ಹಾಸನ

ಸಮಸ್ಯೆ ಬಗೆಹರಿಸದಿದ್ದರೆ ಮತದಾನ ಬಹಿಷ್ಕಾರ

Published On :

ಸಕಲೇಶಪುರ: ತಾಲೂಕಿನ ಯಸಳೂರು ಹೋಬಳಿ ಕೇಂದ್ರದಲ್ಲಿನ ಮೂಲಭೂತ ಸೌಕರ್ಯ  ಕೊರತೆ ಬಗೆಹರಿಸುವಂತೆ ಆಗ್ರಹಿಸಿ ಗ್ರಾಮದಲ್ಲಿ ಇತ್ತೀಚೆಗೆ ಪ್ರತಿಭಟನೆ ನಡೆಸಿದ ಗ್ರಾಮಸ್ಥರು  ಮತದಾನ ಬಹಿಷ್ಕರಿಸುವುದಾಗಿ ಬೆದರಿಕೆ ಹಾಕಿದ್ದಾರೆ.
ಗ್ರಾಮದ ಹದಗೆಟ್ಟ ರಸ್ತೆ, ಕುಡಿಯುವ ನೀರಿನ ಕೊರತೆ, ದುಃಸ್ಥಿತಿಯಲ್ಲಿರುವ ಹಾಸ್ಟೆಲ್, ಶಿಥಿಲಾವಸ್ಥೆಯಲ್ಲಿರುವ ವಿವಿಧ ಇಲಾಖೆಗಳ ಸರ್ಕಾರಿ ವಸತಿ ಗೃಹಗಳು, ಸಾರಿಗೆ ಬಸ್  ಕೊರತೆ ಹಾಗೂ ವಿದ್ಯುತ್ ಪೂರೈಕೆ ಲೋಪ- ದೋಷಗಳನ್ನು ಸರಿಪಡಿಸುವಂತೆ ಸಾಕಷ್ಟು ಬಾರಿ ಮನವಿ ಮಾಡಿದ್ದರೂ, ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ನಿರ್ಲಕ್ಷ್ಯ ತೋರಿದ್ದಾರೆಂದು ಆರೋಪಿಸಿದ ಪ್ರತಿಭಟನಾಕಾರರು ಗ್ರಾಮದ ನಂದೀಶ್ವರ ದೇವಸ್ಥಾನದ ಮುಂಭಾಗ ಕೆಲಕಾಲ ರಸ್ತೆ ತಡೆ ನಡೆಸಿದರು.
ಆಕ್ರೋಶ: ಜನ ಸ್ಪಂದನ ಸಭೆ, ಗ್ರಾಮ ಸಭೆಗಳಿಗೆ ಜನ ಪ್ರತಿನಿಧಿಗಳು ಹಾಗೂ ಹಲವು ಇಲಾಖೆ ಹಿರಿಯ  ಅಧಿಕಾರಿಗಳು ಹಾಜರಾಗದೆ ತಮ್ಮ ಯಾವುದೇ ಸಮಸ್ಯೆಗಳಿಗೆ ಮುಕ್ತಿ ದೊರೆಯುತ್ತಿಲ್ಲ. ರಸ್ತೆ  ವಿಸ್ತರಣೆಗಾಗಿ ಗ್ರಾಮಸ್ಥರೇ ಸ್ವಯಂ ಪ್ರೇರಿತರಾಗಿ ಕಾಂಪೌಂಡ್ ಇನ್ನಿತರೆ ತಡೆಗಳನ್ನು ತೆರವು  ಗೊಳಿಸಿ ಹಲವು ತಿಂಗಳು ಕಳೆದಿದ್ದರೂ ಕಾಮಗಾರಿ ಆರಂಭವಾಗಿಲ್ಲ. ಲೋಕಸಭೆ ಸದಸ್ಯ  ಎಚ್.ಡಿ. ದೇವೇಗೌಡರು ಒಮ್ಮೆಯೂ ಗ್ರಾಮಕ್ಕೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿಲ್ಲ. ಈ  ನಿರ್ಲಕ್ಷ್ಯವೇಕೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಭ್ಯರ್ಥಿಗಳಿಗೆ ಗ್ರಾಮಕ್ಕೆ ಪ್ರವೇಶವಿಲ್ಲ: ಲೋಕಸಭೆ ಚುನಾವಣೆ ಮುಕ್ತಾಯವಾಗುವುದರೊಳಗೆ ಗ್ರಾಮಕ್ಕೆ ಅಗತ್ಯವಿರುವ ಮೂಲಭೂತ ಸೌಕರ್ಯ ಒದಗಿಸದಿದ್ದರೆ ಮತದಾನ ಬಹಿಷ್ಕರಿಸುವ ಜೊತೆಗೆ ಚುನಾವಣೆ ಪ್ರಚಾರಕ್ಕೆ ಯಾವ ಅಭ್ಯರ್ಥಿಯನ್ನೂ ಗ್ರಾಮಕ್ಕೆ ಸೇರಿಸುವುದಿಲ್ಲವೆಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ದೇವೇಂದ್ರ, ಸ್ತ್ರೀಶಕ್ತಿ ಸಂಘದ ಅಧ್ಯಕ್ಷೆ  ಗಾಯಿತ್ರಿ, ಗ್ರಾಮಸ್ಥರಾದ ಪ್ರಶಾಂತ್, ರವಿತೇಜ, ಪದ್ಮಾ, ತಿರುಮಲಪ್ಪ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.