ಹಾಸನ

ಗೃಹಿಣಿ ಸೇರಿ ಮೂವರು ನಾಪತ್ತೆ

Published On :

ಹಾಸನ: ಜಿಲ್ಲೆಯ ಪ್ರತ್ಯೇಕ ಪ್ರಕರಣದಲ್ಲಿ ಮೂವರು ನಾಪತ್ತೆಯಾಗಿರುವ ಘಟನೆ ನಡೆದಿದೆ.
ಅರಸೀಕೆರೆ ಪಟ್ಟಣದ ಜೇನುಕಲ್ಲು ನಗರ ವಾಸಿ ಲೀಲಾ ಅವರು ಮಕ್ಕಳಿಲ್ಲದ ಕಾರಣ ಈಗ್ಗೆ 8 ವರ್ಷಗಳಿಂದ ಅಣ್ಣನ ಮಗನಾದ ನಾಗೇಂದ್ರಕುಮಾರ್ (14)ನನ್ನು ಸಾಕಿಕೊಂಡಿದ್ದು, ಅರಸೀಕೆರೆ ಪಟ್ಟಣದ ಬಸವರಾಜೇಂದ್ರ ಡೆಮಾನ್‌ಸ್ಟೇಷನ್ ಪ್ರೌಢಶಾಲೆಯಲ್ಲಿ 8ನೇ ತರಗತಿ ವ್ಯಾಸಂಗ ಮಾಡಿಕೊಂಡಿದ್ದ. ಎಂದಿನಂತೆ ಶಾಲೆಗೆ ಹೋಗುತ್ತೇನೆಂದು ಮನೆಯಲ್ಲಿ ಹೇಳಿ ಹೋದವನು ಇದುವೆರೆವಿಗೂ ವಾಪಸ್ ಮನೆಗೆ ಬಾರದೆ ಕಾಣೆಯಾಗಿದ್ದಾನೆ.
ಚಹರೆ: 4 ಅಡಿ ಎತ್ತರ, ಬಿಳಿ ಮೈಬಣ್ಣ, ದುಂಡುಮುಖ, ಸಾಧಾರಣ ಮೈಕಟ್ಟು, ಕನ್ನಡ ಭಾಷೆ ಮಾತನಾಡುತ್ತಾರೆ. ಮನೆಯಿಂದ ಹೋಗುವಾಗ ಬಿಳಿ ಶರ್ಟ್ ಮತ್ತು ಹಸಿರು ಪ್ಯಾಂಟ್ ಧರಿಸಿರುತ್ತಾನೆ. ಅತ್ತೆ ಲೀಲಾ ಅವರು ಅರಸೀಕೆರೆ ನಗರ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.  
ಶಿಲ್ಪಾ ಕಾಣೆ: ಮತ್ತೊಂದು ಪ್ರಕರಣದಲ್ಲಿ ಅರಸೀಕೆರೆ ತಾಲ್ಲೂಕಿನ ಜಾವಗಲ್ ಹೋಬಳಿ ಎಂ. ಕೊಪ್ಪಲು ಗ್ರಾಮದ ರಮೇಶ ರವರ ಪತ್ನಿ ಶಿಲ್ಪ (26) ಮನೆಯಿಂದ ಹೊರಗೆ ಹೋದವಳು ವಾಪಸ್ ಮನೆಗೆ ಬಾರದೆ ಕಾಣೆಯಾಗಿದ್ದಾರೆ.
ಚಹರೆ: 5.3 ಅಡಿ ಎತ್ತರ,  ಸಾದಾರಣ ಮೈಕಟ್ಟು, ಕನ್ನಡ ಬಾಷೆ ಮಾತನಾಡುತ್ತಾಳೆ. ಪತಿ ರಮೇಶ ರವರು ಜಾವಗಲ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಜ್ಯೋತಿ ನಾಪತ್ತೆ: ಇನ್ನೊಂದು ಪ್ರಕರಣದಲ್ಲಿ ಆಲೂರು ತಾಲೂಕಿನ ಕೆ. ಹೊಸಕೋಟೆ ಹೋಬಳಿ, ಜಯಂತಿನಗರ ಗ್ರಾಮ ವಾಸಿ ಚಂದ್ರಶೇಖರಯ್ಯರವರ ಪತ್ನಿ ಎಚ್.ಆರ್. ಜ್ಯೋತಿ (34) ಎಂಬವರು ಮನೆಯಿಂದ ಹೊರಗೆ ಹೋದವರು ಇದುವರೆವಿಗೂ ವಾಪಸ್ ಮನೆಗೆ ಬಾರದೆ ಕಾಣೆಯಾಗಿದ್ದಾರೆ.
ಚಹರೆ: 5 ಅಡಿ ಎತ್ತರ, ಎಣ್ಣೆಗೆಂಪು ಬಣ್ಣ, ದುಂಡುಮುಖ,  ಸಾಧಾರಣ ಮೈಕಟ್ಟು, ಕನ್ನಡ ಭಾಷೆ ಮಾತನಾಡುತ್ತಾರೆ. ಮನೆಯಿಂದ ಹೋಗುವಾಗ ಕೆಂಪು ಬಣ್ಣದ ಚೂಡಿದಾರ ಧರಿಸಿರುತ್ತಾರೆ. ಪತಿ ಚಂದ್ರಶೇಖರಯ್ಯ ಅವರು ಆಲೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.