ಜಿಲ್ಲೆಯಲ್ಲಿ 7800 ಏಡ್ಸ್ ರೋಗಿಗಳು: ಆತಂಕ
ಬೇಲೂರು: ದಿನೇ ದಿನೇ ಹೆಚ್ಚಾಗಿ ಏಡ್ಸ್ ರೋಗ ಹರಡುತ್ತಿದ್ದು ಪ್ರಸ್ತುತ ಜಿಲ್ಲೆಯಲ್ಲಿ 7800 ರೋಗಿಗಳು ಇದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮೇಲ್ವಿಚಾರಕ ರವಿಕುಮಾರ್ ಆತಂಕ ವ್ಯಕ್ತಪಡಿಸಿದರು.
ಪಟ್ಟಣದ ಶಾಂತಲಾ ಮಹಿಳಾ ಪ್ರಥಮ ದರ್ಜೆ ಕಾಲೇಜ್ನಲ್ಲಿ ರೆಡ್ರಿಬ್ಬನ್ ಸಂಸ್ಥೆ ಇತ್ತೀಚೆಗೆ ಏರ್ಪಡಿಸಿದ್ದ ಏಡ್ಸ್ ಜಾಗೃತಿ ಹಾಗೂ ರಕ್ತದಾನ ಶಿಬಿರದಲ್ಲಿ ಮಾತನಾಡುತ್ತಾ, ಈ ಮಾರಕ ರೋಗವನ್ನು ನಿಯಂತ್ರಿಸಲು ಯುವಕರು ಮುಂದಾಗಬೇಕು ಎಂದು ಕರೆ ನೀಡಿದರು.
ವಿದ್ಯಾರ್ಥಿಗಳಲ್ಲಿ ಏಡ್ಸ್ ರೋಗದ ಬಗ್ಗೆ ಅರಿವು ಬಹಳ ಮುಖ್ಯ ಅಂಕಿ- ಅಂಶಗಳ ಪ್ರಕಾರ ಕರ್ನಾಟಕ ಏಡ್ಸ್ ರೋಗದಲ್ಲಿ ಐದನೇ ಸ್ಥಾನದಲ್ಲಿದೆ ಅದರಂತೆ ಹಾಸನ ಜಿಲ್ಲೆ 11ನೇ ಸ್ಥಾನದಲ್ಲಿದೆ ಎಂದರು.
ಅರಿವು ಮೂಡಿಸಬೇಕು: ಬೇಲೂರು ತಾಲೂಕಿನಲ್ಲಿ ಇತ್ತೀಚಿನ ದಿನಗಳಲ್ಲಿ ಏಡ್ಸ್ ರೋಗ ದಿನೇ ದಿನೇ ಹೆಚ್ಚಾಗುತ್ತಿದ್ದು ಅರಿವಿನ ಕೊರತೆಯಿಂದ ರೋಗ ಹರಡುತ್ತಿದೆ. ವಿದ್ಯಾರ್ಥಿಗಳು ಈ ಬಗ್ಗೆ ಅರಿವು ಮೂಡಿಸಲು ಮುಂದಾಗಬೇಕು ಎಂದು ತಿಳಿಸಿದರು.
ತಾಲೂಕು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಡಿ.ಬಿ. ಮೋಹನ್ ಕುಮಾರ್ ಮಾತನಾಡಿ, ಏಡ್ಸ್ ರೋಗ ಬರುವ ಮನ್ನ ಮುನ್ನೆಚ್ಚರಿಕೆ ವಹಿಸಿ ಉತ್ತಮ ಜೀವನ ಸಾಗಿಸಲು ಮುಂದಾಗಬೇಕು. ಯುವ ಜನರು ರೋಗದ ಬಗ್ಗೆ ತಿಳಿದು ಕೊಳ್ಳುವ ಮೂಲಕ ಸಾರ್ವಜನಿಕವಾಗಿ ಅರಿವು ಮೂಡಿಸಬೇಕು ಎಂದರು.
ಶಾಂತಲ ಕಾಲೇಜ್ನ ಪ್ರಾಂಶುಪಾಲೆ ಛಾಯಾ ಶಿವಕುಮಾರ್ ಮಾತನಾಡಿ, ಯುವಜನರು ರೋಗ ಮುಕ್ತ ರಾಷ್ಟವನ್ನಾಗಿಸಲು ಪಣತೊಡಬೇಕು ಹಾಗೂ ರಕ್ತದಾನ ಮಾಡುವ ಮೂಲಕ ಇನ್ನೊಂದು ಜೀವ ಉಳಿಸಲು ಮುಂದಾಗಬೇಕು ಎಂದರು. ಕಾರ್ಯಕ್ರಮದಲ್ಲಿ ಜೀವ ರಕ್ತ ನಿಧಿ ವ್ಯವಸ್ಥಾಪಕ ಮೋಹನ್,ಉಪನ್ಯಾಸಕರಾದ ವಿಜಯಕುಮಾರ್, ರಾಕೇಶ್, ನಾಗೇಶ್ವರ್, ಶಾಂತಲ ಸಂಸ್ಥೆ ಕಾರ್ಯದರ್ಶಿ ಮಂಜೇಗಾಡ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

