ಹಾಸನ

ಒಡೆಯರ್ ಮರಣೋತ್ತರ ಕಾರ್ಯ

Published On :

ಮೈಸೂರು: ಕಳೆದ ವರ್ಷದ ಡಿಸೆಂಬರ್‌ನಲ್ಲಿ ನಿಧನರಾದ ಮೈಸೂರು ರಾಜವಂಶಸ್ಥ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಮರಣೋತ್ತರ ಧಾರ್ಮಿಕ ವಿಧಿವಿಧಾನ ಕಾರ್ಯವು ಅಂಬಾವಿಲಾಸ ಅರಮನೆಯ ಕಲ್ಯಾಣ ಮಂಟಪದಲ್ಲಿ ಭಾನುವಾರ ಶಾಸ್ತ್ರೋಕ್ತವಾಗಿ ನೆರವೇರಿತು.
ಈ ಧಾರ್ಮಿಕ ಕಾರ್ಯದ ಹಿನ್ನೆಲೆಯಲ್ಲಿ ಅರಮನೆ ಆವರಣದಲ್ಲಿರುವ ಕೃಷ್ಣನ ದೇವಸ್ಥಾನದಲ್ಲಿ ಬೆಳಗ್ಗೆ ಅರಮನೆ ಅರ್ಚಕರು ವೇದ ಪಠಣ ಮಾಡಿದರು. ನಂತರ ಅರಮನೆ ಕಲ್ಯಾಣ ಮಂಟಪದಲ್ಲಿ ರಾಜಗುರುವಾದ ಪರಕಾಲ ಮಠದ ಅಭಿನವ ವಾಗೀಶ ಬ್ರಹ್ಮತಂತ್ರ ಪರಕಾಲ ಸ್ವಾಮೀಜಿ ಸಮ್ಮುಖದಲ್ಲಿ ವಿವಿಧ ಧಾರ್ಮಿಕ ಪೂಜೆ ನಡೆಯಿತು.
ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಚಿತೆಗೆ ಅಗ್ನಿಸ್ಪರ್ಶ ಮಾಡಿದ್ದ ಕಾಂತರಾಜ ಅರಸ್ ಅವರು ಮರಣೋತ್ತರ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು. ಇದು ರಾಜಮನೆತನದ ಖಾಸಗಿ ಕಾರ್ಯಕ್ರಮವಾಗಿದ್ದ ಹಿನ್ನೆಲೆಯಲ್ಲಿ ಅರಮನೆ ಸಿಬ್ಬಂದಿ, ಸಾರ್ವಜನಿಕರಿಗೆ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಇರಲಿಲ್ಲ.
ಪ್ರಮೋದಾದೇವಿ ಒಡೆಯರ್, ಒಡೆಯರ್ ಅವರ ಸಹೋದರಿಯರಾದ ವಿಶಾಲಾಕ್ಷಿ, ಮೀನಾಕ್ಷಿ, ಕಾಮಾಕ್ಷಿ, ಇಂದ್ರಾಕ್ಷಿ ಮತ್ತು ಅವರ ಕುಟುಂಬ ಸದಸ್ಯರು ಮಾತ್ರ ಭಾಗವಹಿಸಿದ್ದರು. ಅರಮನೆ ಆಡಳಿತ ಮಂಡಳಿಯ ನಿರ್ದೇಶಕ ಟಿ.ಎಸ್. ಸುಬ್ರಮಣ್ಯ ಇದ್ದರು.
ಕಾರ್ಯಕ್ರಮ ಹಿನ್ನೆಲೆಯಲ್ಲಿ ಭಾನುವಾರ ಪ್ರವಾಸಿಗರು ಮತ್ತು ಸಾರ್ವಜನಿಕರು ಅರಮನೆ ಪ್ರವೇಶ ನಿರ್ಬಂಧಿಸಲಾಗಿತ್ತು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.