ಹಾಸನ

ಚುನಾವಣಾ ವೆಚ್ಚ ವೀಕ್ಷಕರ ಆಗಮನ

Published On :

ಹಾಸನ: ಲೋಕಸಭಾ ಚುನಾವಣೆಗೆ  ಹಾಸನ ಕ್ಷೇತ್ರಕ್ಕೆ ಇಬ್ಬರು ವೆಚ್ಚ ವೀಕ್ಷಕರನ್ನು  ನಿಯೋಜಿಸಲಾಗಿದ್ದು, ಈ ಇಬ್ಬರು ಅಧಿಕಾರಿಗಳು ಜಿಲ್ಲೆಗೆ ಆಗಮಿಸಿ ವರದಿ ಮಾಡಿಕೊಂಡಿದ್ದಾರೆ. ಹಾಸನ ಲೋಕಸಭಾ ಕ್ಷೇತ್ರ ಹಾಸನ, ಹೊಳೆನರಸೀಪುರ, ಅರಕಲಗೂಡು, ಸಕಲೇಶಪುರ ವಿಧಾನ ಸಭಾ ಕ್ಷೇತ್ರಗಳ ಚುನಾವಣಾ ವೆಚ್ಚ ವೀಕ್ಷಕರಾಗಿ ಕಿಟ್ಟಿಜಾನ್ ಮತ್ತು ಶ್ರವಣಬೆಳಗೊಳ, ಅರಸೀಕೆರೆ, ಬೇಲೂರು, ಕಡೂರು, ಕ್ಷೇತ್ರಗಳ ವೆಚ್ಚ ವೀಕ್ಷಕರಾಗಿ ಈಶ್ವರ ರೆಡ್ಡಿ, ಕಾರ್ಯ ನಿರ್ವಹಿಸಲಿದ್ದಾರೆ. ಈ ವೆಚ್ಚ ವೀಕ್ಷಕರಿಗೆ ಲೈಸನ್ಸಿಂಗ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಕಿಟ್ಟಿಜಾನ್ ಅವರ ನೆರವಿಗಾಗಿ ಬೇಲೂರಿನ ಪಶು ವೈದ್ಯಾಧಿಕಾರಿ ಡಾ. ಸಂತೋಷ ದೂರವಾಣಿ ಸಂಖ್ಯೆ: 9740293003 ಮತ್ತು ಈಶ್ವರರೆಡ್ಡಿ ಅವರ ನೆರವಿಗಾಗಿ ತೋಟಗಾರಿಕೆ ಇಲಾಖೆಯ ಅರಸೀಕೆರೆಯ ಸಹಾಯಕ ನಿರ್ದೇಶಕರಾದ ರಘು ಅವರನ್ನು  ದೂರವಾಣಿ ಸಂಖ್ಯೆ. 9900116060 ನೇಮಿಸಲಾಗಿದೆ. ಚುನಾವಣಾ ವೆಚ್ಚಗಳಿಗೆ ಸಂಬಂಧಿಸಿದಂತೆ ಏನಾದರೂ ದೂರುಗಳಿದ್ದಲ್ಲಿ ಈ ಅಧಿಕಾರಿಗಳ ಗಮನಕ್ಕೆ ತರಬಹುದಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.