ಹಾಸನ

ಕುಟುಂಬದ ಒಳಿತಿಗಾಗಿ ಗೌಡರ ರಾಜಕಾರಣ: ಯಶ್ವಂತ್ ಟೀಕೆ

Published On :

ಹಾಸನ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವುದು ತಾವು ಮತ್ತು ತಮ್ಮ ಕುಟುಂಬಕ್ಕೆ ರಾಜಕೀಯವಾಗಿ ಒಳಿತು ಮಾಡಿ ಕೊಳ್ಳಬೇಕೆಂಬ  ಉದ್ದೇಶದಿಂದಲೇ ವಿನಃ ಜನ ಸೇವೆ ಮಾಡಲು ಅಲ್ಲ ಎಂದು ನಗರಸಭೆಯ ಕಾಂಗ್ರೆಸ್ ಸದಸ್ಯ ಯಶ್ವಂತ್ ಆರೋಪಿಸಿದ್ದಾರೆ.
ಗೌಡರನ್ನು ಚುನಾಯಿಸದಿರಿ: ಲೋಕಸಭೆಯಲ್ಲಿ ಒಂದೂ ಪ್ರಶ್ನೆಯನ್ನು ಕೇಳದ ಎಚ್.ಡಿ. ದೇವೇಗೌಡರನ್ನು ಗೆಲ್ಲಿಸುವ ಅವಶ್ಯಕತೆ ಇದೆಯೇ ಎಂಬುದನ್ನು ಜಿಲ್ಲೆಯ ಜನರು ತಮಗೆ ತಾವೇ ಪ್ರಶ್ನಿಸಿಕೊಳ್ಳಬೇಕಿದೆ. ಅವರು, ಸಂಸದರಾಗಿ ಹಾಸನ ಜಿಲ್ಲೆಗೆ ಯಾವ  ಕೊಡುಗೆಯನ್ನೂ ನೀಡಿಲ್ಲ. ಇಂಥವರನ್ನು ಪುನಃ ಅಧಿಕಾರಕ್ಕೆ ತರುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದಿದ್ದಾರೆ.
ಯಜಮಾನಿಕೆ ಅಂತ್ಯಗೊಳಿಸಿ: ಲೋಕಸಭೆ ಚುನಾವಣೆಗೆ ಶಾಸಕ ಎ. ಮಂಜು ಅವರನ್ನು ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಮಾಡಿರುವುದು ಸ್ವಾಗತಾರ್ಹ. ಎಲ್ಲರ ಒಮ್ಮತದ ಅಭ್ಯರ್ಥಿಯಾಗಿರುವ ಅವರನ್ನು ಗೆಲ್ಲಿಸುವ ಮೂಲಕ ಜೆಡಿಎಸ್‌ನವರ ಸ್ವಾರ್ಥ ಹಾಗೂ ಕುಟುಂಬದ ಯಜಮಾನಿಕೆಯನ್ನು ಅಂತ್ಯಗೊಳಿಸಬೇಕು ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.