ಕಳವು ಆರೋಪಿ ಸೆರೆ: ರು. 7 ಲಕ್ಷ ಮೌಲ್ಯದ ಆಭರಣ ವಶ
ಅರಸೀಕೆರೆ: ಪಟ್ಟಣದಲ್ಲಿ ಅನುಮಾನಸ್ಪದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದು, ಆತನ ವಿಚಾರಣೆ ವೇಳೆ ನೀಡಿದ ಸುಳುವಿನ ಮೇಲೆ ಸುಮಾರು ರು. 7 ಲಕ್ಷ ಮೌಲ್ಯದ 258 ಗ್ರಾಂ ತೂಕದ ಚಿನ್ನಾಭರಣಗಳನ್ನು ತಾಲೂಕಿನ ಗ್ರಾಮಾಂತರ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಡಿವೈಎಸ್ಪಿ ಐ.ಜಿ. ಮಂಜುನಾಥ್ ತಿಳಿಸಿದರು.
ಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸುದ್ದಿಗಾರರೊಂದಿಗೆ ವಿಷಯ ತಿಳಿಸಿದ ಅವರು ಬಂಧಿತ ಆರೋಪಿಯು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಗಂಜಿಗೆರೆ ಗ್ರಾಮದ ಗವಿರಾಜ್ (30) ಎಂದು ಗುರುತಿಸಲಾಗಿದ್ದು, ಈತನು ನೀಡಿದ ಸುಳಿವಿನ ಆಧಾರದ ಮೇಲೆ ಅರಸೀಕೆರೆ ಗ್ರಾಮಾಂತರ ಮತ್ತು ನಗರ ಪೊಲೀಸ್ ಠಾಣೆ ವ್ಯಾಪ್ತಿಯೂ ಸೇರಿದಂತೆ ಬಾಣಾವರ, ಗಂಡಸಿ ಪೊಲೀಸ್ ಠಾಣೆ, ಹಾಗೂ ಚಿಕ್ಕಮಗಳೂರು ಜಿಲ್ಲೆಯ ಕಡೂರು ಪೊಲೀಸ್ ಠಾಣೆಯ ವ್ಯಾಪ್ತಿಗೆ ಒಳಪಟ್ಟಂತೆ ಒಟ್ಟು 9 ಕಳವು ಅಪರಾದ ಪ್ರಕರಣಗಳನ್ನು ನಡೆಸಿದ್ದಾನೆ.
ಈ ಪ್ರಕರಣಗಳಿಂದ ಒಟ್ಟು 258 ಗ್ರಾಂ.ನ ಚಿನ್ನದ ಆಭರಣಗಳನ್ನು ಕಳವು ಮಾಡಿದ್ದು ಗ್ರಾಮಾಂತರ ಪೊಲೀಸರು ಪತ್ತೆ ಮಾಡಿದ್ದಾರೆ. ವಶಪಡಿಸಿಕೊಂಡಿರುವ ಆಭರಣಗಳ ಒಟ್ಟು ಮೊತ್ತ ಅಂದಾಜು ರು. 7 ಲಕ್ಷ ಎಂದು ಅವರು ತಿಳಿಸಿದ್ದಾರೆ.
ಈ ಅಪರಾಧ ಪ್ರಕರಣ ಪತ್ತೆ ಮಾಡುವಲ್ಲಿ ಗ್ರಾಮಾಂತರ ವೃತ್ತ ನಿರೀಕ್ಷಕರಾದ ಆರ್.ವಿ. ಗಂಗಾಧರಪ್ಪ ಮಾರ್ಗದರ್ಶನದಲ್ಲಿ ಪಿ.ಎಸ್.ಐ, ಸುನೀಲ್, ಎ.ಎಸ್.ಐ. ಮರಿಯಯ್ಯ, ಪೇದೆಗಳಾದ ಶಿವಲಿಂಗಪ್ಪ, ಲೋಕೇಶ್, ಮಂಜುನಾಥ್, ಶ್ರೀನಿವಾಸ್, ಮಂಜನಾಯ್ಕ, ರವಿರಾಜ್, ಶಿವಶಂಕರ್, ಚಾಲಕ ಪ್ರದೀಪ್ ಕುಮಾರ್, ಗಂಡಸಿ ಪೊಲೀಸ್ ಠಾಣೆ ಕುಮಾರ್ ಭಾಗವಹಿಸಿದ್ದರು ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

