ಜಿಲ್ಲಾಧಿಕಾರಿ ಕಚೇರಿ ಸುತ್ತ ನಿಷೇಧಾಜ್ಞೆ ಜಾರಿ
ಹಾಸನ: ಲೋಕಸಭೆ ಚುನಾವಣೆ ಸಂಬಂಧಿಸಿದಂತೆ ಮಾ. 19ರಿಂದ ಮಾ. 29ರವರೆಗೆ ಜಿಲ್ಲಾಧಿಕಾರಿ ಕಚೇರಿ ಸುತ್ತಲಿನ 100 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಚುನಾವಣಾಧಿಕಾರಿಗಳ ಕಾರ್ಯಾಲಯ, ಜಿಲ್ಲಾಧಿಕಾರಿ ಕಚೇರಿಯಲ್ಲೇ ಕಾರ್ಯನಿರ್ವಹಿಸುತ್ತಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ.
ಮಾ. 19ರಿಂದ ಲೋಕಸಭೆ ಚುನಾವಣೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಳ್ಳಲಿದ್ದು, ನಾಮಪತ್ರಗಳ ಸ್ವೀಕೃತಿ, ಪರಿಶೀಲನೆ, ಹಿಂಪಡೆಯುವಿಕೆ ಹಾಗೂ ಅಭ್ಯರ್ಥಿ ಘೋಷಣೆ ಪ್ರಕಟವಾಗುವ ಪ್ರಕ್ರಿಯೆಗಳು ಮಾ. 29ರವರೆಗೆ ನಡೆಯಲಿವೆ. ಈ ಕಾರಣಕ್ಕಾಗಿಯೇ ನಿಷೇಧಾಜ್ಞೆ ವಿಧಿಸಲಾಗಿದೆ.
ಇದರನ್ವಯ, ನಾಲ್ಕಕ್ಕಿಂತ ಹೆಚ್ಚು ಮಂದಿ ಗುಂಪುಗಾರಿಕೆ ನಡೆಸುವುದು ಮತ್ತು ಮಾರಕಾಸ್ತ್ರಗಳೊಂದಿಗೆ ಓಡಾಡುವುದನ್ನು ನಿರ್ಬಂಧಿಸಲಾಗಿದೆ. ಚುನಾವಣಾ ಕಾರ್ಯದ ಮೇಲೆ ನಿರತರಾಗಿರುವ ಸಿಬ್ಬಂದಿ ವರ್ಗ ಮತ್ತು ಸಂಬಂಧಿಸಿದ ಅಧಿಕಾರಿಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ಸಾರ್ವಜನಿಕರ ಪ್ರವೇಶ ಹಾಗೂ ವಾಹನ ನಿಲುಗಡೆಯನ್ನೂ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ವಿ. ಅನ್ಬುಕುಮಾರ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

