ಹಾಸನ

ಮತದಾನ ಅರಿವು ಕಾರ್ಯಕ್ರಮ

Published On :

ಹಾಸನ: ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ ವತಿಯಿಂದ ಆಟೋ ಪ್ರಚಾರದ ಮೂಲಕ ಮತದಾರರಿಗೆ ಅರಿವು ನೀಡುವ ಕಾರ್ಯಕ್ರಮವನ್ನು ಸಮಿತಿಯು ಆಯೋಜಿಸಿದ್ದು, ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಉಪೇಂದ್ರ ಪ್ರತಾಪ್ ಸಿಂಗ್ ಶುಕ್ರವಾರ ಚಾಲನೆ ನೀಡಿದ್ದಾರೆ.
ಜಿಲ್ಲಾ ಪಂಚಾಯ್ತಿಯ ಉಪಕಾರ್ಯದರ್ಶಿ ಪುಟ್ಟಸ್ವಾಮಿ, ಸಮಿತಿ ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ವಾರ್ತಾಧಿಕಾರಿ ವಿನೋದ್ ಚಂದ್ರ, ಸಮಿತಿಯ ಸದಸ್ಯ ಸರ್ಕಾರಿ ವಿಜ್ಞಾನ ಕಾಲೇಜಿನ ಎನ್‌ಎಸ್‌ಎಸ್ ಅಧಿಕಾರಿ ಕೃಷ್ಣಪ್ಪ, ಕ್ಷೇತ್ರ ಪ್ರಚಾರ ಇಲಾಖೆ ಅಧಿಕಾರಿ ಪ್ರಕಾಶ್ ಹಾಜರಿದ್ದರು.
ಹಾಸನ ನಗರ ಹಾಗೂ ಜಿಲ್ಲೆಯ ಎಲ್ಲಾ ತಾಲೂಕುಗಳ ಪಟ್ಟಣ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಮುಖ್ಯವಾಗಿ ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಕಡಿಮೆ ಮತದಾನದ ಪ್ರದೇಶಗಳಲ್ಲಿ ಈ ಧ್ವನಿವರ್ಧಕ ಮೂಲಕ ವ್ಯಾಪಕ ಪ್ರಚಾರ ನೀಡಲು ಉದ್ದೇಶಿತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಾ. 16ರವರೆಗೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ಹೆಸರು ತೆಗೆದು ಹಾಕಲು ತಿದ್ದುಪಡಿ ಮತ್ತು ಮಾರ್ಪಾಡಲ್ಲಿ ಅವಕಾಶವಿದ್ದು, ಈ ಬಗ್ಗೆ ಆಟೋ ಪ್ರಚಾರದ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ.
'ಸ್ವೀಪ್‌' ಸಮೀಕ್ಷೆ...
ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಅತ್ಯಂತ ಕಡಿಮೆ ಮತದಾನವಾಗಿರುವ ನಾನಾ ತಾಲ್ಲೂಕುಗಳ ಆಯ್ದ 100 ಮತಗಟ್ಟೆಗಳಲ್ಲಿ ಸ್ವೀಪ್ ಸಮಿತಿ ವತಿಯಿಂದ ಮತದಾರರ ಮನೋಭಾವ ಮತದಾನದ ಬಗ್ಗೆ ಅವರಿಗಿರುವ ಅರಿವು ಮತ್ತು ಅನಿಸಿಕೆಗಳನ್ನು ಸಂಗ್ರಹಿಸುವ ಕಾರ್ಯ ಕೈಗೊಳ್ಳಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಇದರಲ್ಲಿ ಪಾಲ್ಗೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.