ಹಾಸನದಲ್ಲಿ ತ್ರಿಕೋನ ಸ್ಪರ್ಧೆ: ಶಾಸಕ ಸಿ.ಟಿ. ರವಿ
ಹಾಸನ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 20ಕ್ಕೂ ಹೆಚ್ಚಿನ ಸ್ಥಾನಗಳಲ್ಲಿ ಜಯಗಳಿಸಲಿದ್ದು, ಹಾಸನ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಎರ್ಪಡಲಿದೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಸಿ.ಟಿ. ರವಿ ಹೇಳಿದ್ದಾರೆ.
ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅತಿ ಹೆಚ್ಚಿನ ಸ್ಥಾನಗಳನ್ನು ಈ ಭಾರಿಯೂ ಪಡೆಯಲಿದೆ ಎಂದ ಅವರು, ಹಾಸನ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ತ್ರಿಕೋನ ಸ್ಪರ್ಧೆಯಾಗಲಿದ್ದು, ನಮ್ಮ ಪಕ್ಷದ ಅಭ್ಯರ್ಥಿಯು ಸಮರರ್ಥಿದ್ದಾರೆ. ಆದ್ದರಿಂದ ಭಾರಿ ಹಣಾಹಣಿ ನಡೆಯಲಿದ್ದು, ಪಕ್ಷದ ವರವಾಗಿ ಮತದಾರರ ಒಲವಿರುವುದರಿಂದ ಅಭ್ಯರ್ಥಿಯ ಗೆಲುವು ಸಾಧಿಸಲಿದ್ದಾರೆ ಎಂದರು.
ಈ ಬಾರಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷದಿಂದ ವಿನೂತನ ಪ್ರಯೋಗ ಮಾಡಲಾಗುತ್ತಿದೆ. ಹಿಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿನೂತನ ಪ್ರಯೋಗ ಮಾಡಿ ಗೆಲುವು ಸಾಧಿಸಿತ್ತು. ಅದೇ ರೀತಿ ಈ ಬಾರಿಯು ಹಾಸನ, ಚಿಕ್ಕಮಗಳೂರು, ಮೈಸೂರು ಸೇರಿದಂತೆ ಇತರೆ ಭಾಗಗಳಲ್ಲಿ ಪ್ರಯೋಗ ಮಾಡಲು ಮುಂದಾಗಿದೆ ಎಂದ ಅವರು, ಮಾಜಿ ಸಂಸದ ವಿಜಯ್ಶಂಕರ್ ಅವರನ್ನು ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿಮಾಡಲು ಪಕ್ಷದಲ್ಲಿ ಚರ್ಚೆ ನಡೆದಿದೆ. ಈ ಹಿಂದೆ ಡಿ.ಬಿ. ಚಂದ್ರೇಗೌಡ, ಸಾಂಗ್ಲಿಯಾನ ಅವರು ಬೇರೆ ಕ್ಷೇತ್ರದವರಾದರು ಬೆಂಗಳೂರಿನಿಂದ ಸ್ಪರ್ಧೆಗೆ ಅವಕಾಶ ಮಾಡಿ ಗೆಲುವು ಪಡೆದಿದ್ದನ್ನು ನೆನಪಿಸಿದರು.
ಈ ಬಾರಿಯೂ ಅದೇ ಪ್ರಯೋಗ ಬಿಜೆಪಿ ಮಾಡಿ ಚುನಾವಣೆಯಲ್ಲಿ ಲಾಭ ಪಡೆಯಲಿದೆ. ವಿಜಯ್ಶಂಕರ್ ಸದ್ಯಕ್ಕೆ ತಮ್ಮ ಅಸಮಾಧಾನ ವ್ಯಕ್ತಪಡಿಸಿರಬಹುದು. ಆದರೆ ಯಾವುದೇ ಕಾರಣಕ್ಕೂ ಪಕ್ಷ ಬಿಡಲಾರರು ಎಂದು ವಿಶ್ವಾಸ ವ್ಯಕ್ತಪಡಿಸಿ ಅವರು, ಹಾಸನದಲ್ಲಿ ಯಾರು ಅಭ್ಯರ್ಥಿ ಆಗಬೇಕೆಂದು ಇನ್ನೂ ಅಂತಿಮ ತೀರ್ಮಾನವಾಗಿಲ್ಲ. ಆದರೂ ಅಚ್ಚರಿಯ ಫಲಿತಾಂಶ ಕಾದಿದೆ. ನಮೋ ಅಲೆಯ ಮುಂದೆ ಹಳೆ ಮತ್ತು ಹೊಸ ಮುಖಗಳು ತೇಲಿ ಹೋಗುತ್ತಾರೆ ಎಂದು ಭವಿಷ್ಯ ನುಡಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ರೇಣುಕುಮಾರ್, ಮಾಜಿ ಅಧ್ಯಕ್ಷರಾದ ನವಿಲೆ ಅಣ್ಣಪ್ಪ, ಕೃಷ್ಣೇಗೌಡ, ಬಿಜೆಪಿ ಮುಖಂಡ ಎಂ.ಬಿ.ಗುರುಪ್ರಸಾದ್ ಹಾಗೂ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

