45,482 ಅರ್ಜಿ ಸ್ವೀಕಾರ, 1003 ಅರ್ಜಿ ತಿರಸ್ಕಾರ
ಹಾಸನ: ಜಿಲ್ಲೆಯಲ್ಲಿ ಮಾ. 16ರವರೆಗೆ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ನಮೂನೆ 6ರಲ್ಲಿ 45,482 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಅದರಲ್ಲಿ, 28603 ಅರ್ಜಿಗಳನ್ನು ಪರಿಶೀಲಿಸಿ ಅಂಗೀಕರಿಸಲಾಗಿದೆ. 15876 ಅರ್ಜಿಗಳು ಅನುಮೋದನೆಗೆ ಬಾಕಿ ಉಳಿದಿದ್ದು, 1003 ಅರ್ಜಿಗಳನ್ನು ತಿರಸ್ಕರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ತಿಳಿಸಿದ್ದಾರೆ.
ಜಿಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಚುನಾವಣಾ ಸಿದ್ಧತೆಗಳ ಪರಿಶೀಲನಾ ಸಭೆ ನಡೆಸಿದ ಅವರು, ಬಾಕಿ ಇರುವ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ ನಿಗದಿಯಂತೆ ಎಲ್ಲಾ ಅರ್ಹರಿಗೂ ಗುರುತಿನ ಕಾರ್ಡ್ಗಳ ವಿತರಣೆಯಾಗಬೇಕು. ತಹಸೀಲ್ದಾರರು ಈ ವಿಷಯದಲ್ಲಿ ಹೆಚ್ಚಿನ ಮುತುವರ್ಜಿ ವಹಿಸಬೇಕು. ಮುದ್ರಣವಾದ ಕಾರ್ಡ್ಗಳನ್ನು ಮತಗಟ್ಟೆ ಅಧಿಕಾರಿಗಳ ಮುಖಾಂತರವೇ ವಿತರಿಸಬೇಕು ಎಂದು ಸೂಚಿಸಿದರು.
ಮತದಾರರ ಪಟ್ಟಿ ಪರಿಷ್ಕರಣೆಗೆ ಮುನ್ನ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ ಕರೆದು ಅವರಿಗೆ ಪಟ್ಟಿ ನೀಡಿ, ಆಕ್ಷೇಪಣೆಗಳಿವೆಯೇ ಎಂಬ ಮಾಹಿತಿ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಅವರು ತಹಸೀಲ್ದಾರರಿಗೆ ನಿರ್ದೇಶನ ನೀಡಿದರು.
ಎಲ್ಲಾ ಸಹಾಯಕ ಚುನಾವಣಾಧಿಕಾರಿಗಳು, ತಹಸೀಲ್ದಾರರು, ಮಾದರಿ ನೀತಿ ಸಂಹಿತೆ ತಂಡದ ಅಧಿಕಾರಿಗಳು ಮತ್ತು ನಾನಾ ತಂಡಗಳ ಮುಖ್ಯಸ್ಥರು ಪಾಲ್ಗೊಂಡಿದ್ದ ಈ ಸಭೆಯಲ್ಲಿ ಈವರೆಗೆ ಕೈಗೊಳ್ಳಲಾಗಿರುವ ಕಾರ್ಯಗಳ ಬಗ್ಗೆ ಜಿಲ್ಲಾಧಿಕಾರಿ ಮಾಹಿತಿ ಪಡೆದರು. ಅಲ್ಲದೇ, ಮುಂದೆ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮಾರ್ಗದರ್ಶನ ನೀಡಿದರು.
ಸೂಚನೆ: ಎಲ್ಲಾ ಸಹಾಯಕ ಚುನಾವಣಾಧಿಕಾರಿಗಳು ಹಗೂ ತಹಸೀಲ್ದಾರರು ಚುನಾವಣಾ ಕಾರ್ಯದಲ್ಲಿ ತೊಡಗುವ ಅಧಿಕಾರಿ ಸಿಬ್ಬಂದಿಗೆ ತರಬೇತಿ ನೀಡಲು ಆಯಾಯ ತಾಲೂಕುಗಳಲ್ಲಿ ಸೂಕ್ತ ಸ್ಥಳ ಗುರುತಿಸಬೇಕು. ಅಲ್ಲದೇ, ಆ ಸ್ಥಳಗಳಲ್ಲಿ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳಿರುವುದನ್ನು ಖಾತರಿಪಡಿಸಿಕೊಳಬೇಕು. ಅಗತ್ಯಕ್ಕೆ ತಕ್ಕಷ್ಟು ಮಾಸ್ಟರ್ ತರಬೇತುದಾರರನ್ನು ಗುರುತಿಸಿ ಮೊದಲೇ ಅವರಿಗೆ ಸೂಕ್ತ ತರಬೇತಿ ಒದಗಿಸಿರಬೇಕು ಎಂದು ಅವರು ಸೂಚನೆ ನೀಡಿದರು.
