ರಸ್ತೆ ದುರವಸ್ಥೆಗೆ ರೋಸಿ ಬೀದಿಗಿಳಿದ ಜನತೆ
ಹಾಸನ: ಹಾಸನ- ದುದ್ದ ರಸ್ತೆಯನ್ನು ದುರಸ್ತಿಗಾಗಿ ಆಗ್ರಹಿಸಿ ಹಾಸನ ನಗರಕ್ಕೆ ಹೊಂದಿಕೊಂಡಂತೆ ಇರುವ ಬಿ. ಕಾಟೀಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಅಂಗಡಿ- ಮುಂಗಟ್ಟುಗಳನ್ನು ಬಂದ್ ಮಾಡಿ ಗುರುವಾರದಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದ್ದಾರೆ.
ನಗರದ ಬಿ. ಕಾಟೀಹಳ್ಳಿಯ ಮುಖ್ಯರಸ್ತೆಯಲ್ಲಿ ಅಡ್ಡಲಾಗಿ ಕೂತು ರಸ್ತೆ ತಡೆ ನಡೆಸಿದರು. ಇದರಿಂದ ಕೆಲ ಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿ ಅಸ್ತವ್ಯವಸ್ಥಗೊಂಡಿತ್ತು. ರಸ್ತೆ ದುರಸ್ತಿಗೆ ಆಗ್ರಹಿಸಿ ಘೋಷಣೆಗಳನ್ನು ಕೂಗಿದರು.
ಪ್ರತಿಭಟನಾಕಾರರ ಆಕ್ರೋಶ: ದುದ್ದ ರಸ್ತೆಯು ಕಳೆದ 10 ವರ್ಷಗಳಿಂದ ದುರಸ್ತಿ ಆಗದೇ ಬಹಳ ಹಾಳಾಗಿ ಹೋಗಿದೆ. ದೊಡ್ಡ ಗುಂಡಿಗಳಿಂದ ಕೂಡಿದ ರಸ್ತೆಯಲ್ಲೆ ಪ್ರತಿನಿತ್ಯ ವಿದ್ಯಾರ್ಥಿಗಳು, ಸಾರ್ವಜನಿಕರು ಓಡಾಡಲು ಪರ ದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಹದಗೆಟ್ಟಿರುವ ರಸ್ತೆ ಸಂಚಾರದಿಂದಾಗಿ ವಾಹನಗಳು ಸಂಚರಿಸಲು ಸಾಧ್ಯವಾಗದೇ ಹರಸಾಹಸ ಪಡುವಂತಾಗಿದೆ. ಕೆಟ್ಟ ರಸ್ತೆಯಿಂದಾಗಿ ವಾಹನಗಳೂ ರಿಪೇರಿಗೆ ಬರುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಸ್ತೆ ಕಾಮಗಾರಿ ಹೊಣೆಹೊತ್ತ ಅಭಿಜಿತ್ ಗ್ರೂಪ್ ಕಾಮಗಾರಿ ನಿರ್ವಹಿಸದೇ ಕಾಣೆಯಾಗಿದೆ. ಸಂಚಾರ ಅತಿ ದುಸ್ತರವಾಗಿರುವ ಈ ರಸ್ತೆಯಲ್ಲಿ ಅಪಘಾತಗಳು ಹೆಚ್ಚಾಗುತ್ತಿದ್ದು, ಸಾವು- ನೋವು ಸಂಭವಿಸುತ್ತಿವೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

