ಹಾಸನ

ರೇಣುಕಾಚಾರ್ಯರ ಧರ್ಮ ಸೂತ್ರಗಳು ದಾರಿದೀಪ

Published On :

ಅರಸೀಕೆರೆ: ಸಕಲ ಜೀವಾತ್ಮರಿಗೂ ಲೇಸನ್ನೇ ಬಯಸಿದ ಜಗದ್ಗುರು ಶ್ರೀ ರೇಣುಕಾಚಾರ್ಯರು ಬೋಧಿಸಿದ ಧರ್ಮ ಸೂತ್ರಗಳು ಸಕಲರ ಬಾಳಿಗೆ ದಾರಿದೀಪವಾಗಿವೆ ಎಂದು ಬಾಳೆಹೊನ್ನೂರಿನ ರಂಬಾಪುರಿ ಮಠದ ಪೀಠಾಧ್ಯಕ್ಷ ಜಗದ್ಗುರು ಶ್ರೀಪ್ರಸನ್ನ ರೇಣುಕ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ  ತಿಳಿಸಿದರು.
ಪಟ್ಟಣದ ವೀರಶೈವ ಸಮುದಾಯ ಭವನದಲ್ಲಿ ಜಗದ್ಗುರು ಶ್ರೀರೇಣುಕಾಚಾರ್ಯರ ಯುಗಮಾನೋತ್ಸವ, ಇಷ್ಟಲಿಂಗ ಮಹಾಪೂಜೆ ಕಾರ್ಯಕ್ರಮದ ನಂತರ ಆಶೀರ್ವಚನ ನೀಡಿದ ಅವರು ಸಮಾಜದ ನಡುವೆ ಅಶಾಂತಿಯಿಂದ ತತ್ತರಿಸುತ್ತಿರುವ ಪ್ರಸ್ತುತ ದಿನಗಳಲ್ಲಿ ಸಾತ್ವಿಕ ಶಕ್ತಿಯನ್ನು ಬೆಳೆಸುವ ಅಗತ್ಯವಿದೆ ಎಂದರು.
ಶ್ರೀರೇಣುಕಾಚಾರ್ಯರು ಸಿದ್ಧಾಂತ ಶಿಖಾಮಣಿಯಲ್ಲಿ ಗುರು ಕರುಣಿಸಿರುವ ಇಷ್ಟಲಿಂಗ ಎಲ್ಲ ಅನಿಷ್ಟಗಳಿಗೆ ಪರಿಹಾರ ನೀಡುತ್ತದೆ. ವೀರಶೈವ ಸಮಾಜದ ಪ್ರತಿಯೊಬ್ಬರೂ ಕಡ್ಡಾಯವಾಗಿ ತಮ್ಮ ಕೊರಳಲ್ಲಿ ಇಷ್ಟಲಿಂಗವನ್ನು ಧರಿಸಲೇಬೇಕು ಎಂದು ಅವರು ತಿಳಿಸಿದರು.
ಯುಗಮಾನೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಕೆ.ವಿ.ನಿರ್ವಾಣಸ್ವಾಮಿ, ಉಪಾಧ್ಯಕ್ಷ ನಂಜುಂಡಶೆಟ್ಟಿ, ಕಾರ್ಯದರ್ಶಿ ಕೆ.ಪಿ. ಚಂದ್ರಶೇಖರ್, ಮಾಜಿ ಶಾಸಕ ಕೆ.ಪಿ. ಪ್ರಭುಕುಮಾರ್, ವೀರಶೈವ ಸಮಾಜದ ಎನ್.ಎಸ್. ಸಿದ್ದರಾಮಶೆಟ್ಟಿ, ಮುರುಂಡಿ ಶಿವಲಿಂಗಪ್ಪ, ಶಿವದೇವ್, ಎಂ.ಎಸ್. ಶಿವಕುಮಾರ್, ಕೆ.ಎನ್. ಶಿವಕುಮಾರ್, ಪ್ರವೀಣ್ ಕುಮಾರ್ ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.