ಕರ್ತವ್ಯದಿಂದ ರಿಯಾಯಿತಿ ಇಲ್ಲ: ಎಲ್ಲಾ ಹಣ ಬಟಾವಡೆ ಅಧಿಕಾರಿಗಳು ತಮ್ಮ ಅಧೀನ ಅಧಿಕಾರಿ ಸಿಬ್ಬಂದಿಗಳ ವಿವರವನ್ನು ನೂತನವಾಗಿ ಅಭಿವೃದ್ಧಿಪಡಿಸಲಾಗಿರುವ ಎಚ್.ಆರ್ .ಎಂ.ಎಸ್ ತಂತ್ರಾಂಶದಲ್ಲಿ ಅಳವಡಿಸಿರುವುದನ್ನು ಖಾತರಿ ಪಡಿಸಬೇಕು. ಗರ್ಭಿಣಿಯರು, ಹಾಲುಣಿಸುತ್ತಿರುವ ತಾಯಂದಿರು, ತೀವ್ರ ಅನಾರೋಗ್ಯದಿಂದ ದೀರ್ಘಕಾಲದಿಂದ ಬಳಲುತ್ತಿರುವವರು ಮತ್ತು ಮೂರು ತಿಂಗಳಲ್ಲಿ ನಿವೃತ್ತರಾಗಲಿರುವವರಿಗೆ ಚುಣಾವಣಾ ಕರ್ತವ್ಯದಿಂದ ವಿನಾಯ್ತಿ ನೀಡಲು ಕ್ರಮಕೈಗೊಳ್ಳಲಾಗುವುದು. ಉಳಿದವರಿಗೆ ಯಾವುದೇ ರಿಯಾಯಿತಿ ನೀಡಲಾಗದು ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು.
ಎಲ್ಲಾ ಸಹಾಯಕ ಚುನಾವಾಣಧಿಕಾರಿಳು, ತಹಸೀಲ್ದಾರರು ಮತ್ತು ಮಾದರಿ ನೀತಿ ಸಂಹಿತೆ ಜಾರಿ ತಂಡ ತಮ್ಮ ವ್ಯಾಪ್ತಿಯಲ್ಲಿ ಸ್ಥಾಪಿಸಲಾಗಿರುವ ಚೆಕ್ಪೋಸ್ಟ್ಗಳಿಗೆ ಭೇಟಿ ನೀಡಿ, ಅವುಗಳನ್ನು ಪರೀಕ್ಷೆ ನಡೆಸಬೇಕು. ಎಲ್ಲಾ ಅನುಮಾನಾಸ್ಪದ ವಾಹನಗಳ ಪರಿಶೀಲನೆ ನಡೆಸಬೇಕು. ಅಗತ್ಯ ಸಂದರ್ಭದಲ್ಲಿ ವೀಡಿಯೂ ರೆಕಾರ್ಡಿಂಗ್ ಮಾಡಬೇಕು. ಆದರೆ, ತಪಾಸಣೆ ವೇಳೆ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಅನಗತ್ಯ ಸಮಸ್ಯೆ ಆಗದಂತೆ ಎಚ್ಚರ ವಹಿಸಿ ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.
ಅಪರ ಜಿಲ್ಲಾಧಿಖಾರಿ ಡಾ.ಎಚ್.ಎನ್.ಗೋಪಾಲ ಕೃಷ್ಣ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಯು.ಪಿ. ಸಿಂಗ್ ಸಭೆಯಲ್ಲಿ ಭಾಗವಹಿಸಿದ್ದರು. ಪ್ರೋಬೆಷನರಿ ಐಎಎಸ್ ಅಧಿಖಾರಿ ರಾಮಚಂದ್ರ, ಉಪ ವಿಭಾಗಾಧಿಕಾರಿ ಶರತ್, ಮಧುಕೇಶ್ವರ್, ವಿವಿಧ ಕೇತ್ರಗಳ ಸಹಾಯಕ ಚುನಾವಾಧಿಕಾರಿಗಳು, ತಹಸೀಲ್ದಾರರು ಹಾಜರಿದ್ದು ಮಾಹಿತಿ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

