ದೊಡ್ಡಮೇಟಿಕುರ್ಕೆಯಲ್ಲಿ ನೀರಿಗಾಗಿ ಪ್ರತಿಭಟನೆ
ಅರಸೀಕೆರೆ: ಕುಡಿಯುವ ನೀರಿನ ಸಮಸ್ಯೆ ಪರಿಹರಿಸಬೇಕೆಂದು ಒತ್ತಾಯಿಸಿ ಗ್ರಾಮ ಗ್ರಾಮಸ್ಥರು ಗ್ರಾಪಂ ಕಚೇರಿಗೆ ಬೀಗ ಜಡಿದು ಇತ್ತೀಚೆಗೆ ಪ್ರತಿಭಟನೆ ನಡೆಸಿದರು. ಕಚೇರಿ ಆವರಣದಲ್ಲೇ ಧರಣಿ ನಡೆಸಿದ ಅವರು, ಖಾಲಿ ಕೊಡ ಪ್ರದರ್ಶಿಸಿ ತಮ್ಮ ಅಸಹನೆ ತೋರ್ಪಡಿಸಿದರು. ನೂರಾರು ಮಹಿಳೆಯರೂ ಭಾಗವಹಿಸಿದ್ದ ಈ ಪ್ರತಿಭಟನೆಯಲ್ಲಿ ತಾಪಂ ಸದಸ್ಯರೂ ಸೇರಿಕೊಂಡಿದ್ದು ವಿಶೇಷವಾಗಿತ್ತು.
ಗ್ರಾಪಂ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಎಸ್.ಆರ್. ಶಿವಕುಮಾರ್ ನೇತೃತ್ವದಲ್ಲಿ ಜಮಾಯಿಸಿದ ಗ್ರಾಮಸ್ಥರು ಪಂಚಾಯಿತಿ ಕಾರ್ಯವೈಖರಿಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಇದೇ ವೇಳೆ ಶಿವಕುಮಾರ ಮಾತನಾಡಿ, ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಉಂಟಾಗಿದೆ. ಪ್ರತಿನಿತ್ಯ ಮಹಿಳೆಯರು ಹಾಗೂ ಯುವಕರು ನೀರು ಬರುವ ಕಾಯಕದಲ್ಲಿಯೇ ಕಾಲ ಕಳೆಯುವಂತಹ ಸನ್ನಿವೇಶ ನಿರ್ಮಾಣಗೊಂಡಿದೆ ಎಂದು ಹೇಳಿದರು.
ಮನವಿ ಪ್ರಯೋಜನವಾಗಿಲ್ಲ: ಗ್ರಾಮದಲ್ಲಿ ಸುಮಾರು 10 ಕೊಳವೆ ಬಾವಿಗಳಿದ್ದರೂ ಆ ಪೈಕಿ ಒಂಭತ್ತು ಕೊಳವೆ ಬಾವಿಗಳಲ್ಲಿ ನೀರು ಬತ್ತಿ ಹೋಗಿವೆ. ಉಳಿದಿರುವ ಒಂದು ಕೊಳವೆ ಬಾವಿ ನೀರಿನಲ್ಲಿ ಜನರು ನೀರು ಪಡೆಯಬೇಕಿದೆ. ಅಲ್ಲದೇ, ಗ್ರಾಮದಲ್ಲಿರುವ ಶುದ್ಧ ಕುಡಿಯುವ ನೀರು ಪೂರೈಕೆ ಘಟಕದಲ್ಲಿಯೂ ಸಹ ಕೊಳವೆ ಬಾವಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿ ಗ್ರಾಹಕರಿಗೆ ಎರಡು ದಿನಕ್ಕೊಮ್ಮೆ ನೀರು ವಿತರಿಸುವಂತಾಗಿದೆ. ಈ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಇದುವರೆವಿಗೂ ಯಾವುದೇ ಪ್ರಯೋಜನವಾಗಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯ ಚೌಡಪ್ಪ, ಮಾಜಿ ಸದಸ್ಯ ಡಿ.ಪಿ. ಪಾಲಾಕ್ಷಮೂರ್ತಿ ಮುಖಂಡರಾದ ರೇವಣ್ಣ, ಶಿವಲಿಂಗಪ್ಪ, ಡಿ.ಎಸ್.ಎಸ್. ಮುಖಂಡ ಡಿ.ಕೆ. ಹರೀಶ್, ರೇವಣ್ಣ, ಮಹಿಳೆಯರಾದ ಲಲಿತಮ್ಮ, ಶಿವಮ್ಮ ಇತರರು ನೇತೃತ್ವ ವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

