ಹಾಸನ

ನೀರಗಂಟಿ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

Published On :

ಬೇಲೂರು: ಸಮರ್ಪಕ ನೀರು ಸರಬರಾಜು ಮಾಡುತ್ತಿಲ್ಲ ಎಂದು ಆರೋಪಿಸಿ ಗ್ರಾಮ ಪಂಚಾಯಿತಿಯ ನೀರು ಸರಬರಾಜು ಮಾಡುವ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಘಟನೆ  ಸೋಮವಾರ ರಾತ್ರಿ ನಡೆದಿದೆ.
ಹಲ್ಲೆಗೊಳಗಾದ ನೌಕರ ಕೆ. ರಂಗಸ್ವಾಮಿ, ಸೋಮವಾರ ರಾತ್ರಿ ಹಗರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗಡಿ ಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.
ರಂಗಸ್ವಾಮಿ ಅವರು ಬೇಲೂರು ಸರ್ಕಾರಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಲೆ ಮತ್ತು ಕಿವಿಯ ಭಾಗಗಳಿಗೆ ಗಂಭೀರ ಗಾಯಗಳಿವೆ. ಹಳೇಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೀರು ಸರಬರಾಜು ಕಷ್ಟ: ಪತ್ರಿಕೆಯೊಂದಿಗೆ ಮಾತನಾಡಿದ ರಂಗಸ್ವಾಮಿ, ಅಂಗಡಿಹಳ್ಳಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿಯಿಂದ ಎರಡು ಕೊಳವೆ ಬಾವಿಗಳನ್ನು ತೆಗೆಸಲಾಗಿದೆ. ಆದರೆ, ಒಂದು ಕೊಳವೆ ಬಾವಿಯಲ್ಲಿ ನೀರು ಬರುತ್ತಿಲ್ಲ. ಮತ್ತೊಂದರಲ್ಲಿ ಅಂತರ್ಜಲದ ಕೊರತೆಯಿಂದ ನೀರಿನ ಪ್ರಮಾಣ ಕಡಿಮೆಯಿದೆ, ಗ್ರಾಮದಲ್ಲಿ 600 ಮನೆಗಳಿದ್ದು ಎಲ್ಲ ಮನೆಗಳಿಗೆ ಸಮರ್ಪಕವಾಗಿ ಕುಡಿಯುವ ನೀರು ಒದಗಿಸಲು ಕಷ್ಟವಾಗುತ್ತಿದೆ ಎಂದರು.
ಸೋಮವಾರ ರಾತ್ರಿ 7.30ರ ಸಮಯದಲ್ಲಿ ಕೊಳವೆ ಬಾವಿಯ ಹತ್ತಿರ ಹೋಗಿ ಪರಿಶೀಲನೆ ನಡೆಸುತ್ತಿದ್ದಾಗ ಇದೇ ಗ್ರಾಮದ ಸೌಂದರ್ ರಾಜ್ ಎಂಬುವವರು ಹಿಂದಿನಿಂದ ಬಂದು ಮಚ್ಚು ಹಾಗೂ ಕಲ್ಲಿನಿಂದ ಹಲ್ಲೆ ನಡೆಸಿದರು ಎಂದು ಅವರು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.