ಆಮಿಷಗಳಿಗೆ ಬಲಿಯಾಗಬೇಡಿ: ಸುಜ್ಞಾನ ಮೂರ್ತಿ
ಹೊಳೆನರಸೀಪುರ: ಮತವನ್ನು ಚಲಾಯಿಸುವ ಮೊದಲು ಮತದಾರರು ಅಭ್ಯರ್ಥಿಗಳ ಆಸೆ ಅಮಿಷಗಳಿಗೆ ಬಲಿಯಾಗದೆ ದೇಶದ ಭದ್ರ ಬುನಾದಿಗೆ ಸೂಕ್ತ ಹಾಗೂ ನ್ಯಾಯಸಮ್ಮತವಾದ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಮೂಲಕ ದೇಶದ ಸುಭದ್ರತೆಗೆ ಕಾರಣೀಭೂತರಾಗಬೇಕೆಂದು ಸಹಾಯಕ ಚುನಾವಣಾಧಿಕಾರಿ ಸುಜ್ಞಾನಮೂರ್ತಿ ನುಡಿದರು.
ತಾಲೂಕು ಆಡಳಿತದ ವತಿಯಿಂದ ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಮತದಾನದ ಬಗ್ಗೆ ಅರಿವು ಮತ್ತು ಪ್ರತಿಜ್ಞಾ ವಿಧಿ ಬೊಧನೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದ ಅವರು, ಪ್ರಜಾಪ್ರಭುತ್ವ ಬಲಗೊಳಿಸುವ ಸಲುವಾಗಿ ಪ್ರತಿಯೊಬ್ಬರೂ ತಮ್ಮ ಮತದಾನ ಹಕ್ಕನ್ನು ಚಲಾಯಿಸಬೇಕು. ಆದರೆ, ದೇಶದ ಉಜ್ವಲ ಭವಿಷ್ಯವನ್ನು ಭವಿಷ್ಯ ರೂಪಿಸಬೇಕಾದ ಮತದಾರರು ಇತ್ತೀಚಿನ ದಿನಗಳಲ್ಲಿ ತಮ್ಮ ಮತದಾನದ ಹಕ್ಕನ್ನು ಚಲಾವಣೆ ಮಾಡದೆ ಇರುವುದರಿಂದ ಸಮಾಜದ ಮೇಲೆ ಸಾಕಷ್ಟು ದುಷ್ಪರಿಣಾಮಗಳು ಬೀರುತ್ತಿವೆ ಎಂದರು.
ಕಿವಿಮಾತು: ಪ್ರತಿಯೊಬ್ಬ ಪ್ರಜೆಯೂ ನೀಡುವ ಒಂದೊಂದು ಮತವೂ ಕೂಡ ದೇಶದ ಸುಭದ್ರತೆಗೆ ಕಾರಣವಾಗಬೇಕಿದೆ. ಆದ್ದರಿಂದ ಏ. 17ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ತಮ್ಮ ಹಕ್ಕನ್ನು ಚಲಾಯಿಸಬೇಕೆಂದು ಕಿವಿಮಾತು ಹೇಳಿದರು.
ಪ್ರತಿಜ್ಞೆ: ಕಾರ್ಯಕ್ರಮಕ್ಕೆ ಆಗಮಿಸಿದ್ದ ಪಟ್ಟಣದ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಮತದಾನ ಬಗ್ಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು.
ಪ್ರತಿಜ್ಞಾವಿಧಿ ಸಮಾರಂಭದಲ್ಲಿ ಜಿಲ್ಲಾ ನೋಡಲ್ ಅಧಿಕಾರಿ ವೇಣುಗೋಪಾಲ್, ತಾಲೂಕು ನೋಡಲ್ ಅಧಿಕಾರಿ ಆರ್.ನರಸಿಂಹಮೂರ್ತಿ, ತಹಸೀಲ್ದಾರ್ ರಾಘವೇಂದ್ರ, ಬಿಇಒ ಶಿವಮಾದಪ್ಪ, ಪುರಸಭೆ ಮುಖ್ಯಾಧಿಕಾರಿ ಎಚ್.ವಿ. ಹರೀಶ್ ಮತ್ತಿತರರು ಭಾಗವಹಿಸಿದ್ದರು.
ಸಮಾರಂಭದ ಬಳಿಕ ಸಭೆಯಲ್ಲಿ ಹಾಜರಿದ್ದ ಸಾರ್ವಜನಿಕರು ಮತ್ತು ಸಂಘ ಸಂಸ್ಥೆ ಪದಾಧಿಕಾರಿಗಳು ಚುನಾವಣೆಯಲ್ಲಿ ತೊಡಗಿಸಿಕೊಳ್ಳಬೇಕಾದ ಬಗ್ಗೆ ತಮ್ಮ ಅನಿಸಿಕೆಗಳನ್ನು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

