ವ್ಯಾಪಾರೀಕರಣದಿಂದ ಕಲೆ, ಸಂಸ್ಕೃತಿ ಮಾಯ: ಡಾ. ಹಂಪನಹಳ್ಳಿ ವಿಷಾದ
ಚನ್ನರಾಯಪಟ್ಟಣ: ಮನುಷ್ಯ ವ್ಯಾಪಾರೀಕರಣದ ವಸ್ತುವಾಗುತ್ತಿರುವುದರಿಂದ ಕಲೆ ಸಂಸ್ಕೃತಿ ಅವನಿಂದ ಮಾಯವಾಗುತ್ತಿವೆ ಎಂದು ಜಾನಪದ ತಜ್ಞ ಡಾ. ಹಂಪನಹಳ್ಳಿ ತಿಮ್ಮೇಗೌಡ ವಿಷಾದಿಸಿದರು.
ಪಟ್ಟಣದ ಆದಿಚುಂಚನಗಿರಿ ಶಿಕ್ಷಣ ವಿದ್ಯಾಲಯ ಹಾಗೂ ಕರ್ನಾಟಕ ಜಾನಪದ ಪರಿಷತ್ನ ತಾಲೂಕು ಘಟಕ ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚಿನ ದಿನದಲ್ಲಿ ಮನುಷ್ಯ ಹಣ ಮಾಡುವ ಆಸೆಯಿಂದ ತನ್ನನ್ನು ತಾನೇ ಮಾರಾಟ ಮಾಡಿಕೊಳ್ಳುತ್ತಿದ್ದು, ತನ್ನಲ್ಲಿನ ಕಲೆ ಸಂಸ್ಕೃತಿಯನ್ನು ಮರೆತು ಕೇವಲ ಹಣ ಗಳಿಕೆಯನ್ನೇ ತನ್ನ ಗುರಿಯಾಗಿಸಿಕೊಂಡಿದ್ದಾನೆ ಎಂದು ತಿಳಿಸಿದರು.
ಜಾನಪದ ತಜ್ಞ ಮೇಟಿಕೆರೆ ಹಿರಿಯಣ್ಣ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಲೋಕೇಶ್, ಆದಿಚುಂಚನಗಿರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ದೇವರಾಜು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ತಾಲೂಕು ಅಧ್ಯಕ್ಷ ಶಿವನಗೌಡ ಪಾಟೀಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಂಶುಪಾಲ ಕೆ.ರಘು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ತಂಬೂರಿ ಕಲಾವಿದೆ ಲಕ್ಷಮ್ಮ ಅವರನ್ನು ಸನ್ಮಾನಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

