ಶೋಷಣೆ ತಪ್ಪಿಸಲು ನಾನಾ ಸಂಘಟನೆಗಳ ಆಗ್ರಹ
ಅರಸೀಕೆರೆ: ಪಟ್ಟಣದ ಹೋಟೆಲ್ಗಳ ಮಾಲೀಕರು ಕಾಫಿ ತಿಂಡಿಗಳ ಬೆಲೆ ಏರಿಕೆ ಮಾಡುವ ಗ್ರಾಹಕರನ್ನು ಶೋಷಣೆ ಮಾಡುವ ಮೂಲಕ ಹಣ ಮಾಡುವ ದಂಧೆಗಿಳಿದಿದ್ದು, ಈ ಬಗ್ಗೆ ತಾಲೂಕು ಆಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪಟ್ಟಣದ ಹಲವಾರು ಸಂಘ ಸಂಸ್ಥೆಗಳ ಸದಸ್ಯರು ಪತ್ರಕರ್ತ ಎ. ಶಿವರಾಜ್ ನೇತೃತ್ವದಲ್ಲಿ ತಹಸೀಲ್ದಾರ್ ನಟರಾಜ್ ಅವರಿಗೆ ಮನವಿ ಸಲ್ಲಿಸಿದರು.
ಕೆಲವು ಹೋಟೆಲ್ಗಳಲ್ಲಿ ಕಳಪೆ ಗುಣಮಟ್ಟದ ಪದಾರ್ಥಗಳನ್ನು ತಯಾರಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಸಾರ್ವಜನಿಕರಿಗೆ ವಂಚಿಸುತ್ತಿದೆಯಲ್ಲದೆ ಸ್ವಚ್ಛತೆಯ ಗಮನ ನೀಡದೇ ಹೆಚ್ಚಿನ ಬೆಲೆ ಪಡೆಯುವ ಇವರು, ಶುದ್ಧ ಕುಡಿಯುವ ನೀರನ್ನು ನೀಡದೆ ಗ್ರಾಹಕರಿಗೆ ಅನಾರೋಗ್ಯ ಉಂಟಾಗಲು ಕಾರಣರಾಗಿರುತ್ತಾರೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಪಟ್ಟಣದ ಎಲ್ಲಾ ಹೋಟೆಲ್ಗಳನ್ನು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

