ಪುರುಷರಿಗೆ ಸಂತಾನಹರಣ ಶಸ್ತ್ರಚಿಕಿತ್ಸೆಯ ಅರಿವು
ಹೊಳೆನರಸೀಪುರ: ತಾಲೂಕಿನ ಹಳೇಕೋಟೆಯಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಾಯಂದಿರ ಮರಣ ಪ್ರಮಾಣ, ಶಿಶುಮರಣ ತಡೆಗಟ್ಟುವ ಕುರಿತು ಮತ್ತು ಪುರುಷರಿಗೆ ಸಂತಾನ ಹರಣ ಶಸ್ತ್ರಚಿಕಿತ್ಸೆ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ನಡೆಸಲಾಯಿತು.
ಸಭೆಯಲ್ಲಿ ಪ್ರಾ.ಆ. ಕೇಂದ್ರದ ವೈದ್ಯಾಧಿಕಾರಿ ಡಾ. ಶಮ್ಮಿ ಮಾತನಾಡಿ, ತಾಯಂದಿರ ಹಾಗೂ ಶಿಶುಮರಣಕ್ಕೆ ಗಂಡಾಂತರ ಗರ್ಭಧಾರಣೆ, ರಕ್ತಹೀನತೆ ಕಾರಣ ಎಂದರು. ರಕ್ತಹೀನತೆ ಹೋಗಲಾಡಿಸಲು ಇರುವ ಮಾರ್ಗೋಪಾಯಗಳ ಬಗ್ಗೆ ಅವರು ಇದೇ ಸಂದರ್ಭದಲ್ಲಿ ವಿವರಿಸಿದರು. ಎದೆ ಹಾಲಿನ ಮಹತ್ವ, ಪಂಚಶುಚಿತ್ವ, ನ್ಯುಮೋನಿಯಾ, ಅತಿಸಾರ ಭೇದಿ, ಲಸಿಕಾ ಕಾರ್ಯಕ್ರಮಗಳ ಬಗ್ಗೆ, ಪೂರಕ ಆಹಾರವನ್ನು ಹೇಗೆ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಅವರು ವಿವರಿಸಿದರು.
ಮನವಿ: ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಆಶಾ ಮಾತನಾಡಿ, ತಾಯಂದಿರು ಅವರ ವೈಯಕ್ತಿಕ ಶುಚಿತ್ವದ ಕಡೆ ಹೆಚ್ಚು ಗಮನಹರಿಸಿ, ಗರ್ಭಿಣಿಯಾದ ತಕ್ಷಣ ತಾಯಿ ಕಾರ್ಡ್ ನೋಂದಣಿ ಮಾಡಿಸಿಕೊಂಡು ಸರ್ಕಾರದ ಹಲವಾರು ಯೋಜನೆಗಳಾದ ಮಡಿಲು, ಜನನಿ, ಸುರಕ್ಷಾ, ಪ್ರಸೂತಿ ಆರೈಕೆ ಹಾಗೂ ತಾಯಿ ಭಾಗ್ಯ, ಜನನಿ ಶಿಶು ಸುರಕ್ಷಾ ಕಾರ್ಯಕ್ರಮಗಳ ಬಗ್ಗೆ ವಿವರಿಸಿ ಇವುಗಳ ಅನುಕೂಲ ಪಡೆದುಕೊಳ್ಳುವಂತೆ ಮನವಿ ಮಾಡಿಕೊಂಡರು.
ಸಲಹೆ: ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿ ಮಂಜುಳಾ ಮಾತನಾಡಿ, ತಾಯಂದಿರು ಶಿಶುಮರಣವನ್ನು ತಡೆಗಟ್ಟುವ ನಿಟ್ಟಿನಲ್ಲಿ ಮಗು ಹುಟ್ಟಿದ ತಕ್ಷಣ ಮಕ್ಕಳಿಗೆ ಸಕಾಲದಲ್ಲಿ ಲಸಿಕೆಗಳನ್ನು ಹಾಕಿಸುವುದನ್ನು ಮರೆಯದೆ ಜಾಗೃತರಾಗಬೇಕೆಂದು ಸಲಹೆ ನೀಡಿದರು.
ಶಿಬಿರದ ಮಾಹಿತಿ: ಪ್ರಾ.ಆ.ಕೇಂದ್ರದ ಹಿರಿಯ ಪುರುಷ ಆರೋಗ್ಯ ಸಹಾಯಕ ಆರ್.ಬಿ. ಪುಟ್ಟೇಗೌಡ ಮಾತನಾಡಿ, ಪುರುಷರಿಗೆ ಗಾಯವಿಲ್ಲದ, ಹೊಲಿಗೆಯಿಲ್ಲದ ಅತಿ ಸುಲಭ, ಸರಳ ರೀತಿಯಲ್ಲಿ ಸಂತಾನಹರಣ ಶಸ್ತ್ರ ಚಿಕಿತ್ಸೆ ಮಾಡಲಾಗುವುದು. ಈಗಾಗಲೇ ಹೊಳೆನರಸೀಪುರದಲ್ಲಿ ಶಿಬಿರವನ್ನು ಏರ್ಪಡಿಸಿದ್ದು, ಈ ಶಿಬಿರದ ಉಪಯೋಗವನ್ನು ಪಡೆದುಕೊಳ್ಳುವಂತೆ ತಿಳಿಸಿದರು. ಮಹಿಳೆಯರೂ ತಮ್ಮ ಗಂಡಸರಿಗೆ ಸಂತಾನ ಹರಣ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವಂತೆ ಮನವೊಲಿಸಲು ಸಲಹೆ ನೀಡಿದರು.
ಗರ್ಭಿಣಿಯರು, ಬಾಣಂತಿಯರು, ಹೊಳೆನರಸೀಪುರದ ಸರ್ಕಾರಿ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳಾದ ಜಿಂಟಾ, ಮೀನು, ಆಶಾ ಕಾರ್ಯಕರ್ತೆ ಶೋಭಾ, ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಜಯಲಕ್ಷ್ಮಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

