ಹಾಸನ

ಸುಸಂಸ್ಕೃತ ಸಮಾಜಕ್ಕೆ ರೇಣುಕಾಚಾರ್ಯರೇ ಬುನಾದಿ'

Published On :

ಅರಸೀಕೆರೆ: ಮಾನವೀಯ ಮೌಲ್ಯಾಧಾರಿತ ತತ್ವ ಸಿದ್ಧಾಂತಗಳ ಮೂಲಕ ಸುಸಂಸ್ಕೃತ ಸಮಾಜದ ನಿರ್ಮಾಣ ಕಾರ್ಯಕ್ಕೆ ಭದ್ರ ಬುನಾದಿ ಹಾಕಿದ ಕೀರ್ತಿ ಶ್ರೀರೇಣುಕಾಚಾರ್ಯ ಭಗವತ್ಪಾದರಿಗೆ ಸಲ್ಲುತ್ತದೆ ಎಂದು ಬಾಳೆಹೊನ್ನೂರು ರಂಬಾಪುರಿ ಪೀಠದ ಶ್ರೀಪ್ರಸನ್ನ ರೇಣುಕಾ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.
ಪಟ್ಟಣದ ವೀರಶೈವ ಸಮುದಾಯ ಭವನದಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ 9ನೇ ವರ್ಷದ ಜಗದ್ಗುರು ರೇಣುಕಾಚಾರ್ಯ ಯುಗಮಾನೋತ್ಸವ ಹಾಗೂ ಧರ್ಮ ಜಾಗೃತಿ ಸಮ್ಮೇಳನದ ದಿವ್ಯಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ದೇವರು ಕೊಟ್ಟ ಅಮೂಲ್ಯ ಜೀವನವನ್ನು ಸಾರ್ಥಕ ಮಾಡಿಕೊಳ್ಳಲು ನಾವು ನಮ್ಮ ಧರ್ಮ ಸಂಸ್ಕತಿ ಸಂಪ್ರದಾಯ ಹಾಗೂ ಗುರು ಪರಂಪರೆಗಳನ್ನು ಅರಿತುಕೊಳ್ಳುವುದು ಮುಖ್ಯ ಎಂದರು.
ವೀರಶೈವ ಧರ್ಮಕ್ಕೆ ಕೀರ್ತಿ: ಸಕಲ ಜೀವಾತ್ಮಗಳಿಗೆ ಲೇಸನ್ನು ಬಯಸಿದ ವೀರಶೈವ ಧರ್ಮದ ಅಷ್ಟಾವರಣ ಪಂಚಾಚಾರ ಮತ್ತು ಷಟ್ ಸ್ಥಳಗಳನ್ನು ಹುಟ್ಟು ಹಾಕಿ ಜನರನ್ನು ಸಂಸ್ಕಾರಯುಕ್ತರನ್ನಾಗಿ ಮಾಡಿದ ಕೀರ್ತಿ ವೀರಶೈವ ಧರ್ಮಕ್ಕೆ ಸಲ್ಲಬೇಕು ಎಂದರು.
ಪ್ರತಿಪಾದನೆ: ಆಧುನಿಕತೆಯ ನಾಗಲೋಟದಲ್ಲಿ ಮನುಷ್ಯನಿಗೆ ಎಷ್ಟೇ ಬುದ್ಧಿ ವಿಕಾಸಗೊಂಡರೂ ತಮ್ಮ ಸ್ವಾರ್ಥಕ್ಕಾಗಿ  ಮೌಲ್ಯಗಳನ್ನೇ ಮರೆತಿದ್ದಾನೆ. ಧಾರ್ಮಿಕ ಕಾರ್ಯಗಳನ್ನು  ಹೆಚ್ಚೆಚ್ಚು ನಡೆಸುವ ಮೂಲಕ ಜನರಲ್ಲಿ ಧರ್ಮಪ್ರಜ್ಞೆ ಮೂಡಿಸುವ ಅಗತ್ಯವಿದೆ ಎಂದು ಅವರು ಪ್ರತಿಪಾದಿಸಿದರು.
ವಿಚ್ಛೇದನ ಪ್ರಕರಣ ಹೆಚ್ಚಾಗುತ್ತಿದೆ: ಸಮಾರಂಭ ಉದ್ಘಾಟಿಸಿದ ಶಾಸಕ ಕೆ.ಎಂ. ಶಿವಲಿಂಗೇಗೌಡ ಮಾತನಾಡಿ, ಅನೇಕ ಸಂಕಷ್ಟಗಳಿಗೆ ಭಗವಂತನಲ್ಲಿ ಮೊರೆ ಹೋಗುವ ಮೂಲಕ ಪರಿಹಾರ ಮಾರ್ಗ ಕಂಡು ಕೊಳ್ಳಲು ಸಾಧ್ಯವಾಗುತ್ತಿದೆ. ಆದರೆ ವಿದೇಶಗಳಲ್ಲಿ ಸುಖ, ಶಾಂತಿ, ನೆಮ್ಮದಿ ಜೀವನ ಮಾಯವಾಗಿದ್ದು, ಅಪರಾಧ ಮತ್ತು ವಿವಾಹ ವಿಚ್ಛೇದನ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ ಎಂದರು.
ವೇದಿಕೆಯಲ್ಲಿ ತಿಪಟೂರು ಷಡಾಕ್ಷರಿ ಮಠದ ಶ್ರೀರುದ್ರಮುನಿ ಸ್ವಾಮೀಜಿ, ಕುಪ್ಪೂರು ಗದ್ದಿಗೆ ಮಠದ ಡಾ. ಶ್ರೀಯತೀಶ್ವರ ಶಿವಾಚಾರ್ಯ ಸ್ವಾಮೀಜಿ, ಹೊನ್ನವಳ್ಳಿ ಕರಿ ಸಿದ್ದೇಶ್ವರ ಮಠದ ಶ್ರೀಶಿವಪ್ರಕಾಶ  ಶಿವಾಚಾರ್ಯ ಸ್ವಾಮೀಜಿ, ದೊಡ್ಡಗುಣಿ ಮಠದ ಶ್ರೀರೇವಣ್ಣಸಿದ್ದೇಶ್ವರ ಸ್ವಾಮೀಜಿ ನುಗ್ಗೇಹಳ್ಳಿ ಮಠದ ಶ್ರೀಮಹೇಶ್ವರ ಶಿವಾಚಾರ್ಯ ಸ್ವಾಮೀಜಿ ಆಶೀರ್ವಚನ ನೀಡಿದರು.
ಮಾಜಿ ಶಾಸಕ ಕೆ.ಪಿ. ಪ್ರಭುಕುಮಾರ್, ಜಿ.ಎಸ್. ಪರಮೇಶ್ವರಪ್ಪ, ಲೋಕಸಭಾ ಬಿಜೆಪಿ. ಅಭ್ಯರ್ಥಿ ವಿಜಯಶಂಕರ್, ಕಾಂಗ್ರೆಸ್ ಅಭ್ಯರ್ಥಿ ಹಾಗೂ ಅರಕಲಗೂಡು ಶಾಸಕ ಎ. ಮಂಜು  ಯುಗಮಾನೋತ್ಸವ ಸಮಿತಿ ಅಧ್ಯಕ್ಷ ಕೆ.ವಿ. ನಿರ್ವಾಣ ಸ್ವಾಮಿ, ಪುರಸಭೆ ಮಾಜಿ ಅಧ್ಯಕ್ಷ ಎನ್.ಎಸ್. ಸಿದ್ದರಾಮಶೆಟ್ಟಿ ಹಾಗೂ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.