ಹಾಸನ

ಸಮಸ್ಯೆಗೆ ಪರಿಹಾರ?

Published On :

ಬೇಲೂರು: ಮೂಲಭೂತ ಸೌಲಭ್ಯ ಇಲ್ಲದ ಬೇಲೂರು ಕೇಂಪೇಗೌಡರ ವೃತ್ತದ ಬಳಿಯ ಮೆಟ್ರಕ್ ವಿದ್ಯಾರ್ಥಿ ನಿಲಯಕ್ಕೆ ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಲಕ್ಷ್ಮೇಗೌಡ ಭೇಟಿ ನೀಡುವ ಮೂಲಕ ಸಮಸ್ಯೆಗಳನ್ನು ಖುದ್ದು ಪರಿಶೀಲಿಸಿ, ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡರು.
ಎರಡು ದಿನದ ಹಿಂದೆ ವಿದ್ಯಾರ್ಥಿ ನಿಲಯದಲ್ಲಿ ಮೂಲ ಸೌಲಭ್ಯವಿಲ್ಲದ ಕಾರಣ ಇಲ್ಲಿನ ಸುಮಾರು 50 ವಿದ್ಯಾರ್ಥಿಗಳು ರಾತ್ರೋರಾತ್ರಿ ಊಟ ಬಿಟ್ಟು ಪ್ರತಿಭಟನೆ ನಡೆಸಿದ್ದರು.
ಈ  ಹಿನ್ನೆಲೆಯಲ್ಲಿ ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ವಸತಿ ನಿಲಯಕ್ಕೆ ಭೇಟಿ ನೀಡಿ, ಸಮಸ್ಯೆಗಳ ಪರಿಶೀಲನೆ ನಡೆಸಿದರು.
ಕ್ರಮಗಳ ಬಗ್ಗೆ ಭರವಸೆ: ಆನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಲಕ್ಷ್ಮೇಗೌಡ, ವಸತಿ ನಿಲಯದಲ್ಲಿ ತರಕಾರಿ ಮತ್ತು ಬೆಳೆ ಧಾನ್ಯಗಳು ವಾರ್ಡನ್ ಅವರು ಅಡುಗೆ ಮಾಡುವರಿಗೆ ಹೇಗೆ ಸರಬರಾಜು ಮಾಡುತ್ತಾರೆ ಎಂಬ ಬಗ್ಗೆ ಮಾಹಿತಿ ಸಂಗ್ರಹ ಮಾಡಲಾಗಿದೆ. ಅಲ್ಲದೆ ಇಲ್ಲಿನ ಅಡಿಗೆಭಟ್ಟ ಪುಟ್ಟರಾಜು ದಿನಗೂಲಿ ನೌಕರನಾಗಿದ್ದು, ಕುಡಿದು ಬಂದು ಅಡಿಗೆ ಮಾಡುವ ಬಗ್ಗೆ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದ ಕಾರಣ ಆತನನ್ನು ತಾಲೂಕಿನಿಂದ ತೆಗೆದು ಹಾಕುವ ಬಗ್ಗೆ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗೆ ತಿಳಿಸಲಾಗುತ್ತದೆ. ವಸತಿ ನಿಲಯ ಖಾಸಗಿ ಕಟ್ಟಡದಲ್ಲಿ ಇದ್ದು, ಬಂಟೇನಹಳ್ಳಿಯಲ್ಲಿ ನೂತನ ಕಟ್ಟಡ ನಿರ್ಮಾಣವಾದ ನಂತರ ಬದಲಾವಣೆ ಮಾಡಲಾಗುತ್ತದೆ. ಹಾಸಿಗೆ ಮತ್ತು ಮಂಚಗಳನ್ನು ಪುರಸಭೆ ಶೇ. 22ರ ಅನುದಾನದಲ್ಲಿ ನೀಡುವ ಭರವಸೆಯನ್ನು ಅಧಿಕಾರಿಗಳು ನೀಡಿದ್ದಾರೆ. ವಾರಕ್ಕೆ ಎರಡು ಭಾರಿ ಇಲ್ಲಿ ಭೇಟಿ ನೀಡಿ ಸಮಸ್ಯೆ ಆಲಿಸಲಾಗುತ್ತದೆ ಎಂದರು. ವಾರ್ಡನ್ ಸಂತೋಷಕುಮಾರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.