ಹಾಸನ

'ಅಪಘಾತ ಹೆಚ್ಚಳಕ್ಕೆ ನಿರ್ಲಕ್ಷ್ಯವೇ ಕಾರಣ'

Published On :

ಹಾಸನ: ರಸ್ತೆ ಅಪಘಾತಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದಕ್ಕೆ ವಾಹನ ಚಾಲಕರ ನಿರ್ಲಕ್ಷ್ಯವೇ ಕಾರಣ ಎಂದು  ಪ್ರಾದೇಶಿಕ ಸಾರಿಗೆ ಅಧಿಕಾರಿ ಆರ್.ಡಿ. ಅಲ್ಮೇಡಾ ತಿಳಿಸಿದರು.
ನಗಕರದ ಎ.ವಿ.ಕಾಂತಮ್ಮ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ  ಪ್ರಾದೇಶಿಕ ಸಾರಿಗೆ ಕಚೇರಿಯಿಂದ ಇತ್ತೀಚೆಗೆ  ಮಹಿಳೆಯರಿಗೆ ಏರ್ಪಡಿಸಿದ್ದ  ರಸ್ತೆಯಲ್ಲಿ ಸುರಕ್ಷತೆ ಎಂಬ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬರು ರಸ್ತೆ ನಿಯಮಗಳನ್ನು ಪಾಲಿಸಿದಾಗ ಮಾತ್ರ ಅಪಘಾತಗಳನ್ನು ತಡೆಯಲು ಸಾಧ್ಯ ಎಂದು ಹೇಳಿದರು.
ವಿಷಾದ: ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಗೀತ ಮಾತನಾಡಿ, ಒಂದು ಜೀವಕ್ಕೆ ಜನ್ಮವನ್ನು ಕೊಡುವ ವಿಶಿಷ್ಟವಾದ ಶಕ್ತಿ ಇರುವುದು ಮಹಿಳೆಗೆ ಮಾತ್ರ. ಆದರೆ, ಸರಾಸರಿ ಲಿಂಗಾನುಪಾತವನ್ನು ಅವಲೋಕಿಸಿದಾಗ ಗಂಡು ಮಕ್ಕಳಿಗಿಂತ ಹೆಣ್ಣುಮಕ್ಕಳ ಸಂಖ್ಯೆ ಕಡಿಮೆ ಇರುವುದು ಹೆಚ್ಚುತ್ತಿರುವ ಹೆಣ್ಣು ಭ್ರೂಣ ಹತ್ಯೆಯಿಂದ ಎಂದು ವಿಷಾದಿಸಿದರು.
ಜಾಗೃತಿ ಮೂಡಿಸಬೇಕು: ಇಂದಿನ ದಿನಗಳಲ್ಲಿ ಹೆಣ್ಣುಮಕ್ಕಳು ಕಾಣೆಯಾಗುತ್ತಿದ್ದಾರೆ, ಅವರುಗಳನ್ನು ಅಪಹರಿಸಿ ಭಿಕ್ಷಾಟನೆ, ವೇಶ್ಯಾವಾಟಿಕೆಗಳಲ್ಲಿ ದುಡಿಸಿಕೊಳ್ಳುತ್ತಿರುವುದು ಹಾಗೂ ಹೆಣ್ಣುಮಕ್ಕಳು ಮದುವೆಗೆ ಮುಂಚೆ ತಾಯಂದಿರಾಗುತ್ತಿರುವುದು ಅತ್ಯಂತ ಶೋಚನೀಯ. ಇಂಥ ಅನಾಹುತಗಳಿಂದ ಮಹಿಳೆಯರನ್ನು ಸಂರಕ್ಷಿಸಲು ಅವರಲ್ಲಿ ಜಾಗೃತಿ ಮೂಡಿಸಬೇಕಾಗಿದೆ ಎಂದರು.
ಹೋರಾಟ ನಡೆಸಬೇಕಾಗುತ್ತದೆ: ಕಾಲೇಜಿನ ಪ್ರಾಂಶುಪಾಲ ಡಾ.ಜೆ. ಶೈಲಜಾಕುಮಾರಿ ಅಧ್ಯಕ್ಷತೆ ವಹಿಸಿ ಮಾತನಾಡಿ,  ಜಾಹೀರಾತುಗಳಲ್ಲಿ ಹೆಣ್ಣುಮಕ್ಕಳನ್ನು ಕೀಳುಮಟ್ಟದಲ್ಲಿ ಬಳಸಿಕೊಳ್ಳುತ್ತಿರುವುದರ ಬಗ್ಗೆ ವಿಷಾದಿಸಿ, ಇನ್ನೂ ಮುಂದಾದರೂ ಮಹಿಳೆಯರು ಜಾಗೃತರಾಗಿ, ಅದರ ವಿರುದ್ಧ ಹೋರಾಟ ನಡೆಸಬೇಕಾಗಿದೆ ಎಂದು ತಿಳಿಸಿದರು.
ಪ್ರಾದೇಶಿಕ ಸಾರಿಗೆ ಕಚೇರಿಯ ಅಧೀಕ್ಷಕ ಪಾಷಾ, ಮೋಟಾರ್ ನಿರ್ವಹಣಾಧಿಕಾರಿ ಲಕ್ಷ್ಮಿ ಇದ್ದರು. ವಿಜಯ ಪ್ರಾರ್ಥಿಸಿದರು. ಗಾಮಿನಿ ಜೈನ್ ಸ್ವಾಗತಿಸಿದರು. ಪ್ರಕೃತಿ ವಂದಿಸಿದರು. ಬೋಧಕ ವರ್ಗ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.