ಹಾಸನ

ಬಿಎಸ್ಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ಚಾಲನೆ

Published On :

ಬೇಲೂರು: ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಾ. ಪರಮೇಶ್ವರ್ ಅವರಿಗೆ  ಮುಖ್ಯಮಂತ್ರಿ ಸ್ಥಾನ ನೀಡದೆ ದಲಿತ ವರ್ಗಕ್ಕೆ ಅನ್ಯಾಯ ಮಾಡಿದ್ದು, ಜನರು ಈ ಬಾರಿ ಬಿಎಸ್‌ಪಿ ಪಕ್ಷಕ್ಕೆ  ಬೆಂಬಲ ನೀಡುತ್ತಾರೆ ಎಂದು ಬಿಎಸ್‌ಪಿ ಜಿಲ್ಲಾ ಉಪಾಧ್ಯಕ್ಷ ರಾಜು ತಿಳಿಸಿದರು.
ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿ ಬಿಎಸ್‌ಪಿ ಅಭ್ಯರ್ಥಿ ಎ.ಪಿ.ಅಹಮ್ಮದ್ ಪರ ಪ್ರಚಾರಕ್ಕೆ ಚಾಲನೆ ನೀಡಿ ಮಾತನಾಡಿ,  ಕಾಂಗ್ರೆಸ್ ಮತ್ತು ಬಿಜೆಪಿ ದೇಶದ ಸಂಪತ್ತುನ್ನು ಕೊಳ್ಳೆ ಹೊಡೆದಿದ್ದಾರೆ ಎಂದರು.
ಅಭ್ಯರ್ಥಿ ಎ.ಪಿ. ಅಹಮದ್ ಮಾತನಾಡಿ, ಜಿಲ್ಲೆಯಲ್ಲಿ ಕುಟುಂಬ ರಾಜಕಾರಣ ಮಾಡುತ್ತಿರುವ ಜೆಡಿಎಸ್‌ಗೆ ಅಂತ್ಯ ಕಾಲ ಬಂದಿದೆ. ಸಿದ್ದರಾಮಯ್ಯನವರ ಸರ್ಕಾರ ಜಾತಿ-ಧರ್ಮಗಳನ್ನು ಒಡೆದು ಆಳ್ವಿಕೆ  ಮಾಡುತ್ತಿದೆ ಆದ್ದರಿಂದ ಜನರು ಕಾಂಗ್ರೆಸ್, ಬಿಜೆಪಿ ಜೆಡಿಎಸ್  ಕಡೆಗಣಸಿ ಬಿಎಸ್‌ಪಿಗೆ ಬೆಂಬಲ ನೀಡುತ್ತಾರೆ ಎಂದರು. ಗಂಗಾಧರ್ ಬಹುಜನ ಮಾತನಾಡಿದರು. ಅಧ್ಯಕ್ಷ ಯೋಗೀಶ್, ಕುಮಾರ್ ಗೌರವ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.