ಜಾತಿ ರಾಜಕಾರಣದಲ್ಲಿ ನಂಬಿಕೆ ಇಲ್ಲ
ಹಾಸನ: ನೀತಿ ಹಾಗೂ ಶಿಸ್ತು ಬದ್ಧ ರಾಜಕರಣದಲ್ಲಿ ನಂಬಿಕೆ ಇಟ್ಟಿರುವ ನನಗೆ ಜಾತಿ ರಾಜಕಾರಣದಲ್ಲಿ ನಂಬಿಕೆ ಇಲ್ಲ ಎಂದು ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ವಿಜಯಶಂಕರ ತಿಳಿಸಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಜಿಲ್ಲೆಯ ಅಭ್ಯರ್ಥಿಯಾಗಿ ಆಯ್ಕೆಗೊಂಡ ಬಳಿಕ ನಗರಕ್ಕೆ ಆಗಮಿಸಿ ಮಾತನಾಡಿದ ಅವರು, ಶಿಸ್ತು ಬದ್ಧ ರಾಜಕಾರಣವನ್ನು ಪಕ್ಷ ಕೊಟ್ಟಿದೆ ಅದರಂತೆ ನಾನು ಪಾಲಿಸುತ್ತೇನೆ. ಪಕ್ಷದ ಇಚ್ಛೆಗೆ ಅನುಗುಣವಾಗಿ ಚುನಾವಣೆಯಲ್ಲಿ ಕಣಕ್ಕೆ ಇಳಿಯಲು ಆದೇಶ ಬಂದಿದೆ. ನಾನೊಬ್ಬ ನಿಷ್ಠಾವಂತ ಪಕ್ಷದ ಕಾರ್ಯಕರ್ತ. ನಾಲ್ಕು ಬಾರಿ ಪಕ್ಷದಿಂದ ನಿಂತು ಎರಡು ಬಾರಿ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದೇನೆ. ವಿಧಾನಸಭಾ ಚುನಾವಣೆಯಲ್ಲೂ ಗೆಲುವು ಗಳಿಸಿ ಸಚಿವನಾಗಿ ಕೂಡ ಕೆಲಸ ಮಾಡಿದ ಅನುಭವ ಇದೆ ಎಂದು ಹೇಳಿಕೊಂಡರು.
ದೇಶ ಈಗ ಒಂದು ಬದಲಾವಣೆಯನ್ನು ನಿರೀಕ್ಷಿಸುತ್ತಿದೆ. ನರೇಂದ್ರ ಮೋದಿ ನಾಯಕತ್ವದಂತೆ ಪಕ್ಷವು ಅದೇ ರೀತಿ ನನಗೆ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲು ಆದೇಶ ನೀಡಿದೆ ಎಂದ ಅವರು, ಇದೊಂದು ರಾಷ್ಟ್ರಮಟ್ಟದ ಚುನಾವಣೆ ಆ ಹಿನ್ನೆಲೆಯಲ್ಲಿ ಯಾವ ಕಡೆ ಬಲಿಷ್ಟವಾಗಿದೆ. ಈ ಎಲ್ಲವನ್ನು ಗಮನದಲ್ಲಿಟ್ಟುಕೊಂಡು ಇಂತಹ ತೀರ್ಮಾನ ಪಕ್ಷ ಕೈಗೊಂಡಿದೆ ಎಂದು ಸ್ಪಷ್ಟಪಡಿಸಿದರು.
ನನಗೆ ಪಕ್ಷದಲ್ಲಿ ಉನ್ನತ ಮಟ್ಟದ ಸ್ಥಾನಮಾನ ನೀಡಿದ್ದು, ಅದರಂತೆ ನಾನು ನಡೆದುಕೊಳ್ಳುತ್ತೇನೆ. ಬಿಜೆಪಿ ಅಧಿಕಾರಕ್ಕೆ ಬರುವ ಎಲ್ಲಾ ಲಕ್ಷಣಗಳು ಇರುವುದರಿಂದ ಈ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸುತ್ತೇನೆ. ಈಗಾಗಲೇ ಪಕ್ಷದ ಹಿರಿಯರ ಸಂಪರ್ಕ ಮಾಡಿ ಸಲಹೆ ಸೂಚನೆ ಪಡೆದಿರುವುದಾಗಿ ತಿಳಿಸಿದರು.
ಇದೊಂದು ಪ್ರಾದೇಶಿಕ, ವಿಧಾನಸಭೆ ಚುನಾವಣೆಯಲ್ಲ ರಾಷ್ಟ್ರೀಯ ಚುನಾವಣೆ ಆಗಿರುವುದರಿಂದ ಜನತೆ ಮತದಾನ ಮಾಡುತ್ತಾರೆ. ಹಾಸನ ಜಿಲ್ಲೆಯಲ್ಲಿ ಈ ಬಾರಿ ಬಿಜೆಪಿಗೆ ಅವಕಾಶ ಕಲ್ಪಿಸುವದರಲ್ಲಿ ಯಾವ ಸಂಶಯ ಇಲ್ಲ ಎಂದು ಭರವಸೆ ನುಡಿದರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾದಿಕಾರದ ಮಾಜಿ ಅಧ್ಯಕ್ಷರು ಬಿಜೆಪಿ ಮುಖಂಡರು ನವಿಲೆ ಅಣ್ಣಪ್ಪ, ಜಿಲ್ಲಾಧ್ಯಕ್ಷ ರೇಣುಕುಮಾರ್ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

