ಹಾಸನ

ಹೊಳೆನರಸೀಪುರಕ್ಕೆ ರಾಜ್ಯಪಾಲ ಭಾರದ್ವಾಜ್ ಭೇಟಿ

Published On :

ಹೊಳೆನರಸೀಪುರ: ಚಿಕ್ಕಮಗಳೂರಿನಿಂದ ಮೈಸೂರಿಗೆ ತೆರಳುವ ಮಾರ್ಗ ಮಧ್ಯೆ ರಾಜ್ಯದ ರಾಜ್ಯಪಾಲರಾದ ಹಂಸರಾಜ್ ಭಾರಧ್ವಾಜ್ ಅವರು ಶುಕ್ರವಾರ ಪಟ್ಟಣದಲ್ಲಿನ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದಲ್ಲಿ ಕೆಲ ಕಾಲ ವಿಶ್ರಾಂತಿ ಪಡೆದರು.
ಪಟ್ಟಣಕ್ಕೆ ಬೆಳಿಗ್ಗೆ 11ರ ಸುಮಾರಿಗೆ ತಮ್ಮ ಪತ್ನಿಯೊಂದಿಗೆ ಆಗಮಿಸಿದ ರಾಜ್ಯಪಾಲರು, ಮಧ್ಯಾಹ್ನ 4 ಗಂಟೆಯವರೆಗೂ ವಿಶ್ರಾಂತಿ ಪಡೆದು ಮೈಸೂರಿಗೆ ತೆರಳಿದರು. ಈ ಸಂದರ್ಭದಲ್ಲಿ ಸಶಸ್ತ್ರ ಮೀಸಲು ಪಡೆಯಿಂದ ಗೌರವ ರಕ್ಷೆ ನೀಡಲಾಯಿತು.
ರಾಜ್ಯಪಾಲರ ಭೇಟಿ ಹಿನ್ನೆಲೆಯಲ್ಲಿ ಪಟ್ಟಣದಲ್ಲಿನ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರವನ್ನು ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರಾದ ಕೋದಂಡರಾಮಯ್ಯನವರ ತಂಡ ಅಣಿಗೊಳಿಸಿತ್ತು. ಅಲ್ಲದೇ ಪ್ರವಾಸಿ ಮಂದಿರಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ. ಚನ್ನಣ್ಣನವರ್ ಅವರ ಮಾರ್ಗದರ್ಶನದಲ್ಲಿ ಎಎಸ್ಪಿ ವಿನಾಯಕ ಪಾಟೀಲ್ ಅವರೊಂದಿಗೆ ಆರಕ್ಷಕ ವೃತ್ತ ನಿರೀಕ್ಷಕ ಕೃಷ್ಣಪ್ಪ ಹಾಗೂ ನಗರ ಪೊಲೀಸ್ ಠಾಣೆಯ ಎಸ್ಸೈ ಶಿವಕುಮಾರ್ ತಂಡ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥ್ಥೆಗೊಳಿಸಿದ್ದರು.
ಆದರೆ, ನಿರೀಕ್ಷೆಯಂತೆ, ರಾಜ್ಯಪಾಲರು ಇಲ್ಲಿನ ಇತಿಹಾಸ ಪ್ರಸಿದ್ಧ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯಕ್ಕೆ ಭೇಟಿ ನೀಡಲಿಲ್ಲ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.