇಳಿರುವ ಮಾತು ಸಮಯೋಚಿತವಾಗಿದ್ದು, ಅದು ಔಚಿತ್ಯಪೂರ್ಣವಾಗಿದೆ ಎಂದು ಮಾಜಿ ಶಾಸಕ ಎ.ಟಿ. ರಾಮಸ್ವಾಮಿ ಅವರು ಹೇಳಿದ್ದಾರೆ.
ಇಲ್ಲಿನ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದ, ಅವರು ಒಂದು ವೇಳೆ ಕಾಂಗ್ರೆಸ್ ಹಾಸನದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಅದೊಂದು ಸಾಂಕೇತಿಕ ಸ್ಪರ್ಧೆಯೇ ಹೊರತು ಸ್ಪರ್ಧಾತ್ಮಕ ಹೋರಾಟಕ್ಕೆ ಅಲ್ಲ ಎಂದು ಹೇಳಿದ್ದಾರೆ.
ಗೌಡರಿಂದ ಸಮರ್ಥ ನಾಯಕತ್ವ: ಮಾಜಿ ಪ್ರಧಾನಿ ದೇವೇಗೌಡರು ಇಂದಿಗೂ ಹಳ್ಳಿಗಳಲ್ಲಿ ಜನರೊಂದಿಗೆ ಬೆರೆಯುತ್ತಿದ್ದಾರೆ ಎಂದ ಅವರು, ಕಾಂಗ್ರೆಸ್ ಪಕ್ಷ ಚುನಾವಣಾ ಹಿನ್ನೆಲೆಯಲ್ಲಿ ಮಾಧ್ಯಮ ಪ್ರಚಾರಕ್ಕಾಗಿ 500-600 ಕೋಟಿ ರೂಗಳನ್ನು ವಿನಿಯೋಗಿಸುತ್ತಿದೆ. ಸುಮಾರು ರು. 30 ಸಾವಿರ ಕೋಟಿ ಚಲಾವಣೆ ಆಗಲಿದೆ ಎಂಬ ಮಾಹಿತಿ ಇದೆ. ಇದು ಯಾರ ಹಣ ಎಂದು ಅವರು ಪ್ರಶ್ನಿಸಿದರು.
ಎಚ್ಡಿಕೆ ಸಿಎಂ ಆಗಿದ್ದಾಗ ಅಪಾರ ಹಣ: ಕಾರ್ಯಕರ್ತರ ಸಭೆ ಉದ್ಘಾಟಿಸಿದ ಶಾಸಕ ಹೆಚ್.ಡಿ. ರೇವಣ್ಣ, ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ, ಜಿಲ್ಲೆಯ ಅಭಿವೃದ್ಧಿಗೆ ಅಪಾರ ಹಣ ನೀಡಲಾಗಿತ್ತು ಎಂದ ಅವರು, ರಾಜ್ಯದ ಅಭಿವೃದ್ಧಿ ಮತ್ತು ರೈತರ ಹಿತ ಕಾಯುವ ಸಲುವಾಗಿ ದೇವೇಗೌಡರನ್ನು ಲೋಕಸಭೆಗೆ ಆಯ್ಕೆ ಮಾಡುವಂತೆ ಮನವಿ ಮಾಡಿದರು. ಸಭೆಯಲ್ಲಿ ತಾಲೂಕು ಜೆಡಿಎಸ್ ಅಧ್ಯಕ್ಷ ಎಂ.ಸಿ. ರಂಗಸ್ವಾಮಿ, ಕಾರ್ಯಾಧ್ಯಕ್ಷ ಎ.ಆರ್. ಜನಾರ್ಧನಗುಪ್ತ, ಜಿಲ್ಲಾ ಪಂಚಾಯಿತಿ ಸದಸ್ಯರಾದ ವಿ.ಎ.ನಂಜುಂಡಸ್ವಾಮಿ, ಜಯಮ್ಮ ಗೋವಿಂದೇಗೌಡ, ನಾಗಮಣಿ, ಪಾರ್ವತಮ್ಮ ನಂಜುಂಡಾಚಾರ್, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಹೊನ್ನವಳ್ಳಿ ಸತೀಶ್, ತಾಲೂಕು ಪಂಚಾಯಿತಿ ಸದಸ್ಯ ನರಸೇಗೌಡ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ರಾಜಶೇಖರ್, ಎಂ.ಕೆ. ರಾಜೇಗೌಡ,ಎಂ.ಎಸ್. ರಮೇಶ್ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

