ಹಾಸನ

ಮತಯಂತ್ರ ಮೊದಲ ಸುತ್ತಿನ ತಾಂತ್ರಿಕ ಪರಿಶೀಲನೆ

Published On :

ಹಾಸನ: ಲೋಕಸಭಾ ಚುನಾವಣೆಗೆ ಹಾಸನ ಕ್ಷೇತ್ರದಲ್ಲಿ ಬಳಸುವ ಎಲ್ಲಾ ಮತಯಂತ್ರಗಳ ಮೊದಲ ಹಂತದ ತಾಂತ್ರಿಕ ಪರಿಶೀಲನಾ ಕಾರ್ಯ ಭಾನುವಾರ ಪ್ರಾರಂಭಗೊಂಡಿತು. ನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಈ ಮತಯಂತ್ರಗಳನ್ನು ಇರಿಸಲಾಗಿದ್ದು ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ತಂತ್ರಜ್ಞರು ತಪಾಸಣೆ ಕೈಗೊಳ್ಳುತ್ತಿದ್ದಾರೆ.
  ಜಿಲ್ಲಾ ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿ ಅನ್ಬುಕುಮಾರ್ ಹಾಗೂ ಅಪರ ಜಿಲ್ಲಾಧಿಕಾರಿ ಡಾ.ಎಚ್.ಎನ್. ಗೋಪಾಲಕೃಷ್ಣ ಅವರ ಸಮ್ಮುಖದಲ್ಲಿ ಚಾಲನೆ ದೊರೆಯಿತು. ಬಿಇಎಲ್‌ನ ಆರು ಮಂದಿ ತಾಂತ್ರಿಕ ಪರಿಣಿತರು ತಾಂತ್ರಿಕ ಪರಿಶೀಲನೆ ನಡೆಸುತ್ತಿದ್ದು, ಎಲ್ಲಾ ಮತಯಂತ್ರಗಳು ಚುನಾವಣೆಯಲ್ಲಿ ಬಳಸಲು ಸಮರ್ಪಕವಾಗಿರುವುದನ್ನು ಎಂಬುದನ್ನು ಪರೀಕ್ಷೆಗಳ ಮೂಲಕ ಖಾತ್ರಿ ಪಡಿಸಿಕೊಳ್ಳುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಅನ್ಬುಕುಮಾರ್ ತಿಳಿಸಿದ್ದಾರೆ.
 ತಂಡವು ಹಾಸನ ಲೋಕಸಭಾ ಚುನಾವಣೆಯಲ್ಲಿ ಬಳಸುವ 2780 ಬ್ಯಾಲೆಟ್ ಮತ್ತು 2180 ಮತ್ತು ಕಂಟ್ರೋಲ್ ಯೂನಿಟ್‌ಗಳನ್ನು ಪರಿಶೀಲಿಸಲಿದ್ದು ಒಂದು ವಾರ ಈ ಪ್ರಕ್ರಿಯೆ ನಡೆಯಲಿದೆ.  
 ಅಣಕು ಮತದಾನ ಮಾಡಿ ಸರಿ ಇದೆಯೇ ಪರಿಶೀಲಿಸಿ ನಂತರ ಸಂಪೂರ್ಣವಾಗಿ ಹೊಸದಾಗಿ ಮತದಾನ ಪ್ರಕ್ರಿಯೆಗೆ ಸಿದ್ದಪಡಿಸಿ ಇಡಲಾಗುತ್ತದೆ. ಚುನಾವಣಾ ತಹಸೀಲ್ದಾರ್ ಬಾಬುರಾವ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಪಲ್ಲವಿ, ಹಾಸನ ತಹಸೀಲ್ದಾರ್ ಮಂಜುನಾಥ್, ಹಾಗೂ ಚುನಾವಣಾ ಕಾರ್ಯದಲ್ಲಿ ತೊಡಗಿರುವ ಇತರ ಹಲವು ಅಧಿಕಾರಿ ಸಿಬ್ಬಂದಿ ಪರಿಶೀಲನಾ ಕಾರ್ಯ ನೋಡಿಕೊಳ್ಳುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.